Thursday, September 19, 2024

ಪ್ರಾಯೋಗಿಕ ಆವೃತ್ತಿ

”ಕೂಲಿಕಾರರ ಮಕ್ಕಳ ಆರೈಕೆಗೆ ಕೂಸಿನ ಮನೆ” ಸ್ಥಾಪನೆ: ಚಲುವರಾಯಸ್ವಾಮಿ

ಗ್ರಾಮೀಣ ಪ್ರದೇಶದಲ್ಲಿ ಮಹಿಳೆಯರಿಗೆ ಹೆಚ್ಚಿನ ಉದ್ಯೋಗಾವಕಾಶಗಳನ್ನು ಕಲ್ಪಿಸಲು ಮತ್ತು ನರೇಗಾ ಯೋಜನೆಯಡಿ ಮಹಿಳೆಯರು ಕೂಲಿಕೆಲಸ ನಿರ್ವಹಿಸಲು ಪೂರಕ ವಾತಾವರಣ ಹಾಗೂ ಸೌಕರ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಹಾಗೂ ಮಕ್ಕಳ ಆರೋಗ್ಯ ಪೌಷ್ಟಿಕತೆ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ ಕೂಸಿನ ಮನೆ ಪ್ರಾರಂಭಿಸಲಾಗಿದೆ ಎಂದು ಕೃಷಿ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ  ತಿಳಿಸಿದರು.

ಮಂಡ್ಯ ಜಿಲ್ಲೆಯ ವ್ಯಾಪ್ತಿಯಲ್ಲಿ 109 ಗ್ರಾಮ ಪಂಚಾಯಿತಿಯಲ್ಲಿ ಕೂಸಿನ ಮನೆ ಕೇಂದ್ರ ಸ್ಥಾಪಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ತಲಾ 1 ಲಕ್ಷದಂತೆ 1 ಕೋಟಿ, 9 ಲಕ್ಷ ಅನುದಾನನ್ನು ಬಿಡುಗಡೆ ಮಾಡಲಾಗಿದೆ ಎಂದರು.

ಪುಸ್ತುತ ಮೊದಲ ಹಂತದಲ್ಲಿ 109 ಗ್ರಾಮ ಪಂಚಾಯಿತಿಗಳ ಪೈಕಿ 21 ಗ್ರಾಮ ಪಂಚಾಯಿತಿಗಳಲ್ಲಿ ಕೂಸಿನ ಮನೆ ಉದ್ಘಾಟನೆಗೆ ಸಿದ್ಧವಾಗಿದ್ದು, ಸಾಂಕೇತಿವಾಗಿ ಇಂದು ಮಂಡ್ಯ ಜಿಲ್ಲೆಯ ಇಂಡವಾಳು ಗ್ರಾಮ ಪಂಚಾಯಿತಿಯ ಮೊಳೇಕೊಪ್ಪಲು ಗ್ರಾಮದ ಸರ್ಕಾರಿ ಕಿರಿಯ ಪ್ರಾರ್ಥಮಿಕ ಶಾಲೆಯ ಶಾಲಾ ಕಟ್ಟಡದಲ್ಲಿ ಪ್ರಾರಂಭಿಸಲಾಗುತ್ತಿದೆ.

ಗ್ರಾಮೀಣ ಪ್ರದೇಶದಲ್ಲಿ ಕೂಲಿಕಾರರು ಕೆಲಸ ನಿರ್ವಹಿಸುವ ಸಂಧರ್ಭದಲ್ಲಿ ಅವರ ಸುರಕ್ಷತೆ ಮತ್ತು ಪೋಷಣೆ ಅಗತ್ಯವಾಗಿದ್ದು, ಮಕ್ಕಳ ದೈಹಿಕ ಬೆಳವಣಿಗೆ ಮತ್ತು ಮಾನಸಿಕ ವಿಕಾಶದ ಹಿತದೃಷ್ಟಿಯಿಂದ ಈ ಒಂದು ಅರ್ಥ ಪೂರ್ಣವಾದ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗಿದೆ ಎಂದರು.

ಕೇರ್ ಟೇಕರ್ಸ್ ( ಶಿಶು ಆರೈಕೆದಾರರು) ಮಕ್ಕಳ ಪೋಷಣೆ ಮಾಡಲು ನರೇಗಾ ಯೋಜನೆಯ ದಿನಗೂಲಿ 316 ರೂಗಳಂತೆ ಕೂಲಿ ಪಾವತಿಸಲಾಗುತ್ತದೆ. ಹಾಗೂ 100 ದಿನ ಕೆಲಸ ಕೂಡ ಸಿಗುವುದರಿಂದ ಆರ್ಥಿಕವಾಗಿ ಮಹಿಳೆಯರು ಸಬಲರಾಗುತ್ತಾರೆ ಎಂದರು.

ಶಾಸಕರಾದ ಎ.ಬಿ ರಮೇಶ್ ಬಡ್ಡಿಸಿದ್ದೆಗೌಡ ರವರು ಮಾತನಾಡಿ ಕೂಸಿನ ಮನೆ ಕಾರ್ಯ ನಿರ್ವಹಣೆಯನ್ನು ಪರಿಶೀಲಿಸಲು ತಾಲ್ಲೂಕುವಾರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಬೇಕು ಎಂದರು.

ಇದೇ ಸಂದರ್ಭದಲ್ಲಿ ಶಾಸಕರಾದ ಪಿ . ರವಿಕುಮಾರ್, ಜಿಲ್ಲಾಧಿಕಾರಿ ಡಾ.ಕುಮಾರ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾದ ಎನ್.ಯತೀಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶೇಖ್ ತನ್ವೀರ್ ಆಸಿಫ್, ಉಪವಿಭಾಗಾಧಿಕಾರಿ ಶಿವಮೂರ್ತಿ, ತಾಲ್ಲೂಕು ತಹಶೀಲ್ದಾರ್ ಶಿವಕುಮಾರ್ ಬಿರಾದಾರ್ ಸೇರಿದಂತೆ ಇನ್ನಿತರ ಅಧಿಕಾರಿಗಳು
ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!