Tuesday, November 24, 2026

ಪ್ರಾಯೋಗಿಕ ಆವೃತ್ತಿ

ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲು : ಸಿಎಂ ಸಿದ್ದರಾಮಯ್ಯ

ಶಕ್ತಿ ಮತ್ತು ಗೃಹಲಕ್ಷ್ಮಿ ಯೋಜನೆ ಜಾರಿಯಾದ ಮೇಲೆ ತಲಾ ಆದಾಯದಲ್ಲಿ ಕರ್ನಾಟಕ ದೇಶದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಸುವರ್ಣ ಮಹೋತ್ಸವ ಹಾಗೂ ಮಕ್ಕಳ ದಿನಾಚರಣೆ, ವಿಶ್ವ ಹಿರಿಯ ನಾಗರೀಕರ ದಿನಾಚರಣೆ ಹಾಗೂ ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು,  ಐಸಿಡಿಎಸ್ ಕಾರ್ಯಕ್ರಮವನ್ನು ಪರಿಣಾಮಕಾರಿಯಾಗಿ ಜಾರಿ ಮಾಡಿರುವ ರಾಜ್ಯಗಳಲ್ಲಿ ದೇಶದಲ್ಲಿಯೇ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ ಎಂದರು.

ಶಕ್ತಿ ಯೋಜನೆ ಜಾರಿಯಾದ ಮೇಲೆ ಉದ್ಯೋಗಕ್ಕೆ ಹೋಗುವ ಮಹಿಳೆಯರ ಪಾಲು ಶೇ 23% ಇದ್ದರೆ, ಗ್ರಾಮೀಣ ಭಾಗದಲ್ಲಿ 21% ಹೆಚ್ಚಾಗಿದೆ. ಕೇಂದ್ರ ಸರ್ಕಾರ ಪ್ರಚಾರ ಗಿಟ್ಟಿಸಿಕೊಳ್ಳುವಷ್ಟು ಕೆಲಸವನ್ನು ಮಾಡುತ್ತಿಲ್ಲ. ಮುಂದಿನ ದಿನಗಳಲ್ಲಿ ಮಕ್ಕಳು, ತಾಯಂದಿರ ಅಪೌಷ್ಟಿಕತೆ ತೊಲಗಿಸಿ ತಾಯಿ ಮತ್ತು ಶಿಶು ಮರಣ ಪ್ರಮಾಣವನ್ನು ಕಡಿಮೆ ಮಾಡಲಾಗುವುದು ಎಂದರು.

ರಾಜ್ಯದ ಒಟ್ಟು 5,000 ಅಂಗನವಾಡಿ ಕೇಂದ್ರಗಳಲ್ಲಿ ಎಲ್‌ಕೆಜಿ , ಯುಕೆಜಿ ತರಗತಿಗಳನ್ನು ಪ್ರಾರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ತರಗತಿಗಳನ್ನು ಇನ್ನೂ ಹೆಚ್ಚಿನ ಕೇಂದ್ರಗಳಲ್ಲಿ ಪ್ರಾರಂಭಿಸಲಾಗುವುದು. ಮಹಿಳೆಯರ ಬದುಕಿನಲ್ಲಿ ಚೈತನ್ಯ ತುಂಬಲು ಹಾಗೂ ಮಕ್ಕಳು ಅಪೌಷ್ಠಿಕತೆಯಿಂದ ಬಳಲಬಾರದೆಂಬ ಸಾರ್ಥಕ ಉದ್ದೇಶವನ್ನು ಐಸಿಡಿಎಸ್ ಕಾರ್ಯಕ್ರಮ ಪೂರೈಸಿದೆ ಎಂದು ತಿಳಿಸಿದರು.

ವಿಶ್ವ ಹಿರಿಯನಾಗರಿಕರ ದಿನಾಚರಣೆಯ ಶುಭಾಶಯಗಳು. ಹಿರಿಯ ನಾಗರಿಕರು ನೆಮ್ಮದಿಯ ಹಾಗೂ ಗೌರವಯುತ ಜೀವನ ನಡೆಸುವಂತಾಗಬೇಕು, ಇದು ನಮ್ಮ ಸರ್ಕಾರದ ಆಶಯವೂ ಆಗಿದೆ. ಇದೇ ಸಂದರ್ಭದಲ್ಲಿ ಮಹಿಳೆಯರ ರಕ್ಷಣೆ ಹಾಗೂ ಭದ್ರತೆಯನ್ನು ಖಾತ್ರಿಪಡಿಸುವ ‘ಅಕ್ಕಾ’ ಪಡೆಯನ್ನು ಇಂದು ಸಂತೋಷದಿಂದ ಲೋಕಾರ್ಪಣೆಗೊಳಿಸಿದ್ದೇನೆ ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ