Friday, September 13, 2024

ಪ್ರಾಯೋಗಿಕ ಆವೃತ್ತಿ

ಪ್ರತಿಯೊಬ್ಬರೂ ಪರಿಸರದ ಸಂರಕ್ಷಣೆಯ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು

ಪ್ರತಿಯೊಬ್ಬರೂ ಪರಿಸರದ ಬಗ್ಗೆ ಕಾಳಜಿ ಹೊಂದಿ ಗಿಡ, ಮರಗಳನ್ನು ಬೆಳೆಸಿ ಉಳಿಸುವ ಪರಿಸರದ ಸಂರಕ್ಷಣೆಯ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎಂದು ಅನನ್ಯ ಹಾರ್ಟ್ ಸಂಸ್ಥೆಯ ಅಧ್ಯಕ್ಷ ಅನುಪಮಾ ಹೇಳಿದರು.

ತಾಲ್ಲೂಕಿನ ತಳಗವಾದಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಸಾಮಾಜಿಕ ಅರಣ್ಯ ವಿಭಾಗ ಮತ್ತು ವಲಯ ಅರಣ್ಯ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಅನನ್ಯ ಹಾರ್ಟ್ ಸಂಸ್ಥೆ, ಸುಧಾಮೂರ್ತಿ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಸಹಯೋಗದೊಂದಿಗೆ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಗಿಡ ನೆಟ್ಟು ಮಾತನಾಡಿದರು.

ನಮ್ಮ ಸುತ್ತಮುತ್ತಲಿನಲ್ಲಿ ಪರಿಸರ ಉತ್ತಮವಾಗಿದ್ದರೆ ಪ್ರಕೃತಿಯಲ್ಲಿ ಯಾವುದೇ ವಿಕೋಪ ಕಂಡುಬರುವುದಿಲ್ಲ. ಮನುಷ್ಯನ ಆರೋಗ್ಯ ಉಳಿವಿಗಾಗಿ ಪರಿಸರದ ರಕ್ಷಣೆ ಅತ್ಯಗತ್ಯವಾಗಿದ್ದು, ಈ ನಿಟ್ಟಿನಲ್ಲಿ ನಮ್ಮ ಪೂರ್ವಿಕರು ಮನೆ ಸುತ್ತಮುತ್ತ ಗಿಡ ಮರಗಳನ್ನು ಬೆಳೆಸಿ ಉತ್ತಮ ವಾತಾವರಣ ನಿರ್ಮಿಸಿಕೊಳ್ಳುತ್ತಿದ್ದರು. ಹೀಗಾಗಿ ಇಂದಿನಿಂದಲೇ ಅರಣ್ಯ ಉಳಿಸಲು ಕಾರ್ಯ ಪ್ರವೃತ್ತರಾಗಬೇಕು. ತಮ್ಮ ಮನೆಯ ಸುತ್ತಮುತ್ತ ಗಿಡಮರಗಳನ್ನು ಬೆಳೆಸಿ ಪರಿಸರ ಕಾಪಾಡಿಕೊಳ್ಳೋಣ ಎಂದು ಕರೆ ನೀಡಿದರು.

ಜಿಲ್ಲಾ ತಂಬಾಕು ನಿಯಂತ್ರಣದ ಕೋಶದ ಸಲಹೆಗಾರ ತಿಮ್ಮರಾಜು ಮಾತನಾಡಿ, ಎಲ್ಲರೂ ಪರಿಸರದ ಬಗ್ಗೆ ಜಾಗೃತರಾಗುವ ಜತೆಗೆ ಅದರ ಸಂರಕ್ಷಣೆಗೆ ಮುಂದಾಗಬೇಕು.ಪರಿಸರವು ದಿನೇ ದಿನೆ ನಶಿಸಿ ಹೋಗುತ್ತಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಮುಂದೊಂದು ದಿನ ಮನುಷ್ಯನ ಅಂತ್ಯವಾಗಲಿದೆ. ಹೀಗಾಗಿ ನಮ್ಮ ಮುಂದಿನ ಪೀಳಿಗೆಗೆ ಪರಿಸರವನ್ನು ಉಳಿಸಿ ಸಂರಕ್ಷಿಸಬೇಕಾದ ಜವಾಬ್ದಾರಿ ನಮ್ಮ ಮೇಲಿದೆ ಎಂದು ಹೇಳಿದರು.

ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಮಾತನಾಡಿದರು. ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಸಚಿನ್ ಡಿ.ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಉಪಪ್ರಾಂಶುಪಾಲ ಎಂ.ಕೆ.ಶ್ರೀನಿವಾಸ್, ಸಾಮಾಜಿಕ ಅರಣ್ಯ ವಿಭಾಗದ ಶಿವಕುಮಾರ್, ಕನ್ನಿಕಾ, ಸುಧಾಮೂರ್ತಿ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧ್ಯಕ್ಷ ವಸಂತಾ, ಅನನ್ಯ ಸ್ವಸಹಾಯ ಸಂಘದ ಪದಾಧಿಕಾರಿ ಶಿಲ್ಪಶ್ರೀ, ತಳಗವಾದಿ ಹನುಮಂತು, ಆಸ್ಪತ್ರೆಯ ಸಿಬ್ಬಂದಿಗಳಾದ ಶಿವಕುಮಾರ್, ಟಿ.ಎಸ್.ಅಭಿಷೇಕ್ ಗೌಡ, ಮಹೇಶ್, ಶೀಲಾ, ಶೋಭಾ ಹಾಗೂ ಅರಣ್ಯ ಸಿಬ್ಬಂದಿಗಳು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!