Thursday, September 19, 2024

ಪ್ರಾಯೋಗಿಕ ಆವೃತ್ತಿ

EWS ಮೀಸಲಾತಿ ಸಂವಿಧಾನಕ್ಕೆ ವಿರುದ್ಧವಾದದ್ದು : ಸಿದ್ದರಾಮಯ್ಯ

ಮೇಲ್ವರ್ಗದ ಬಡವರಿಗೆ ನೀಡಿರುವ ಶೇ.10 ಮೀಸಲಾತಿಯನ್ನು ಸುಪ್ರಿಂಕೋರ್ಟ್ ಎತ್ತಿ ಹಿಡಿದು ತೀರ್ಪು ನೀಡಿರುವುದು ಸಂವಿಧಾನಕ್ಕೆ ವಿರುದ್ಧವಾಗಿದ್ದು, ಇದನ್ನು ಒಪ್ಪಲು ಸಾಧ್ಯವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಕ್ಷಣದಲ್ಲೆ ಕಾಂಗ್ರೆಸ್ ಪಕ್ಷ ಈ ತೀರ್ಪನ್ನು ಸ್ವಾಗತಿಸಿತ್ತು, ಆದರೆ ಈ ತೀರ್ಪು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದ್ದು, ಈ ಬಗ್ಗೆ ಕಾಂಗ್ರೆಸ್ ಪುನರ್ ಪರಿಶೀಲನೆ ನಡೆಸಲಿದೆ ಎಂದರು.

ಕೇವಲ ಮೇಲ್ಜಾತಿಯ ಬಡವರಿಗೆ ಶೇ.10 ಮೀಸಲಾತಿ ನೀಡುವುದು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ, ಇದನ್ನು ನಾವು ಒಪ್ಪಲು ಸಾಧ್ಯವಿಲ್ಲ, ಆರ್ಥಿಕವಾಗಿ ದುರ್ಬಲರಾದವರು ಕೇವಲ ಮೇಲ್ಜಾತಿಗಳಲ್ಲಿ ಮಾತ್ರ ಇಲ್ಲ. ಈ ಬಗ್ಗೆ ಈಗಾಗಲೇ ತಮಿಳುನಾಡು ಸರ್ಕಾರ ಶೇ.10 ಮೀಸಲಾತಿಯನ್ನು ರಾಜ್ಯದಲ್ಲಿ ತಿರಸ್ಕರಿಸುವುದಾಗಿ ಹೇಳಿದೆ. ಆದ್ದರಿಂದ ಐಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಈ ಬಗ್ಗೆ ಪುನರ್ ಪರಿಶೀಲನೆ ನಡೆಸುವುದಾಗಿ ಹೇಳಿದ್ದಾರೆ ಎಂದು ಉತ್ತರಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!