Thursday, November 19, 2026

ಪ್ರಾಯೋಗಿಕ ಆವೃತ್ತಿ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಫಲಿತಾಂಶ ; 50,478 ವಿದ್ಯಾರ್ಥಿಗಳು ಉತ್ತೀರ್ಣ

2023ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ಮೇ 23 ರಿಂದ ಜೂನ್ 03ರ ವರೆಗೆ ನಡೆಸಲಾಗಿತ್ತು. ಇಂದು (ಮಂಗಳವಾರ) ಅದರ ಫಲಿತಾಂಶವು  ಪ್ರಕಟವಾಗಿದೆ.

ಪರೀಕ್ಷೆಗೆ ಹಾಜರಾದ ಒಟ್ಟು 1,57,756 ವಿದ್ಯಾರ್ಥಿಗಳ ಪೈಕಿ 50,478 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಕಾಲೇಜುಗಳಲ್ಲಿ ಫಲಿತಾಂಶ ಲಗತ್ತಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿತ್ತು. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಪೂರಕ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳು ಫಲಿತಾಂಶ ತಿಳಿಯಲು ವೆಬ್‌ಸೈಟ್ ಲಿಂಕ್‌ನಲ್ಲಿ ಪ್ರಕಟಿಸಲಾಗಿದೆ.

ಫಲಿತಾಂಶ ನೋಡಲು ಇಲ್ಲಿ ಕ್ಲಿಕ್ ಮಾಡಿ

ನೋಡಲು https://kseab.karnataka.gov.in/ ಅಥವಾ https://karresults.nic.in  http://karresults.nic.in ವೆಬ್ ಸೈಟ್ ಲಿಂಕ್ ಕ್ಲಿಕ್ ಮಾಡಿ ನೋಡಬಹುದಾಗಿದೆ. ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ಗೆ ಹೋಗಿ ಫಲಿತಾಂಶ ನೋಡಬಹುದು. ಫಲಿತಾಂಶದ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ