Wednesday, November 18, 2026

ಪ್ರಾಯೋಗಿಕ ಆವೃತ್ತಿ

ಅಬಕಾರಿ ಪರವಾನಗಿ ; ಮಧ್ಯವರ್ತಿಗಳಿಂದ ಮೋಸ ಹೋಗಬೇಡಿ: ನಾಗಸೇನ

ಅಬಕಾರಿ ಪರವಾನಗಿ ಕೊಡಿಸುವುದಾಗಿ ಹೇಳಿ ಮಧ್ಯವರ್ತಿಗಳು ಹಲವರನ್ನು ವಂಚಿಸುತ್ತಿರುವ ಪ್ರಕರಣಗಳು ಕಂಡು ಬರುತ್ತಿರುವುದರಿಂದ ಮಧ್ಯವರ್ತಿಗಳ ಬಗ್ಗೆ ಎಚ್ಚರಿಕೆಯಿಂದ ಇರಬೇಕು ಎಂದು ಮಂಡ್ಯ ಜಿಲ್ಲಾ ಅಬಕಾರಿ ಉಪ ಆಯುಕ್ತ ಆರ್ .ನಾಗಸೇನ ತಿಳಿಸಿದರು.

ಮಂಡ್ಯನಗರದ ಸ್ಪೋರ್ಟ್ಸ್ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾ ಮದ್ಯ ಮಾರಾಟಗಾರರ ಸಂಘದ ವತಿಯಿಂದ ಅಬಕಾರಿ ಜಾಗೃತಿ ಸಭಾ ಕಾರ್ಯಕ್ರಮದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.

ಹೊಸದಾಗಿ ತೆರೆಯುವ ಮದ್ಯ ಮಳಿಗೆಗಳು ಹಾಗೂ ಅಬಕಾರಿ ಇಲಾಖೆಯಲ್ಲಿ ಕೆಲಸ ಆಗಬೇಕಿರುವುದನ್ನು ಮುಂದಿಟ್ಟುಕೊಂಡು, ಕೆಲವು ಮಧ್ಯವರ್ತಿಗಳು ಹಣ ಪಡೆದು ಕೆಲಸ ಮಾಡಿಸುವುದಾಗಿ ಹೇಳಿ ವಂಚಿಸುತ್ತಿದ್ದಾರೆ. ಇದಕ್ಕೆ ಕಿವಿಗೊಡಬೇಡಿ. ಇಲಾಖೆಯಲ್ಲಿ ಕಾನೂನಾತ್ಮಕವಾಗಿಯೇ ಕೆಲಸ ನಡೆಯುತ್ತದೆ ಎಂಬುದನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಸಲಹೆ ನೀಡಿದರು.

ಸಭೆಯಲ್ಲಿ ಮಧ್ಯವರ್ತಿಗಳ ಮಾರಾಟಗಾರರು ಅಂಗಡಿಗಳನ್ನು ಯಾವ ಸಮಯದಲ್ಲಿ ಮುಚ್ಚುವುದು ಮತ್ತು ತೆರೆಯುವುದರ ಬಗ್ಗೆ ಅರಿವಿರಬೇಕು. ಅದನ್ನು ತಪ್ಪದೇ ಪಾಲಿಸಬೇಕು. ವಿನಾಕಾರಣ ಪೊಲೀಸರು ಬಂದು ತೊಂದರೆ ಕೊಟ್ಟರೆ ನನ್ನ ಗಮನಕ್ಕೆ ತಂದರೆ ಅದನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಗಮನಕ್ಕೆ ಮಾಹಿತಿ ನೀಡಿ ಸಮಸ್ಯೆ ಬಗೆಹರಿಸಿಕೊಡುತ್ತೇನೆ ಎಂದರು.

ಕಾನೂನಾತ್ಮಕವಾಗಿ ಸಮಸ್ಯೆಗಳ ಬಗ್ಗೆ ಈಗಾಗಲೇ ಮಾಹಿತಿ ಬಂದಿದೆ. ವೈನ್ಸ್‌ ಸ್ಟೋರ್ ಗಳಲ್ಲಿ ಪ್ಲಾಸ್ಟಿಕ್ ಗ್ಲಾಸ್ ಸೇರಿದಂತೆ ಇತರೆ ಪ್ಲಾಸ್ಟಿಕ್ ಪದಾರ್ಥಗಳನ್ನು ಬಳಸದೆ ಪ್ಲಾಸ್ಟಿಕ್ ಬದಲಿಗೆ ಬೇರೆ ವಸ್ತುಗಳ ಮೂಲಕ ಬಳಸಿಕೊಳ್ಳುವಂತೆ ಅರಿವು ಮೂಡಿಸುವ ಕೆಲಸ ಮಾಡುತ್ತೇವೆ. ಒಟ್ಟಿನಲ್ಲಿ ಪರಿಸರ ಸಂರಕ್ಷಣೆಗೂ ಒತ್ತು ನೀಡಬೇಕು ಎಂದರು.

ಮದ್ಯಮಾರಾಟಗಾರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎಚ್.ಪಿ.ಮಹೇಶ್ ಮಾತನಾಡಿ, ಸಂಘದ ಸಮಸ್ಯೆಗಳು ಏನಾದರೂ ಇದ್ದರೆ ಎಲ್ಲರೂ ಅಬಕಾರಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತರೋಣ, ವಿನಾಕಾರಣ ತೊಂದರೆ ಕೊಡುವುದನ್ನು ತಪ್ಪಿಸಲು ಕಾನೂನಾತ್ಮವಾಗಿಯೇ ಬಗೆ ಹರಿಸುವ ಕೆಲಸ ಮಾಡೋಣ ಎಂದರು. ಸಭೆಯಲ್ಲಿದ್ದ ಮದ್ಯ ಮಾರಾಟಗಾರರು ಹಲವು ಸಮಸ್ಯೆಗಳನ್ನು ಅಬಕಾರಿ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದರು.

ಕಾರ್ಯಕ್ರಮದಲ್ಲಿ ಅಬಕಾರಿ ಉಪ ಅಧೀಕ್ಷಕರಾದ ರಾಧಾಮಣಿ, ಸಂಘದ ಕಾರ್ಯದರ್ಶಿ ಪ್ರವೀಣ್ ಕುಮಾರ್, ಮರೀಗೌಡ, ದಿನೇಶ್, ಗೋವಿಂದ್ ರಾಜು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ