Thursday, September 19, 2024

ಪ್ರಾಯೋಗಿಕ ಆವೃತ್ತಿ

ರಾಜ್ಯದ ಹಲವೆಡೆ ಸಾಧಾರಣ ಮಳೆ: ಕರಾವಳಿ ಭಾಗದಲ್ಲಿ ಭಾರೀ ಮಳೆ ನಿರೀಕ್ಷೆ

ಮುಂದಿನ 24ಗಂಟೆಗಳಲ್ಲಿ ರಾಜ್ಯದ ಹಲವೆಡೆ ಸಾಧಾರಣ ಮಳೆಯಾವ  ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯಿದೆ. ಈಗಾಗಲೇ ಸುರಲ್ಕತ್‌ ಸೇರಿದಂತೆ ಹಲವು ಕಡೆ ಬೆಳಿಗ್ಗೆಯಿಂದಲೇ ಮಳೆ ಸುರಿಯುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಬೆಂಗಳೂರು ಹವಾಮಾನ ಕೇಂದ್ರ ಮಾಹಿತಿ ನೀಡಿದೆ.

ಕೊಡಗು, ಚಿಕ್ಕಮಗಳೂರು, ಬೆಳಗಾವಿ, ಬೀದರ್‌, ಕಲಬುರಗಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸೂಚನೆಯನ್ನೂ ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಶನಿವಾರವೂ ಕರ್ನಾಟಕದ ಹಲವು ಕಡೆ ಉತ್ತಮ ಮಳೆಯಾದ ವರದಿಗಳು ಬಂದಿದ್ದು, ಕೊಡಗಿನ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಕಾವೇರಿ ನದಿ ನೀರಿನ ಪ್ರಮಾಣದಲ್ಲಿ ಏರಿಕೆ ಕಂಡುಬಂದಿದೆ.

ಅಕ್ಟೋಬರ್‌ 2ರ ಸೋಮವಾರ ಬೆಳಿಗ್ಗೆವರೆಗೂ ಕರಾವಳಿಯ ಬಹುತೇಕ ಕಡೆಗಳಲ್ಲಿ ಮಳೆಯಾಗಲಿದೆ. ಅದರಲ್ಲೂ ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆ ಭಾರೀ ಮಳೆಯಾಗಲಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಕಂಡುಬಂದಿದೆ.

ಉತ್ತರ ಒಳನಾಡಿನ ಬೆಳಗಾವಿ, ಬೀದರ್‌, ಕಲಬುರಗಿ ಜಿಲ್ಲೆಯಲ್ಲೂ ಮಳೆ ಸುರಿಸುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಕುರಿತು ಹವಾಮಾನ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ನೀಡಿದೆ.

“ಮುಂದಿನ ನಲವತ್ತೆಂಟು ಗಂಟೆಗಳಲ್ಲೂ ಕರಾವಳಿ ಕರ್ನಾಟಕದ ಎಲ್ಲ ಜಿಲ್ಲೆಗಳ ಒಂದೆರಡು ಕಡೆ ಭಾರೀ ಮಳೆಯಾಗಬಹುದು. ಕರ್ನಾಟಕದ ಕೆಲವು ಕಡೆಗಳಲ್ಲಿ ಮಿಂಚು ಸಹಿತ ಗುಡುಗಿನ ವಾತಾವರಣವೂ ಇರಲಿದೆ. ಬಿರುಗಾಳಿಯೂ ಗಂಟೆಗೆ 30-40 ರಿಂದ ಕಿ.ಮಿ ವೇಗದಲ್ಲಿ ಸಂಚರಿಸಲಿದೆ” ಎಂದು ಹಮಾಮಾನ ಇಲಾಖೆ ತನ್ನ ದೈನಂದಿನ ವರದಿಯಲ್ಲಿ ತಿಳಿಸಿದೆ.

“ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಚಂಡಮಾರುತದ ವಾತಾವರಣ ಇರಲಿದೆ. ಗಾಳಿಯು ಗಂಟೆಗೆ 45-55 ರಿಂದ 65 ಕಿಮೀ ವೇಗದಲ್ಲಿ ಸಂಚರಿಸುವ ಸಾಧ್ಯತೆ ಹೆಚ್ಚಾಗಿದೆ. ಇದರಿಂದ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯುವುದು ಸೂಕ್ತವಲ್ಲ” ಎಂದು ಸೂಚನೆ ನೀಡಿದೆ.

ಬೆಂಗಳೂರಿನಲ್ಲೂ ಭಾನುವಾರ ಹಾಗೂ ಸೋಮವಾರ ಸಾಧಾರಣ ಮಳೆ ಇರಲಿದೆ. ಬೆಂಗಳೂರು ಮಹಾನಗರ ಸೇರಿದಂತೆ ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶದಲ್ಲಿಯೂ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಕಂಡುಬರಲಿದೆ. ಒಂದೆರಡು ಕಡೆ ಹಗುರದಿಂದ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯೂ ಇದೆ. ಕೆಲವೊಮ್ಮೆ ಬಲವಾದ ಮೇಲ್ಮೈ ಗಾಳಿಯೂ ಬೆಂಗಳೂರು ನಗರದಲ್ಲಿ ಬೀಸಲಿದೆ. ದಿನದ ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್‌ ಹಾಗೂ ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್‌ನಷ್ಟು ದಾಖಲಾಗಲಿದೆ.

ಕರ್ನಾಟಕದ ಹಲವು ಕಡೆ ಶನಿವಾರವೂ ಭಾರೀ ಮಳೆ ಸುರಿದ ವರದಿಯಾಗಿದ್ದು, ಚಿಕ್ಕಮಗಳೂರು ಜಿಲ್ಲೆ ಕೊಟ್ಟಿಗೆಹಾರದಲ್ಲಿ ಅತ್ಯಧಿಕ 11 ಸೆ.ಮೀನಷ್ಟು ಮಳೆ ದಾಖಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಬೇಲಿಕೇರಿ, ಕ್ಯಾಸಲ್‌ ರಾಕ್‌ನಲ್ಲಿ ತಲಾ 10 ಸೆ.ಮೀ, ದಕ್ಷಿಣ ಕನ್ನಡದ ಉಪ್ಪಿನಂಗಡಿಯಲ್ಲಿ 8 ಸೆ.ಮೀ, ಕಾರವಾರ ಹಾಗೂ ಗೋಕರ್ಣದಲ್ಲಿ ತಲಾ ಏಳು ಸೆ.ಮೀ ಮಳೆಯಾದ ವರದಿಗಳು ಬಂದಿವೆ.

ಬೀದರ್‌ ಜಿಲ್ಲೆಯ ಔರಾದ್‌, ಹುಮನಾಬಾದ್‌, ನಿರ್ಣಾ, ಭಾಲ್ಕಿ, ಮಂಠಾಳ, ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ, ಪುತ್ತೂರು, ಬೆಳ್ತಂಗಡಿ, ಧರ್ಮಸ್ಥಳ, ಮಂಗಳೂರು ವಿಮಾನ ನಿಲ್ದಾಣ, ಪಣಂಬೂರು, ಮುಲ್ಕಿ, ಉಡುಪಿ ಜಿಲ್ಲೆಯ ಕೊಲ್ಲೂರು, ಸಿದ್ದಾಪುರ, ಕೋಟಾ, ಕುಂದಾಪುರ, ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ, ಜಗಲಬೆಟ್‌, ಮಂಕಿ. ಮಂಚಿಕೇರಿ, ಕುಮಟಾ, ಜೋಯಿಡಾ, ಶಿರಾಲಿ, ಹೊನ್ನಾವರ, ಯಲ್ಲಾಪುರ, ಗೇರುಸೊಪ್ಪ, ಚಿಕ್ಕಮಗಳೂರು ಜಿಲ್ಲೆಯ ಕಮ್ಮರಡಿ, ಕಳಸ, ಶೃಂಗೇರಿ, ಚಿಕ್ಕಮಗಳೂರು, ಕೊಪ್ಪ, ಶಿವಮೊಗ್ಗ ಜಿಲ್ಲೆಯ ಕೋಣಂದೂರು, ಹುಂಚದಕಟ್ಟೆ, ಲಿಂಗನಮಕ್ಕಿ, ತಾಳಗುಪ್ಪದಲ್ಲಿ ಮಳೆಯಾಗಿದೆ. ಬೆಳಗಾವಿ ಜಿಲ್ಲೆಯ ಲೋಂಡಾ, ಗುಂಜ್‌, ಬೆಳಗಾವಿ ವಿಮಾನ ನಿಲ್ದಾಣ, ಬೆಳಗಾವಿ ನಗರ, ಕಲಬುರಗಿ ಜಿಲ್ಲೆಯ ಅಳಂದ, ಅಡಕಿ, ಯಡ್ರಾಮಿ, ಕಮಲಾಪುರ, ಅಫಜಲಪುರದಲ್ಲಿ ಮಳೆ ಸುರಿದಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!