Friday, September 20, 2024

ಪ್ರಾಯೋಗಿಕ ಆವೃತ್ತಿ

ಮೈಕ್ರೋ ಫೈನಾನ್ಸ್ ಗಳಿಂದ ಮಹಿಳೆಯರ ಶೋಷಣೆ: ಜನವಾದಿ ಸಂಘಟನೆ ಪ್ರತಿಭಟನೆ

ಮಂಡ್ಯ ಜಿಲ್ಲೆ ವಿವಿಧೆಡೆ ಗ್ರಾಮೀಣ ಪ್ರದೇಶದ ಮಹಿಳೆಯರನ್ನೇ ಗುರಿಯಾಟ್ಟುಕೊಂಡು ಮೈಕ್ರೋ ಫೈನಾನ್ಸ್ ಸಂಸ್ಥೆಗಳು ನಾಯಿ ಕೊಡೆಗಳಂತೆ ತಲೆಯೆತ್ತಿದ್ದು, ಹೆಚ್ಚಿನ ಬಡ್ಡಿ ದರದಲ್ಲಿ ಸಾಲ ಕೊಟ್ಟು ಮಹಿಳೆಯರನ್ನು ಮತ್ತು ಅವರ ಕುಟುಂಬಗಳನ್ನು ಆರ್ಥಿಕ ಸಂಕಷ್ಟಕ್ಕೆ ಗುರಿಯಾಗಿಸುತ್ತಿದ್ದು, ಇದನ್ನು ತಡೆಗಟ್ಟಲು ಸರ್ಕಾರಗಳು ಗಮನ ಹರಿಸಬೇಕೆಂದು ಆಗ್ರಹಿಸಿ ಜನವಾದಿ ಮಹಿಳಾ ಸಂಘಟನೆಯು ಮಂಡ್ಯದಲ್ಲಿ ಪ್ರತಿಭಟನೆ ನಡೆಸಿತು.

ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನಾ ಧರಣಿ ನಡೆಸಿ, ದೌರ್ಜನ್ಯದ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ ಜಿಲ್ಲಾಧಿಕಾರಿಗಳ ಮೂಲಕ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ಗವರ್ನರ್ ಅವರಿಗೆ ಮನವಿ ಪತ್ರ ರವಾನಿಸಿದರು.

ನಿಯಂತ್ರಿತ ಬ್ಯಾಂಕಿಂಗ್ ವಲಯದ ವ್ಯಾಪ್ತಿಗೆ ತರಬೇಕು

ಜನವಾದಿ ಸಂಘಟನೆಯ ರಾಜ್ಯ ಪ್ರಧಾನ ಕಾರ್ಯದರ್ಶಿ ದೇವಿ ಮಾತನಾಡಿ, ಮೈಕ್ರೋ ಫೈನಾನ್ಸ್ ಸಂಸ್ಥೆಗಳನ್ನು ನಿಯಂತ್ರಿತ ಬ್ಯಾಂಕಿಂಗ್ ವಲಯದ ವ್ಯಾಪ್ತಿಗೆ ತರಬೇಕು, ಮಹಿಳೆಯರು ಮತ್ತು ಮಹಿಳಾ ಸ್ವಸಹಾಯ ಗುಂಪುಗಳನ್ನು ಅನಿಯಂತ್ರಿತ ಮೈಕ್ರೋ ಫೈನಾನ್ಸ್ ಗಳ ದೌರ್ಜನ್ಯದಿಂದ ಮುಕ್ತಗೊಳಿಸಬೇಕೆಂದು ಆಗ್ರಹಿಸಿದರು.

ಸಾಲ ನೀಡಿಕೆ ಆದ್ಯತಾವಲಯದ ವ್ಯಾಪ್ತಿಯಿಂದ ಬ್ಯಾಂಕೇತರ ಮೈಕ್ರೋ ಫೈನಾನ್ಸ್ ಸಂಸ್ಥೆಗಳನ್ನು ತೆಗೆದು ಹಾಕಬೇಕು, ಖಾಸಗಿ ಸಾಲದಾತರು ವಿಧಿಸುವ ಬಡ್ಡಿ ದರವನ್ನು ಮಿತಿಗೊಳಿಸಬೇಕು, ಸಾರ್ವಜನಿಕ ವಲಯದ ಬ್ಯಾಂಕುಗಳು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳು ಸಹಕಾರಿ ಬ್ಯಾಂಕ್ ಗಳು ಮತ್ತು ಸಹಕಾರಿ ಸಂಘಗಳು ಆದ್ಯತಾ ವಲಯದ ಸಾಲ ನೀಡಿಕೆಯನ್ನು ಹೆಚ್ಚಿಸುವಂತೆ ಮತ್ತು ಬಡ್ಡಿ ದರವನ್ನು ಮಿತಿಯಲ್ಲಿ ಇರಿಸುವಂತೆ ಆದೇಶ ನೀಡಬೇಕೆಂದು ಒತ್ತಾಯಿಸಿದರು.

ಕೋವಿಡ್ ಸಂದರ್ಭದಲ್ಲಿ ನಿರುದ್ಯೋಗದ ಹಿನ್ನೆಲೆಯಲ್ಲಿ ಮಹಿಳಾ ಸ್ವಸಹಾಯ ಗುಂಪುಗಳು ಮೈಕ್ರೋ ಫೈನಾನ್ಸ್ ಗಳು ಮತ್ತು ಕಿರು ಬ್ಯಾಂಕ್ ಗಳಿಂದ ಪಡೆದುಕೊಂಡಿರುವ ಸಾಲದ ಮೇಲಿನ ಬಡ್ಡಿಯನ್ನು ಪೂರ್ತಿಯಾಗಿ ಮನ್ನಾ ಮಾಡಬೇಕು, ಆದ್ಯತಾ ವಲಯದ ಎಲ್ಲಾ ವಿಭಾಗಗಳಲ್ಲೂ ಶೇ.30ರಷ್ಟು ಸಾಲವನ್ನು ಮಹಿಳೆಯರಿಗೆ ನೀಡಬೇಕು ಒತ್ತಾಯಿಸಿದರು.

ಈ ಬಗ್ಗೆ ಒಕ್ಕೂಟ ಸರ್ಕಾರವು ಕಾರ್ಯ ನೀತಿಯನ್ನು ರೂಪಿಸಬೇಕಿದೆ, ಸರ್ಕಾರದ ಬೇರೆ ಬೇರೆ ಯೋಜನೆಗಳಲ್ಲಿ ಶೇ.30 ರಷ್ಟು ಫಲಾನುಭವಿಗಳು ಮಹಿಳೆಯರೇ ಆಗಿರಬೇಕು ಎಂದು ಈಗಾಗಲೇ ಇರುವ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಮಾರಾಟ ಅನೌಪಚಾರಿಕ ವಲಯ ಮತ್ತು ಗೃಹ ಆಧಾರಿತ ವಹಿವಾಟಿನಲ್ಲಿ ತೊಡಗಿರುವ ಮಹಿಳೆಯರನ್ನು ಈ ವ್ಯಾಖ್ಯಾನದಲ್ಲಿ ಸೇರಿಸಿಕೊಳ್ಳಬೇಕೆಂದು ಒತ್ತಾಯಿಸಿದರು

ಜನವಾದಿ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಲತಾ, ಕಾರ್ಯದರ್ಶಿ ಸುಶೀಲ, ಖಜಾಂಚಿ ರಾಣಿ, ಉಪಾಧ್ಯಕ್ಷೆ ಶೋಭಾ ಸದಸ್ಯರಾದ ಎಂ.ಕೆ ಪ್ರಭ, ಜಯಲಕ್ಷ್ಮಮ್ಮ ಮತ್ತಿತರು ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!