Thursday, September 19, 2024

ಪ್ರಾಯೋಗಿಕ ಆವೃತ್ತಿ

ರಾಜ್ಯ ಶೋಷಿತರ ಜಾಗೃತಿ ಸಮಾವೇಶಕ್ಕೆ ಮಂಡ್ಯದಿಂದ 10 ಸಾವಿರ ಜನ: ಸುರೇಶ್

ಕರ್ನಾಟಕ ಶೋಷಿತ ಸಮುದಾಯಗಳ ಮಹಾ ಒಕ್ಕೂಟ (ದಲಿತ, ಹಿಂದುಳಿದ, ಆದಿವಾಸಿ, ಅಲೆಮಾರಿ, ಅಲ್ಪಸಂಖ್ಯಾತ ಮತ್ತು ಜನಪರ ಸಂಘಟನೆಗಳು) ಕರ್ನಾಟಕ ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟ (ರಿ.) ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ, ಸಾಮಾಜಿಕ ನ್ಯಾಯ, ಸಹಬಾಳ್ವೆ ಮತ್ತು ಸ್ವಾಭಿಮಾನದ ಸಂರಕ್ಷಣೆಗಾಗಿ ಚಿತ್ರದುರ್ಗದಲ್ಲಿ ನಡೆಯುವ ಶೋಷಿತರ ರಾಜ್ಯ ಸಮಾವೇಶಕ್ಕೆ ಮಂಡ್ಯ ಜಿಲ್ಲೆಯಾದ್ಯಂತ 10 ಸಾವಿರ ಜನ ತೆರಳಲಿದ್ದಾರೆಂದು ಮಂಡ್ಯ ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಸುರೇಶ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ.28ರ ಭಾನುವಾರದಂದು ಚಿತ್ರದುರ್ಗದ ಶ್ರೀಬಸವ ಮೂರ್ತಿ ಮಾದಾರ ಚನ್ನಯ್ಯ ಪೀಠದ ಪಕ್ಕದ ಮೈದಾನ (ಬೆಂಗಳೂರು ಪುಣೆ ಹಳೇ ರಾಷ್ಟ್ರೀಯ ಹೆದ್ದಾರಿ-48)ದಲ್ಲಿ ಸಮಾವೇಶವು ನಡೆಯಲಿದೆ ಎಂದು ತಿಳಿಸಿದದರು.

ಈ ಸಮಾವೇಶವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸುವರು. ಎಲ್ಲಾ ಶೋಷಿತ ಸಮುದಾಯಗಳಿ ಸಚಿವರು, ಮುಖಂಡರು ಭಾಗವಹಿಸುವ ಎಂದ ಅವರು, ಹೆಚ್. ಕಾಂತರಾಜು ವರದಿಯನ್ನು ರಾಜ್ಯ ಸರ್ಕಾರವು ಈ ಕೂಡಲೇ ಸ್ವೀಕರಿಸಿ, ಸಾರ್ವಜನಿಕರ ಚರ್ಚೆಗೆ ಬಿಟ್ಟು, ಜಾರಿಗೊಳಿಸಬೇಕು. ವರದಿಯನ್ನು ಅಂಗೀಕರಿಸಿ ಕೇಂದ್ರ ಸರ್ಕಾರವು ಜಾತಿವಾರು ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆ ಮಾಡಿಸಬೇಕು. EWS ಶೇ.10% ಮೀಸಲಾತಿಯನ್ನು ರದ್ದು ಪಡಿಸುವಂತೆ ಒತ್ತಾಸಲಾಗುವುದು ಎಂದರು.

ರಾಜ್ಯ ಹಿಂದುಳಿದ ಜಾತಿಗಳ ಒಕ್ಕೂಟದ ಮುಖಂಡ ನಾಗರಾಜು ಮಾತನಾಡಿ, ಮಹಿಳಾ ಮೀಸಲಾತಿ ಕಾಯಿದೆಯನ್ನು ಕೂಡಲೇ ಜಾರಿ ಮಾಡಬೇಕು. ರಾಜಕೀಯ ಕ್ಷೇತ್ರದಲ್ಲೂ Sc, St,obc ಮತ್ತು ಅಲ್ಪ ಸಂಖ್ಯಾತರ ಮಹಿಳೆಯರಿಗೆ ಮೀಸಲಾತಿಯನ್ನು ಕಲ್ಪಿಸಬೇಕು. ರಾಜಕೀಯ ಮೀಸಲಾತಿಯನ್ನು ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಹಿಂದುಳಿದ ಜಾತಿಗಳಿಗೆ ಮತ್ತು ಅಲ್ಪ ಸಂಖ್ಯಾತರಿಗೆ ಅವಕಾಶ ಕಲ್ಪಿಸಬೇಕು. Sc,St,obc ಮತ್ತು ಅಲ್ಪ ಸಂಖ್ಯಾತರ ಜನಸಂಖ್ಯೆಗೆ ಅನುಗುಣವಾಗಿ ಶೇಕಡವಾರು ಪ್ರಮಾಣದಲ್ಲಿ ಮೀಸಲಾತಿ ಹೆಚ್ಚಿಸಬೇಕು. ಖಾಸಗಿ ಕ್ಷೇತ್ರಕ್ಕೂ ಮೀಸಲಾತಿಯನ್ನು ವಿಸ್ತರಿಸಬೇಕು. ಮುಸ್ಲಿಂ ಸಮುದಾಯದ ಸಾಮಾಜಿಕ ಮತ್ತು ಶೈಕ್ಷಣಿಕ, ಆರ್ಥಿಕ ಸಬಲೀಕರಣಕ್ಕಾಗಿ ಸರ್ವೋಚ್ಛ ನ್ಯಾಯಾಲಯದ ನ್ಯಾಯಮೂರ್ತಿ ರಾಜೇಂದ್ರ ಸಾಚಾರ್ ರವರು ಸಲ್ಲಿಸಿರುವ ವರದಿಯನ್ನು ಕೂಡಲೇ ಅನುಷ್ಠಾನಗೊಳಿಸಬೇಕು ಎಂದು ಆಗ್ರಹಿಸಲಾಗುವುದು ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೂ ಈ ನಮ್ಮ ಹಕ್ಕೊತ್ತಾಯಗಳನ್ನು ಶೀಘ್ರವಾಗಿ ಈಡೇರಿಸುಂತೆ ಒತ್ತಾಯಿಸಲು ಪರಿಶಿಷ್ಟ ಜಾತಿ ‘ ಮತ್ತು ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ, ಅಲ್ಪ ಸಂಖ್ಯಾತ ಮತ್ತು ಅಸಂಘಟಿತ ಶೋಷಿತ ಸಮುದಾಯಗಳು ಸಂಘಟಿತರಾಗಲೇಬೇಕಾದ ಅನಿವಾರ್ಯತೆ ಇದೆ. ಎಲ್ಲಾ ಶೋಷಿತ ಸಮುದಾಯಗಳಿಗೆ “ಮಾಡು ಇಲ್ಲವೆ ಮಡಿ” ಎಂಬ ಸ್ಥಿತಿ ಉಂಟಾಗಿದೆ. ನಮ್ಮ ಹಕ್ಕುಗಳ ರಕ್ಷಣೆಗಾಗಿ ಐಕ್ಯತೆಯಿಂದ ಜಾಗೃತಿಹೊಂದಿ ಹೋರಾಟ ರೂಪಿಸಬೇಕಾಗಿದೆ. ಈ ಹಿನ್ನಲೆಯಲ್ಲಿ ನಾಡಿನಲ್ಲಿ ಒಂದು ಐತಿಹಾಸಿಕ ಶೋಷಿತ ಸಮುದಾಯಗಳ ಜಾಗೃತಿಗಾಗಿ ರಾಜ್ಯ ಸಮಾವೇಶವನ್ನು ರೂಪಿಸಲು ನಿರ್ಧರಿಸಲಾಗಿದೆ. ಆದ್ದರಿಂದ ರಾಜ್ಯಾದ್ಯಂತ ಶೋಷಿತ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದರು.

ಗೋಷ್ಠಿಯಲ್ಲಿ ನಗರಸಭೆ ಮಾಜಿ ಅಧ್ಯಕ್ಷೆ ವಿಜಯಲಕ್ಷ್ಮಿ ರಘುನಂದನ್, ಶ್ರೀನಿವಾಸ್ ಮತ್ತಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!