ಮಂಡ್ಯ ತಾಲ್ಲೂಕಿನ ಹಳೇ ಬೂದನೂರು ಬಳಿ ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿಯ ಕಣ್ಣುಗಳನ್ನು ದಾನ ಮಾಡುವ ಮೂಲಕ ಕುಟುಂಬದವರು ನೋವಿನಲ್ಲೂ ಮಾನವೀಯತೆ ಮೆರೆದಿದ್ದಾರೆ.
ಭಾನುವಾರ ರಾತ್ರಿ ಗ್ರಾಮದ ವಿಶ್ವೇಶ್ವರಯ್ಯ ನಾಲೆ ಬಳಿಯ ಬೆಂಗಳೂರು- ಮೈಸೂರು ರಾಷ್ಟ್ರೀಯ ಹೆದ್ದಾರಿಯ
ಕಾರು ಡಿಕ್ಕಿ ಹೊಡೆದು ರಸ್ತೆ ದಾಟಲು ನಿಂತಿದ್ದ ಗ್ರಾಮದ ಕೀರುಳ್ಳಿ ಸಿದ್ದಪ್ಪ (50) ಎಂಬುವವರ ಪುತ್ರ ಚೌಡೇಗೌಡ ತೀವ್ರ ಗಾಯಗೊಂಡಿದ್ದರು.
ಮಂಡ್ಯ ಮಿಮ್ಸ್ ಅಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೋಮವಾರ ಬೆಳಿಗ್ಗೆ ವ್ಯಕ್ತಿ ಮೃತಪಟ್ಟರು. ಕುಟುಂಬಸ್ಥರ ಮನವಿಯ ಮೇರೆಗೆ ಬೆಂಗಳೂರಿನ ಲಯನ್ಸ್ ಇಂಟರ್’ನ್ಯಾಷನಲ್ ಕಣ್ಣು ಬ್ಯಾಂಕ್’ನ ವೈದ್ಯರು ಆಗಮಿಸಿ ನೇತ್ರ ಸಂಗ್ರಹಿಸಿದ್ದಾರೆ.
ಅಪಘಾತ ಕುರಿತಂತೆ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ತನಿಖೆ ಅರಂಭವಾಗಿದೆ.




