Thursday, September 19, 2024

ಪ್ರಾಯೋಗಿಕ ಆವೃತ್ತಿ

ನೇತ್ರ ತಪಾಸಣಾ ಶಿಬಿರ ಸದುಪಯೋಗಕ್ಕೆ ಸಲಹೆ

ವರದಿ : ಪ್ರಭು ವಿ ಎಸ್

ಮದ್ದೂರು ಗ್ರಾಮೀಣ ಭಾಗದ ಜನರಿಗೆ ಉಚಿತ ನೇತ್ರ ತಪಾಸಣೆ ಶಿಬಿರವನ್ನು ಏರ್ಪಡಿಸಿದ್ದು, ಇದರ ಸದು ಪಯೋಗಪಡಿಸಿಕೊಳ್ಳಬೇಕೆಂದು ಶ್ರೀನಿಧಿಗೌಡ ಪ್ರತಿಷ್ಠಾನದ ಅಧ್ಯಕ್ಷ ಹಾಗೂ ಬಿಜೆಪಿ ಮುಖಂಡ ಎಸ್.ಪಿ.ಸ್ವಾಮಿ ತಿಳಿಸಿದರು.

ಮದ್ದೂರು ತಾಲೂಕಿನ ಮಲ್ಲನಕುಪ್ಪೆ ಗ್ರಾಮದ ದಂಡಿನ ಮಾರಮ್ಮ ದೇವಾಲಯ ಆವರಣದಲ್ಲಿ ಬಿಜೆಪಿ ಮುಖಂಡ ಎಸ್ ಪಿ ಸ್ವಾಮಿ ಅವರ ನೇತೃತ್ವದಲ್ಲಿ ಶ್ರೀನಿಧಿಗೌಡ ಪ್ರತಿಷ್ಠಾನದ ವತಿಯಿಂದ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ರೈತರು ವೃದ್ಧರು ಮಹಿಳೆಯರು ಕಣ್ಣಿನ ತಪಾಸಣೆ ಮಾಡಿಸಿಕೊಳ್ಳಲು ಅನುಕೂಲಗಳು ಇರುವುದಿಲ್ಲ, ಆದ್ದರಿಂದ ಗ್ರಾಮೀಣ ಭಾಗದಲ್ಲಿ ಶಿಬಿರ ಏರ್ಪಡಿಸಿರುವುದಾಗಿ ಹೇಳಿದರು. ತಾಲೂಕಿನ 36 ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲೂ ಈ ಉಚಿತ ನೇತ್ರ ತಪಾಸಣಾ ಹಾಗೂ ಶಸ್ತ್ರ ಚಿಕಿತ್ಸೆ ಶಿಬಿರವನ್ನು ಏರ್ಪಡಿಸಿದ್ದು, ಪ್ರತಿ ವಾರಕ್ಕೆ ಎರಡು ಪಂಚಾಯತಿಗಳನ್ನು ಆಯ್ಕೆ ಮಾಡಿ ನೇತ್ರ ಚಿಕಿತ್ಸೆ ಕೊಡಿಸಲಾಗುವುದು. ಶಿಬಿರದಲ್ಲಿ ರಕ್ತದೊತ್ತಡ ಹಾಗೂ ಮಧುಮೇಹ ತಪಾಸಣೆ ಸಹ ನಡೆಸಿ ನಂತರ ಕಣ್ಣಿನ ಶಸ್ತ್ರ ಚಿಕಿತ್ಸೆಗೆ ಆಯ್ಕೆ ಮಾಡಲಾಗುತ್ತದೆ ಎಂದರು.

ಪ್ರತಿಷ್ಠಾನದ ವತಿಯಿಂದ ಸಾರಿಗೆ ಸೌಕರ್ಯವನ್ನ ಮಾಡಿ ನಾವೇ ಆಯ್ಕೆಯಾದವರನ್ನು ಕರೆದುಕೊಂಡು ಹೋಗಿ ಸಕ್ಕರೆ ಕಾಯಿಲೆ, ಬಿ.ಪಿ.ಕಡಿಮೆ ಚಿಕಿತ್ಸೆ ಕೊಡಿಸಿ ನಂತರ ಶಸ್ತ್ರ ಚಿಕಿತ್ಸೆಯನ್ನು ಮಾಡಿಸಿ, ಅವರವರ ಗ್ರಾಮಗಳಿಗೆ ಜೋಪಾನವಾಗಿ ವಾಪಸ್ ಬಿಡುವ ವ್ಯವಸ್ಥೆಯನ್ನು ಮಾಡಲಾಗಿದ್ದು, ಶಿಬಿರದ ಪ್ರಯೋಜನವನ್ನು ಪ್ರತಿಯೊಬ್ಬರೂ ಪಡೆದುಕೊಳ್ಳಬೇಕೆಂದರು.

ಈ ಸಂದರ್ಭದಲ್ಲಿ ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮನು ಕುಮಾರ್, ಮಹೇಂದ್ರ ಕುಮಾರ್, ಸೊಸೈಟಿ ಮಾಜಿ ಅಧ್ಯಕ್ಷ ಡಾಬಾ ಕಿಟ್ಟಿ, ಮಾಜಿ ಜಿ.ಪಂ.ಸದಸ್ಯರಾದ ಕೃಷ್ಣೇಗೌಡ, ಬೋರಯ್ಯ, ಟಿಎಪಿಸಿಎಂಎಸ್ ನಿರ್ದೇಶಕ ಚಂದ್ರ ನಾಯಕ್, ಗ್ರಾ.ಪಂ.ಸದಸ್ಯ ರವಿ, ಗ್ರಾಮಸ್ಥರಾದ ಕುಮಾರ, ತಿಮ್ಮ, ಪುಟ್ಟರಾಜು, ಸುದೀಪ್ ಸೇರಿದಂತೆ ಬಿಜೆಪಿ ಮುಖಂಡರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!