Friday, November 20, 2026

ಪ್ರಾಯೋಗಿಕ ಆವೃತ್ತಿ

ಕಾರ್ಖಾನೆ ಕಾಯ್ದೆಗೆ ಕಾರ್ಮಿಕ ವಿರೋಧಿ ತಿದ್ದುಪಡಿ ಖಂಡಿಸಿ ಸಿಐಟಿಯು ಪ್ರತಿಭಟನೆ

ಕಾರ್ಖಾನೆ ಕಾಯ್ದೆಗೆ ಕಾರ್ಮಿಕ ವಿರೋಧಿ ತಿದ್ದುಪಡಿ ಖಂಡಿಸಿ ಒಂದು ದಿನದ ಕರ್ನಾಟಕ ವ್ಯಾಪಕ ಕೈಗಾರಿಕಾ ಮುಷ್ಕರದ ಭಾಗವಾಗಿ ಸಿಐಟಿಯು ನೇತೃತ್ವದಲ್ಲಿ ಕಾರ್ಖಾನೆಗಳ ಕಾರ್ಮಿಕರು ಗುರುವಾರ ಮಂಡ್ಯ ನಗರದ ಸಂಜಯ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

ಸಿಐಟಿಯು ನಾಯಕಿ ಸಿ.ಕುಮಾರಿ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಾಕಾರರು, ಸರ್ಕಾರದ ಕಾರ್ಮಿಕ ವಿರೋಧಿ ನೀತಿಗಳನ್ನು ವಿರೋಧಿಸಿ ಘೋಷಣೆಗಳನ್ನ ಕೂಗಿದರು. ರಾಜ್ಯದ ಕಾರ್ಖಾನೆಗಳಲ್ಲಿ ದಿನದ ಕೆಲಸದ ಅವಧಿ ಗರಿಷ್ಟ 9 ಗಂಟೆಯಿಂದ 12 ಗಂಟೆಗೆ ಹೆಚ್ಚಿಸಲಾಗಿದೆ. ದುಡಿಯುವ ಮಹಿಳೆಯರನ್ನು ರಾತ್ರಿ ಪಾಳಿಯಲ್ಲಿ ದುಡಿಸಿಕೊಳ್ಳಲು ಅವಕಾಶ ಕಲ್ಪಿಸಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಖಾನೆ ಕಾಯ್ದೆಗೆ ಕಾರ್ಮಿಕ ವಿರೋಧಿ ತಿದ್ದುಪಡಿ ತರುವುದನ್ನು ನಿಲ್ಲಿಸಬೇಕು. ದಿನದ ಕೆಲಸದ ಅವಧಿ 9 ರಿಂದ 12 ಗಂಟೆಗೆ ಹೆಚ್ಚಳ ಮಾಡಬಾರದು, ವಿರಾಮವಿಲ್ಲದೆ ದುಡಿಮೆಯ ಅವಧಿ 5ರಿಂದ 6 ಗಂಟೆಗೆ ಹೆಚ್ಚಳ ಮಾಡಿರುವುದುನ್ನು ಕೈ ಬಿಡಬೇಕು. ರಾತ್ರಿ ಪಾಳಿಯಲ್ಲಿ ಮಹಿಳಾ ಕಾರ್ಮಿಕರ ದುಡಿಮೆಗೆ ಅವಕಾಶ ನೀಡಬಾರದು ಹಾಗೂ ವಾರಕ್ಕೆ 5ದಿನ ಕೆಲಸ, ದಿನಕ್ಕೆ 7 ಗಂಟೆ, ವಾರಕ್ಕೆ 35ಗಂಟೆ ಕೆಲಸದ ಅವಧಿ ನಿಗಧಿಗಾಗಿ ಕಾರ್ಖಾನೆ ಕಾಯ್ದೆಗೆ ತಿದ್ದುಪಡಿ ಮಾಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮುಖಂಡರಾದ ಜಿ.ರಾಮಕೃಷ್ಣ, ಮಹದೇವಮ್ಮ, ಸತೀಶ್, ಶಿವಕುಮಾರ್, ಕೊಮಾರಪ್ಪ, ಸುಮತಿ, ಉಮೇಶ್ ಮತ್ತಿತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ