ಕೌಟುಂಬಿಕ ಕಲಹಕ್ಕೆ ಬೇಸತ್ತು ಗರ್ಭಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಶ್ರೀರಂಗ ಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೇಘನಾ(25) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ.ಪಾಂಡವಪುರ ತಾಲೂಕಿನ ಡಿಂಕಾ ಗ್ರಾಮದ ಮೇಘನಾರನ್ನು ಕೆಆರ್ ಎಸ್ ಗ್ರಾಮಕ್ಕೆ ಮದುವೆ ಮಾಡಿಕೊಡಲಾಗಿತ್ತು.
ಇಂದು ಮೇಘನಾ ಪತಿಯ ಜೊತೆ ಜಗಳ ಆಡಿಕೊಂಡು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಮೃತಳಿಗೆ ಎರಡು ವರ್ಷದ ಓರ್ವ ಮಗನಿದ್ದು, ಮತ್ತೆ 5 ತಿಂಗಳ ಗರ್ಭಿಣಿಯಾಗಿದ್ದಳು.ಮೇಘನಾ ಮೃತ ಪಟ್ಟ ಸುದ್ದಿ ತಿಳಿದ ಪೋಷಕರು ಆಕೆಯ ಗಂಡನ ವಿರುದ್ದ ಆಕ್ರೋಶ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ .ಈ ಸಂಬಂಧ ಕೆಆರ್‌ಎಸ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.