Saturday, October 19, 2024

ಪ್ರಾಯೋಗಿಕ ಆವೃತ್ತಿ

ವಿದ್ಯಾರ್ಥಿ ಜೀವನದಲ್ಲಿ ಎಲ್ಲಾ ಕ್ಷೇತ್ರಗಳ ಜ್ಞಾನ ಹೆಚ್ಚಿಸಿಕೊಳ್ಳಿ – ನೂತನ್

ವಿದ್ಯಾರ್ಥಿ ಜೀವನದಲ್ಲಿ ಎಲ್ಲಾ ಕ್ಷೇತ್ರಗಳ ಬಗ್ಗೆ ತಿಳಿದು ಜ್ಞಾನ ಹೆಚ್ಚಿಸಿಕೊಂಡಾಗ ಮಾತ್ರ ಏನಾದರೂ ಸಾಧನೆ ಮಾಡಲು ಸಾಧ್ಯ ಎಂದು ಎಲೆಕ್ಟ್ರಾನಿಕನ್ಸ್ ಅಂಡ್ ಕಮ್ಯೂನಿಕೇಷನ್ ಮುಖ್ಯಸ್ಥ ಎ.ಸಿ.ನೂತನ್ ತಿಳಿಸಿದರು.

ಮದ್ದೂರು ತಾಲ್ಲೂಕಿನ ಭಾರತೀನಗರದ ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಜಿ.ಮಾದೇಗೌಡ ತಾಂತ್ರಿಕ  ಮಹಾ ವಿದ್ಯಾನಿಲಯದ ಎಲೆಕ್ಟ್ರಾನಿಕನ್ಸ್ ಅಂಡ್ ಕಮ್ಯೂನಿಕೇಷನ್ ಕಿರಿಯ ವಿದ್ಯಾರ್ಥಿಗಳು ಹಿರಿಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದ ಅವರು, ಉನ್ನತ ಶಿಕ್ಷಣ ಪಡೆದು ಒಳ್ಳೆಯ ಉದ್ಯೋಗವನ್ನು ಪಡೆದಾಗ ಮಾತ್ರ, ನಮ್ಮ ಹುಟ್ಟಿಗೆ ಸಾರ್ಥಕತೆ ಬರುವುದು, ಆದ್ದರಿಂದ ಪತ್ರಿಯೊಬ್ಬ ವಿದ್ಯಾರ್ಥಿಗಳು ಸಮಯವನ್ನು ವ್ಯಯ ಮಾಡದೇ ಓದಿನ ಕಡೆಗೆ ಗಮನ ಹರಿಸಬೇಕೆಂದು ಸಲಹೆ ನೀಡಿದರು.

ಜಾಹೀರಾತು

ಇದೇ ವೇಳೆ ಹೆಚ್ಚು ಅಂಕಗಳಿಸಿದ ಹಿರಿಯ, ಕಿರಿಯ ವಿದ್ಯಾರ್ಥಿಗಳಿಗೆ ಕಿರಿಯ ವಿದ್ಯಾರ್ಥಿಗಳು ಬಹುಮಾನ ವಿತರಣೆ ಮಾಡಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಈ ಸಂದರ್ಭದಲ್ಲಿ ಮ್ಯಾಕಾನಿಕಲ್ ಎಚ್ಓಡಿ ಪ್ರಶಾಂತ್, ಚಂದನ್, ಗಣೇಶ್ ಕುಮಾರ್, ಜಿತೇಂದ್ರ ಪಿ ನಾಯಕ್, ವಿ.ಶ್ರುತಿ, ಚಾಂದಿನಿ, ಪರಿಣಿತ, ಹೇಮಂತ್ ಕುಮಾರ್, ಎ.ಸಿ.ದಿವ್ಯ ಸೇರಿದಂತೆ ಹಲವರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!