Thursday, September 19, 2024

ಪ್ರಾಯೋಗಿಕ ಆವೃತ್ತಿ

ಮಳವಳ್ಳಿ| ಫೆ.8ರಂದು ಭಾರತಿ ಕಾಲೇಜಿನಲ್ಲಿ ಗೌರವ ಸಮರ್ಪಣೆ

ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದ ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ಗೌರವ ಸಮರ್ಪಣೆ ಹಾಗೂ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಫೆ.8 ರಂದು ಬೆಳಿಗ್ಗೆ 10:30ಕ್ಕೆ ನಡೆಯಲಿದೆ.

ಶಾಲಾ ಶಿಕ್ಷಣ ಇಲಾಖೆ ( ಪದವಿ ಪೂರ್ವ ) ಹಾಗೂ ಭಾರತಿ ಪದವಿ ಪೂರ್ವ ಕಾಲೇಜು ಸಹಯೋಗದಲ್ಲಿ ನಡೆಯುವ ಸಮಾರಂಭವನ್ನು ಕೆ.ಬಿ ಮಹದೇವಪ್ಪ ಉದ್ಘಾಟಿಸಲಿದ್ದು, ಭಾರತಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಕೆ ಎಸ್ ಗೋಪಾಲಕೃಷ್ಣ ಶುಭ ಹಾರೈಸಲಿದ್ದಾರೆ.

ಚನ್ನಪಟ್ಟಣದ ನಿವೃತ್ತ ಕನ್ನಡ ಪ್ರಾಧ್ಯಾಪಕ ಪೂರ್ಣಚಂದ್ರ ನಾಯಕ್ ಪ್ರಧಾನ ಭಾಷಣ ಮಾಡಲಿದ್ದು, ಜಿ.ಪಂ ಮಾಜಿ ಸದಸ್ಯೆ, ಭಾರತಿ ಕಾಲೇಜು ಆಡಳಿತ ಮಂಡಳಿ ನಿರ್ದೇಶಕಿ ಸುಜಾತ ಕೆ ಎಂ ಪುಟ್ಟು ಬಹುಮಾನ ವಿತರಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಪುಟ್ಟಲಿಂಗಯ್ಯ ಉಪಸ್ಥಿತರಿರಲಿದ್ದಾರೆ.

ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದಿರುವ ಗುಲ್ಬರ್ಗ ವಿಶ್ವವಿದ್ಯಾನಿಲಯದ ಆಂಗ್ಲಭಾಷಾ ಪ್ರಾಧ್ಯಾಪಕ ಹೊಸಕೊಪ್ಪಲು ಡಾ.ಟಿ ನಿಂಗಣ್ಣ, ಜನೋದಯ ಪ್ರಾದೇಶಿಕ ಕನ್ನಡ ದಿನಪತ್ರಿಕೆ ಸಂಪಾದಕಿ ಮಂಜುಳಾ ಕಿರುಗಾವಲು, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಹೆಚ್. ಸಿ ಮಂಜುನಾಥ್ ರಿಗೆ ಗೌರವ ಸಮರ್ಪಿಸಿ ಸನ್ಮಾನಿಸಲಾಗುವುದು.

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದಿರುವ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಾದ ಪವಿತ್ರ ಎ.ಕೆ, ದೀಪಿಕಾ ಕೆ. ಎಸ್, ವಿಕಾಸ ಹಾಗೂ ಕಲಾ ವಿಭಾಗದ ವಿದ್ಯಾರ್ಥಿಗಳಾದ ಅನುಶ್ರೀ, ಪ್ರೀತಿ ಕೆ.ಸಿ ಮತ್ತು ಕಿರಣ್ ಅವರನ್ನು ಅಭಿನಂದಿಸಲಾಗುವುದು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!