Saturday, November 21, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಡಿಸಿ ಕಚೇರಿ ಎದುರು ಬೆಂಕಿ ಹಚ್ಚಿಕೊಂಡಿದ್ದ ರೈತ ಸಾವು

ತಮ್ಮ ಜಮೀನಿನ ಖಾತೆ ಮಾಡಿಕೊಡಲು ಅಲೆದಾಡಿಸಿದ ವ್ಯವಸ್ಥೆಯ ವಿರುದ್ದ ಮಂಡ್ಯ ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಕಾವೇರಿ ಉದ್ಯಾನದಲ್ಲಿ ಮಂಗಳವಾರ ಬೆಳಿಗ್ಗೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದ ರೈತ ಬುಧವಾರ ಬೆಳಿಗ್ಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಕೆ.ಆ‌ರ್. ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಎಂ.ಡಿ (55) ಮೃತಪಟ್ಟವರು.

ಭೂಸ್ವಾಧೀನಗೊಂಡ ಜಮೀನಿಗೆ ಹಲವಾರು ವರ್ಷಗಳಿಂದ ಪರಿಹಾರ ಸಿಕ್ಕಿಲ್ಲ. ಅರ್ಜಿ ಸಲ್ಲಿಸಿದರೂ ಅಧಿಕಾರಿಗಳು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಬೆಂಕಿ ಹಚ್ಚಿಕೊಳ್ಳುತ್ತಿದ್ದಂತೆ ಸಮೀಪದಲ್ಲಿದ್ದ ಸಾರ್ವಜನಿಕರು ಬೆಂಕಿ ನಂದಿಸಿ. ಮಂಡ್ಯ ನಗರದ ಮಿಮ್ಸ್ ಆಸ್ಪತ್ರೆಗೆ ದಾಖಲಿಸಲು ನೆರವಾಗಿದ್ದರು.

ಮಿಮ್ಸ್ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ದೇಹವು ಶೇ 80ರಷ್ಟು ಸುಟ್ಟು ಹೋಗಿತ್ತು.ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇಂದು ಸಂಜೆ ಪ್ರತಿಭಟನೆ

ರೈತನ ಸಾವಿನ ಹಿನ್ನೆಲೆಯಲ್ಲಿ ಮಂಡ್ಯ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ಬುಧವಾರ ಸಂಜೆ ಹಲವು ಸಂಘಟನೆಗಳು ಪ್ರತಿಭಟನೆ ಹಮ್ಮಿಕೊಂಡಿವೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ