ಮದ್ದೂರು ತಾಲೂಕಿನ ಕೆಸ್ತೂರು ಗ್ರಾಮದ ಬಳಿ ತನ್ನ ಜಮೀನಿಗೆ ನೀರು ಹಾಯಿಸಲು ಹೋದ ರೈತನ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ನಡೆದಿದೆ.
ಕೆಸ್ತೂರು ಗ್ರಾಮದ ರೈತ ರಾಮು ಚಿರತೆ ದಾಳಿಯಿಂದ ಗಂಭೀರವಾಗಿ ಗಾಯಗೊಂಡ ರೈತ. ತನ್ನ ಜಮೀನಿಗೆ ನೀರು ಹಾಯಿಸಲು ತೆರಳಿದ್ದ ಈತನ ಮೇಲೆ ಚಿರತೆ ದಾಳಿ ಮಾಡಿದ್ದು, ಬೆನ್ನು ಮತ್ತು ಕುತ್ತಿಗೆ ಭಾಗಕ್ಕೆ ತೀವ್ರ ಗಾಯಗಳಾಗಿವೆ.
ಗಾಯಗೊಂಡ ರೈತನನ್ನು ಮದ್ದೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೈತ ರಾಮು ಪ್ರಾಣಾಪಾಯದಿಂದ ಪಾರಾಗಿದ್ದಾರೆ.




