Thursday, November 19, 2026

ಪ್ರಾಯೋಗಿಕ ಆವೃತ್ತಿ

ಮದ್ದೂರು| ಸಾಲದ ಬಾಧೆಗೆ ರೈತ ಆತ್ಮಹತ್ಯೆ

ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಸಾಲ ಬಾಧೆ ತಾಳಲಾರದೆ ರೈತ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ಗ್ರಾಮದ ಬೋರಯ್ಯರ ಪುತ್ರ ಎಚ್‌.ಬಿ. ಶಂಕರಯ್ಯ (64) ಆತ್ಮಹತ್ಯೆ ಮಾಡಿಕೊಂಡವರು.

ಕೃಷಿ ನಂಬಿಕೊಂಡು ಜೀವನ ನಿರ್ವಹಣೆ ಮಾಡುತ್ತಿದ್ದ ಶಂಕರಯ್ಯ ಕುಟುಂಬಕ್ಕೆ 20 ಗುಂಟೆ ಜಮೀನಿತ್ತು. ಆದರೆ ಇವರ ಮಗ ಕಿಡ್ನಿ ವೈಫಲಕ್ಕೀಡಾಗಿ ಅನಾರೋಗ್ಯಕ್ಕೆ ಒಳಗಾಗಿದ್ದರು. ಮಗನ ಚಿಕಿತ್ಸೆ ಮತ್ತು ಜೀವನ ನಿರ್ವಹಣೆಯ ಹೊಣೆ ಹೊತ್ತಿದ್ದ ಇವರಿಗೆ ಬೇಸಾಯದಿಂದ ಆದಾಯ ಬಾರದ ಹಿನ್ನೆಲೆಯಲ್ಲಿ ಸಾಲ ಮಾಡಿಕೊಂಡಿದ್ದರು.

ಪತ್ನಿ ಹೆಸರಿನಲ್ಲಿ ಧರ್ಮಸ್ಥಳ ಯೋಜನೆಯಲ್ಲಿ 1.50 ಲಕ್ಷ, ಬ್ಯಾಂಕಿನಲ್ಲಿ 5 ಲಕ್ಷ ಮತ್ತು ಖಾಸಗಿಯಾಗಿ 5 ಲಕ್ಷ, ಸಾಲ ಮಾಡಿಕೊಂಡಿದ್ದರು. ಸಾಲ ಮರುಪಾವತಿಸುವ ಚಿಂತೆಯಲ್ಲಿದ್ದ ರೈತ ಗುರುವಾರ ಬೆಳಿಗ್ಗೆ ತಮ್ಮ ಮನೆಯ ಜಂತಿಗೆ ಪಂಚೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮದ್ದೂರು ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದು, ಸಾರ್ವಜನಿಕ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಂತರ ಮೃತ ದೇಹವನ್ನು ವಾರಸುದಾರರಿಗೆ ಒಪ್ಪಿಸಲಾಗಿದೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ