Tuesday, November 24, 2026

ಪ್ರಾಯೋಗಿಕ ಆವೃತ್ತಿ

ರೈತ ಆತ್ಮಹತ್ಯೆ | ಸಚಿವರನ್ನೇ ಹೊಣೆಗಾರರನ್ನಾಗಿಸಬೇಕು – ವೆಂಕಟಗಿರಿಯಯ್ಯ

ಮಂಡ್ಯ ಜಿಲ್ಲಾಧಿಕಾರಿಗಳ ಕಛೇರಿ ಎದುರು ರೈತ ಮಂಜೇಗೌಡ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣಭೈರೇಗೌಡ ಹಾಗೂ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಅವರನ್ನು ಸರ್ಕಾರ ನೈತಿಕ ಹೊಣೆಗಾರರನಾಗಿಸಬೇಕು ಎಂದು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ರಾಜ್ಯ ಉಪಾಧ್ಯಕ್ಷ ವೆಂಕಟಗಿರಿಯಯ್ಯ ಆಗ್ರಹಿಸಿದರು.

ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ರೈತ ವಿರೋಧಿ ನೀತಿಯಿಂದಾಗಿ ರೈತ ಸಮುದಾಯ ಒಂದಲ್ಲಾ ಒಂದು ಕಾರಣಕ್ಕಾಗಿ ಆತ್ಮಹತ್ಯೆಗೆ ಶರಣಾಗುತ್ತಿದ್ದು, ಇದಕ್ಕೆ ಕಂದಾಯ ಇಲಾಖೆಯ ಹಾಗೂ ಜಿಲ್ಲಾಡಳಿತದ ಆಡಳಿತ ವೈಫಲ್ಯ ಕಾರಣ ಎಂದರು.

ಸರ್ಕಾರದ ಎಲ್ಲಾ ಇಲಾಖೆಗಳ ಅಧಿಕಾರಿಗಳ ದರ್ಪ, ದೌರ್ಜನ್ಯ-ದಬ್ಬಾಳಿಕೆಗಳ ಮೂಲಕ ಕಾನೂನು ಭಯವಿಲ್ಲದೆ, ಜನಸಾಮಾನ್ಯರ ಪೀಡಕರಾಗಿರುವುದನ್ನು ತಡೆಯಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕಿದೆ. ರೈತ ಮಂಜೇಗೌಡರ ಪ್ರಾಣ ತ್ಯಾಗಕ್ಕೆ ಕಾರಣರಾದ ಆಧಿಕಾರಿಗಳ ಮೇಲೆ ತನಿಖೆ ಮಾಡಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಭೂಸ್ವಾಧೀನಗೊಳಿಸಿಕೊಂಡ ಭೂಮಿಗೆ ಪರ್ಯಾಯ ಭೂಮಿಯನ್ನು ನೀಡುವ ಮೂಲಕ ಮೃತ ರೈತ ಮಂಜೇಗೌಡರಿಗೆ ಚಿರಶಾಂತಿ ನೀಡಬೇಕು. ಮಂಜೇಗೌಡರ ಕುಟುಂಬಕ್ಕೆ ರಾಜ್ಯ ಸರ್ಕಾರ ಕನಿಷ್ಠ ೫೦ಲಕ್ಷರೂಗಳ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.

ಗೋಷ್ಠಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಕೆ.ಎಂ.ಅನಿಲ್ ಕುಮಾರ್, ಜಿಲ್ಲಾ ಉಪಾಧ್ಯಕ್ಷ ಬಿ.ಆನಂದ್, ಮಹಿಳಾ ಜಿಲ್ಲಾಧ್ಯಕ್ಷೆ ಸುಷ್ಮಿತಾ ಆನಂದ್, ಮದ್ದೂರು ತಾಲೂಕು ಅಧ್ಯಕ್ಷ ಮುತ್ತುರಾಜು, ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಸುರೇಶ್ ಕುಮಾರ್, ಸಿದ್ದಯ್ಯ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ