Tuesday, November 24, 2026

ಪ್ರಾಯೋಗಿಕ ಆವೃತ್ತಿ

ಶ್ರೀರಂಗಪಟ್ಟಣ | ಜಾಗ ಗುಳುಂಗೆ ಕುಮ್ಮಕ್ಕು ಆರೋಪ ; ರೈತರಿಂದ ತಾಲ್ಲೂಕು ಕಚೇರಿ ಮುತ್ತಿಗೆ

ಭೂ ಮಾಫಿಯಾಗೆ ಕಂದಾಯ ಇಲಾಖೆಯೇ ಸಾಥ್ ನೀಡುತ್ತಿದೆ ಎಂದು ಆರೋಪಿಸಿ ರೈತರು ಶ್ರೀರಂಗಪಟ್ಟಣ ತಾಲ್ಲೂಕು ಕಚೇರಿಗೆ ಮುತ್ತಿಗೆ ಹಾಕಿ ಬುಧವಾರ ಪ್ರತಿಭಟನೆ ನಡೆಸಿದರು.

ಭೂಮಿ ತಾಯಿ ಹೋರಾಟ ಸಮಿತಿ ವತಿಯಿಂದ ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ಹಾಗೂ ಸಮಿತಿಯ ಅಧ್ಯಕ್ಷ ಬಲ್ಲೇನಹಳ್ಳಿ ಕೃಷ್ಣೇಗೌಡ ನೇತೃತ್ವದಲ್ಲಿ ತಹಸೀಲ್ದಾರ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಜಾಗ, ಶ್ರೀರಂಗನಾಥ ಸ್ವಾಮಿ ದೇವಸ್ಥಾನದ ಜಾಗವನ್ನು ಭೂ ಮಾಫಿಯಾದವರು ಗುಳುಂ ಮಾಡುತ್ತಿದ್ದು, ತಡೆಯಲು ಮುಂದಾದಾಗ ತಾಲ್ಲೂಕು ದಂಡಾಧಿಕಾರಿಗಳು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಅವರ ಚೇಲಾ ರೀತಿ ವರ್ತಿಸುತ್ತಿರುವುದಾಗಿ ಕಿಡಿಕಾರಿದರು.

ಜೊತೆಗೆ ಶ್ರೀರಂಗಪಟ್ಟಣಕ್ಕೆ ಬರುವ ಪ್ರವಾಸಿಗರಿಂದ ಪಾರ್ಕಿಂಗ್ ಶುಲ್ಕದ ಮೂಲಕ ದುಪ್ಪಟ್ಟು ಹಣ ವಸೂಲಿ ಮಾಡಲಾಗುತ್ತಿದೆ. ಭಕ್ತರಿಗೆ ಮೂಲಭೂತ ಸೌಲಭ್ಯ ಕಲ್ಪಿಸುವಲ್ಲಿ ವಿಫಲವಾಗುತ್ತಿರುವುದಾಗಿ ಆಕ್ರೋಶ ವ್ಯಕ್ತಪಡಿಸಿದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ