Sunday, May 5, 2024

ಪ್ರಾಯೋಗಿಕ ಆವೃತ್ತಿ

ವಿದ್ಯುತ್ ಪ್ರವಹಿಸಿ ರೈತ ಬಲಿ

ಜಮೀನಿಗೆ ನೀರು ಹಾಯಿಸಲು ಹೋದಾಗ ಆಕಸ್ಮಿಕವಾಗಿ ವಿದ್ಯುತ್ ಪ್ರವಹಿಸಿ ರೈತ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಗ್ರಾಮದಲ್ಲಿ ಸಂಭವಿಸಿದೆ.

ಗ್ರಾಮದ ಲೇಟ್ ಗಡೆಕಣ್ಣನ ಸಿದ್ದಣ್ಣ ಅವರ ಪುತ್ರ ನಿಂಗರಾಜು (38) ಮೃತ ರೈತ. ಶುಕ್ರವಾರ ಮಧ್ಯಾಹ್ನ ತಮ್ಮ ಜಮೀನಿನಲ್ಲಿ ಬೆಳೆಯಲಾಗಿದ್ದ ರಾಗಿಗೆ ನೀರು ಹಾಯಿಸಲೆಂದು ನಿಂಗರಾಜು ಹೋದಾಗ ಜಮೀನಿನ ಪಕ್ಕದಲ್ಲೇ ಇದ್ದ ವಿದ್ಯುತ್ ಕಂಬದಿಂದ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಸ್ಥಳಕ್ಕೆ ಅರಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದರು. ಶವವನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಈ ಸಂಬಂಧ ಅರಕೆರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!