Thursday, September 19, 2024

ಪ್ರಾಯೋಗಿಕ ಆವೃತ್ತಿ

ರೈತರ ಧರಣಿಗೆ ಮಹಿಮಾ ಪಾಟೀಲ್ – ಮಧು ಬಂಗಾರಪ್ಪ ಬೆಂಬಲ

ಕಬ್ಬಿಗೆ 4.500 ರೂ. ನಿಗದಿಗೆ ಮಾಡುವುದು ಸೇರಿದಂತೆ ಕೂಡಲೇ ಬೆಂಬಲ ಬೆಲೆ ಘೋಷಿಸಬೇಕೆಂದು ಕರ್ನಾಟಕ ರಾಜ್ಯ ರೈತಸಂಘವು ಮಂಡ್ಯನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಅಹೋರಾತ್ರಿ ಧರಣಿ ಶುಕ್ತವಾರಕ್ಕೆ 5 ನೇ ದಿನಕ್ಕೆ ಕಾಲಿಟ್ಟಿದೆ.

ರೈತರ ಹೋರಾಟವನ್ನು ಬೆಂಬಲಿಸಿ ಮಾಜಿ ಸಿಎಂ ಜೆ.ಹೆಚ್.ಪಟೇಲ್ ಅವರ ಪುತ್ರ ಮಹಿಮಾ ಪಟೇಲ್ ಹಾಗೂ ಮಾಜಿ ಸಿಎಂ ಬಂಗಾರಪ್ಪ ಅವರ ಪುತ್ರ ಮಧು ಬಂಗಾರಪ್ಪ ಅವರು ಮಂಡ್ಯದಲ್ಲಿ ನಡೆಯುತ್ತಿರುವ ಅಹೋರಾತ್ರಿ ಧರಣಿಗೆ ಭೇಟಿ ನೀಡಿ ತಮ್ಮ ಬೆಂಬಲ ವ್ಯಕ್ತಪಡಿಸಿದರು.

ಇಂದಿನ ಧರಣಿಯಲ್ಲಿ ಕರ್ನಾಟಕ ರಾಜ್ಯ ರೈತಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಧುಚಂದನ್, ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ ಸೇರಿದಂತೆ ಹಲವು ರೈತ ಮುಖಂಡರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!