Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾವೇರಿ ನದಿಗಿಳಿದು ರೈತರ ಪ್ರತಿಭಟನೆ- ಸರ್ಕಾರದ ವಿರುದ್ಧ ಅಕ್ರೋಶ

ತಮಿಳುನಾಡಿಗೆ ನೀರು ಹರಿಸುತ್ತಿರುವುದನ್ನು ಖಂಡಿಸಿ ಶ್ರೀರಂಗಪಟ್ಟಣದ ಬಳಿ ರೈತ ಮುಖಂಡ ಕೆ.ಎಸ್.ನಂಜುಂಡೇಗೌಡ ನೇತೃತ್ವದಲ್ಲಿ ರೈತರು ಕಾವೇರಿ ನದಿಗಿಳಿದು ಪ್ರತಿಭಟನೆ ನಡೆಸಿ, ಸರ್ಕಾರದ ವಿರುದ್ದ ಅಕ್ರೋಶ ಹೊರ ಹಾಕಿದರು.

ಶ್ರೀರಂಗಪಟ್ಟಣದ ಕಾವೇರಿ ನದಿಯ ಸ್ನಾನಘಟ್ಟ ಬಳಿ ರೈತಸಂಘ, ಭೂಮಿ ತಾಯಿ ಹೋರಾಟ ಸಮಿತಿ ನೇತೃತ್ವದಲ್ಲಿ ರೈತರು ಕಾವೇರಿ ನದಿಗೆ ಇಳಿದು ಸರ್ಕಾರದ ವಿರುದ್ದ ಘೋ‍ಷಣೆಗಳನ್ನು ಕೂಗಿದರು.

ಕಾವೇರಿ ಕೊಳ್ಳದ ಜಲಾಶಯಗಳಿಂದ ನೀರು ಬಿಡುವ ಮುನ್ನ ಎಚ್ಚೆತ್ತು ಕೊಂಡು ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾಗದೆ, ಏಕಾಏಕಿ ನೀರು ಬಿಟ್ಟು, ಜಲಾಶಯಗಳನ್ನು ಬರಿದು ಮಾಡಿ, ಕುಡಿಯುವ ನೀರಿಗೂ ತತ್ವಾರ ತರಲಾಗಿದೆ, ಇದೀಗ ರೈತರ ಕಣ್ಣಿಗೆ ಮಣ್ಣೆರೆಚುವ ಕೆಲಸಕ್ಕೆ ಮುಂದಾಗಿದೆ. ಮಂಡ್ಯ ಜಿಲ್ಲೆಯ ಶಾಸಕರು, ಸಂಸದರು ಜಿಲ್ಲೆಯ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ರೈತರು ಕಿಡಿಕಾರಿದರು

ಪ್ರತಿಭಟನೆಯಲ್ಲಿ ರೈತ ಮುಖಂಡರಾದ ಬಿ.ಸಿ ಕೃಷ್ಣೇಗೌಡ, ಮೇಳಾಪುರ ಜಯರಾಮ, ಹನುಮಂತ ನಗರದ ಸ್ವಾಮಿ, ಹೊಸೂರಿನ ಶಿವರಾಜ್, ಹನಿಯಂಬಾಡಿ ನಾಗರಾಜ್, ಮಹದೇವ, ಹೊಸ ಉಂಡವಾಡಿ ಪುಟ್ಟೇಗೌಡ, ಪಾಲಹಳ್ಳಿ ರಾಮಚಂದ್ರ, ಕೂಡ್ಲುಕುಪ್ಪೆ ಸ್ವಾಮಿ ಗೌಡ, ಪುಟ್ಟೇಗೌಡ, ಬಲ್ಲೇನಹಳ್ಳಿ ಕೃಷ್ಣೆಗೌಡ, ಬಲ್ಲೇನಹಳ್ಳಿ ಮಹೇಶ್, ಧರಸಗುಪ್ಪೆ ಮಹೇಶ, ಚಂದಗಾಲು ಶಿವರಾಮ್, ಚಿಂದಗಿರಿ ಕೊಪ್ಪಲು ರಾಮಚಂದ್ರ ಮತ್ತಿತರರು ಭಾಗವಹಿಸಿದ್ದರು. ಮುನ್ನೆಚ್ಚರಿಕೆ ಕ್ರಮವಾಗಿ ಪೊಲೀಸರು ಭ್ರದತೆ ಒದಗಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!