Wednesday, May 22, 2024

ಪ್ರಾಯೋಗಿಕ ಆವೃತ್ತಿ

ಒಣಗಿದ ಕಬ್ಬಿನೊಂದಿಗೆ ಕಾವೇರಿ ನದಿ ಬಳಿ ರೈತರ ಪ್ರತಿಭಟನೆ

ಮಂಡ್ಯ ಜಿಲ್ಲೆಯ ರೈತರ ಬೆಳೆಗಳು ಒಣಗುತ್ತಿರುವಾಗ ಕಾವೇರಿ ಕೊಳ್ಳದ ಜಲಾಶಯಗಳಿಂದ ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಶ್ರೀರಂಗಪಟ್ಟಣದಲ್ಲಿ ರೈತರು ಒಣಗಿದ ಕಬ್ಬಿನ ಜಲ್ಲೆಗಳನ್ನು ಹಿಡಿದು ಕಾವೇರಿ ನದಿ ಬಳಿ ಗುರುವಾರ ವಿನೂತನ ಪ್ರತಿಭಟನೆ ನಡೆಸಿದರು.

ಭೂಮಿತಾಯಿ ಹೋರಾಟ ಸಮಿತಿಯ ರೈತ ನಾಯಕ ಕೆ.ಎಸ್.ನಂಜುಂಡೇಗೌಡ ನೇತೃತ್ವದಲ್ಲಿ ಶ್ರೀರಂಗಪಟ್ಟಣದ ಸ್ನಾನಘಟ್ಟ ಬಳಿಯ ಕಾವೇರಿ ನದಿಯಿಂದ ಕಬ್ಬಿನ ಜಲ್ಲೆ ಹಿಡಿದು ತಾಲ್ಲೂಕು ಕಚೇರಿ ವರೆಗೆ ಮೆರವಣಿಗೆ ನಡೆಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ನೀರಾವರಿ ಸಚಿವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಶ್ರೀರಂಗಪಟ್ಟಣ ತಾಲ್ಲೂಕು ಕಚೇರಿ ಎದುರು ಒಂದು ತಾಸಿಗೂ ಹೆಚ್ಚು ಕಾಲ  ಧರಣಿ ಮಾಡಿ, ನಮ್ಮ‌ ನೀರನ್ನು ರಕ್ಷಿಸದ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ. ರೈತರನ್ನು ಸಂಕಷ್ಟಕ್ಕೆ ದೂಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ವೋಚ್ಚ ನ್ಯಾಯಾಲಯದಲ್ಲಿ ವಿಚಾರಣೆ ಮುಂದೂಡಿಕೆಯಾಗಿರುವುದರಿಂದ ಅಲ್ಲಿಯವರೆಗೂ ನೆರೆ ರಾಜ್ಯಕ್ಕೆ ನೀರು ಬಿಡಲು ಸಾಧ್ಯವಿಲ್ಲ ಹಾಗಾಗಿ ಕೆ ಆರ್ ಎಸ್ ನಿಂದ ಬಿಟ್ಟಿರುವ ನೀರನ್ನು ಸ್ಥಗಿತ ಮಾಡುವಂತೆ ಒತ್ತಾಯಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!