Friday, November 20, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ | ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಶೀಘ್ರ ಆರಂಭ

ಮಂಡ್ಯ ಜಿಲ್ಲೆಯಲ್ಲಿ ಭತ್ತ, ರಾಗಿ ಖರೀದಿಗೆ ರೈತರ ನೋಂದಣಿ ಕೇಂದ್ರಗಳನ್ನು ಶೀಘ್ರದಲ್ಲಿಯೇ ಆರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.

ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ 2024-25 ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯ ಟಾಸ್ಕ್ ಪೋರ್ಸ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

2024- 25 ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಕಾರ್ಯ ನಿರ್ವಹಿಸಲು ಸರ್ಕಾರವು ಮಂಡ್ಯ ಜಿಲ್ಲೆಗೆ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಳಿ ರವರನ್ನು ಖರೀದಿ ಏಜೆನ್ಸಿಯಾಗಿ ನೇಮಿಸಿದ್ದು, ರೈತರ ನೋಂದಣಿ ಕಾರ್ಯವನ್ನು ಹಾಗೂ ಭತ್ತ/ರಾಗಿ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸುವAತೆ ಆದೇಶಿಸಿದೆ ಎಂದರು.

ಜಿಲ್ಲೆಯಲ್ಲಿ ಒಟ್ಟು 34 ಎಂ ಎಸ್ ಪಿ ನೋಂದಣಿ ಕೇಂದ್ರಗಳನ್ನು ತೆರೆಯಲಾಗುವುದು. ಮಂಡ್ಯ ತಾಲ್ಲೂಕಿನಲ್ಲಿ -6, ಮದ್ದೂರು -6, ಮಳವಳ್ಳಿ – 4, ಕೆ ಆರ್ ಪೇಟೆ – 6, ಪಾಂಡವಪುರ -4, ಶ್ರೀರಂಗಪಟ್ಟಣ -4, ನಾಗಮಂಗಲ ತಾಲ್ಲೂಕಿನಲ್ಲಿ -4 ನೋಂದಣಿ ಕೇಂದ್ರಗಳನ್ನು ತಾಲ್ಲೂಕುವಾರು ಪ್ರಾರಂಭಿಸಲಾಗುವುದು ಎಂದರು.

ಎA ಎಸ್ ಪಿ ನೋಂದಣಿ ಕೇಂದ್ರಕ್ಕೆ ರೈತರು ನೋಂದಣಿಯಾಗಲು ಅಗತ್ಯ ದಾಖಲೆಗಳಾದ ಆಧಾರ್ ಕಾರ್ಡ್ ಪ್ರತಿ, ಫ್ರೂಟ್ ಐಡಿ (Fruit Id),  ಆಧಾರ್ ಕಾರ್ಡ್ ಜೋಡಣೆ ಮಾಡಿರುವ ಮತ್ತು  NICP ಆಕ್ಟಿವೇಟ್ ಆಗಿರುವ ಬ್ಯಾಂಕ್ ಅಕೌಂಟ್ ಪ್ರತಿಯನ್ನು ಕಡ್ಡಾಯವಾಗಿ ತರಬೇಕು ಹಾಗೂ ನೋಂದಣಿ ಪ್ರಾರಂಭವಾಗುವ ದಿನಾಂಕದ ಮಾಹಿತಿಯನ್ನು ಪತ್ರಿಕಾ ಪ್ರಕಟಣೆಯನ್ನು ಹೊರಡಿಸಬೇಕು ಎಂದರು.

ಪ್ರತಿ ನೋಂದಣಿ ಕೇಂದ್ರಗಳಲ್ಲಿ ರೈತರಿಗೆ ಅಗತ್ಯ ಮಾಹಿತಿ ನೀಡುವ ನಾಮಫಲಕಗಳನ್ನು ಅಳವಡಿಸಬೇಕು. ರೈತರಿಗೆ ಯಾವುದೇ ಗೊಂದಲವಾಗಬಾರದು. ಜೊತೆಗೆ ನೋಂದಣಿ ಮಾಡಿಕೊಳ್ಳಲು ಬರುವ ರೈತರಿಗೆ ಮೂಲಭೂತ ಸೌಲಭ್ಯವಾದ ಕುಡಿಯುವ ನೀರಿನ ವ್ಯವಸ್ಥೆಯನ್ನು ಕಲ್ಪಿಸಬೇಕು. ನೋಂದಣಿಗೆ ಸಂಬAಧಿಸಿದAತೆ  Fruit Id/ Crop survey  ಬಗೆಗಿನ ತಾಂತ್ರಿಕ ಸಮಸ್ಯೆಗಳಿದ್ದಲ್ಲಿ ಕೃಷಿ ಇಲಾಖೆಯವರು ಅಗತ್ಯ ಕ್ರಮ ವಹಿಸಬೇಕು ಎಂದು ತಿಳಿಸಿದರು.

ಕಳೆದ ಸಾಲಿನಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಗೆ ಜಿಲ್ಲೆಯಲ್ಲಿ ಒಟ್ಟು 21,855 ರೈತರು ನೋಂದಣಿಯಾಗಿದ್ದರು. ಅದರಲ್ಲಿ 8,281 ರೈತರ 166409 ಕ್ವಿಂಟಾಲ್ ರಾಗಿಯನ್ನು ಖರೀದಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಅಶೋಕ್, ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ