Thursday, November 19, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ನಾಲೆಗಳಿಗೆ ನೀರು ಹರಿಸಲು ಆಗ್ರಹಿಸಿ ರೈತರ ರಸ್ತೆತಡೆ

ಕೆಆರ್’ಎಸ್ ಅಚ್ಚಕಟ್ಟು ವ್ಯಾಪ್ತಿಯಲ್ಲಿ ಬೆಳೆದು ನಿಂತಿರುವ ಬೆಳೆಗಳ ರಕ್ಷಣೆಗೆ ಕೂಡಲೇ ಕೃಷ್ಣರಾಜಸಾಗರದಿಂದ ನಾಲೆಗಳಿಗೆ ನೀರು ಹರಿಸಿ ಬೆಳೆಗಳನ್ನು ರಕ್ಷಿಸಬೇಕೆಂದು ಒತ್ತಾಯಿಸಿ ರೈತರು ಮಂಡ್ಯ ನಗರದಲ್ಲಿ ಬುಧವಾರ ರಸ್ತೆತಡೆ ನಡೆಸಿದರು.

ಕರ್ನಾಟಕ ರಾಜ್ಯ ರೈತಸಂಘದ ನೇತೃತ್ವದಲ್ಲಿ ಮಂಡ್ಯ ಸಂಜಯ ವೃತ್ತದಲ್ಲಿ ರೈತರು ಮಾನವ ಸರಪಳಿ ರಚಿಸಿ ವಾಹನ ಸಂಚಾರಕ್ಕೆ ಅಡ್ಡಿಪಡಿಸಿದರು. ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ಕೆಲಕಾಲ ವಾಹನ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು.

ಮಂಡ್ಯ ಜಿಲ್ಲೆಯ ಸಾವಿರಾರು ಎಕರೆ ಪ್ರದೇಶದಲ್ಲಿ ರೈತರು ಬೆಳೆದಿರುವ ಬೆಳೆ ನೀರಿಲ್ಲದೆ ಒಣಗುತ್ತಿವೆ, ಮುಂಗಾರು ಮಳೆ ಕೊರತೆಯಿಂದ ಕಬ್ಬು, ಭತ್ತ, ರಾಗಿ, ತರಕಾರಿ ಸೇರಿದಂತೆ ಇತರೆ ಬೆಳೆಗಳಿಗೆ ನೀರಿಲ್ಲದಂತಾಗಿದೆ. ಬೆಳೆಗಳ ರಕ್ಷಣೆಗೆ ತುರ್ತು ನೀರಿನ ಅವಶ್ಯಕತೆ ಇದೆ. ಹಾಗೊಮ್ಮೆ ನೀರು ಹರಿಸದಿದ್ದರೆ ಬೆಳೆ ಸಂಪೂರ್ಣ ನಾಶವಾಗಿ ರೈತರು ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಕೆಆರ್‌ಎಸ್ ಜಲಾಶಯಕ್ಕೆ ಸ್ವಲ್ಪ ಪ್ರಮಾಣದಲ್ಲಿ ನೀರು ಹರಿದು ಬಂದಿದೆ. ನಾಲೆಗಳಿಗೆ ತುರ್ತಾಗಿ ನೀರು ಬಿಡುಗಡೆ ಮಾಡಿದರೆ, ಬೆಳೆಗಳ ರಕ್ಷಣಿ ಸಾಧ್ಯವಾಗಲಿದೆ. ಸರ್ಕಾರ ಮತ್ತು ನೀರಾವರಿ ಇಲಾಖೆ ಅಧಿಕಾರಿಗಳು ವಾಸ್ತವ ಮನವರಿಕೆ ಮಾಡಿಕೊಂಡು ರೈತರ ಹಿತ ಕಾಯಲು ಮುಂದಾಗಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು.

ಜಲಾಶಯದಿಂದ ನಾಲೆಗಳಿಗೆ ನೀರು ಬಿಡುವ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ತೋರಿದರೆ ರೈತರು ಹೋರಾಟ ನಡೆಸಲಿದ್ದು, ಆಳುವ ಸರ್ಕಾರ ಎಚ್ಚೆತ್ತು ತಕ್ಷಣ ನಾಲೆಗಳಿಗೆ ನೀರು ಹರಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ರೈತ ಸಂಘದ ತಾಲ್ಲೂಕು ಅಧ್ಯಕ್ಷ ಚಂದ್ರಶೇಖರ್, ಬೊಮ್ಮೇಗೌಡ, ಲತಾ ಶಂಕರ್, ಜವರೇಗೌಡ, ಸುರೇಶ್ ಗೋಪಾಲಪುರ, ನಾಗರಾಜು,  ಮಹದೇವ ಗಾಣದಾಳು,ಮಲ್ಲೇಶ್, ದೊಡ್ಡಸ್ವಾಮಿ ಇತರರು ಭಾಗವಹಿಸಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ