Saturday, November 21, 2026

ಪ್ರಾಯೋಗಿಕ ಆವೃತ್ತಿ

ರೈತರ ಸಬಲೀಕರಣದ ದೃಷ್ಠಿಯಿಂದ ರೈತ ಶಾಲೆ : ಸತ್ಯಮೂರ್ತಿ

ಕೆಂಪೇಗೌಡ ಒಕ್ಕಲಿಗರ ಕ್ಷೇಮಾಭಿವೃದ್ದಿ ಸಂಘದ ವತಿಯಿಂದ ದೇಶದ ಮೊದಲ ರೈತರ ಶಾಲೆಯನ್ನು ಮಂಡ್ಯ ತಾಲ್ಲೂಕಿನ ಕೆರಗೋಡು ಹೋಬಳಿಯ ಆಲಕೆರೆ ಗ್ರಾಮದಲ್ಲಿ ಜೂನ್ 16ರ ಬೆಳಿಗ್ಗೆ 10.30ಕ್ಕೆ ಆಯೋಜಿಸಲಾಗಿದೆ ಎಂದು ಸಂಘದ ಕಾರ್ಯದರ್ಶಿ ಸತ್ಯಮೂರ್ತಿ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಬಲೀಕರಣದ ದೃಷ್ಠಿಯಿಂದ ಹಾಗೂ ರೈತರಿಗೆ ಸರಿಯಾದ ಮಾರ್ಗದರ್ಶನ ಮಾಹಿತಿ ನೀಡುವ ಸಲುವಾಗಿ ರೈತ ಶಾಲೆ ಆರಂಭಿಸಲಾಗುತ್ತಿದೆ ಎಂದರು.

ಆದಿಚುಂಚನಗಿರಿ ಪೀಠಾಧಿಪತಿ ಡಾ.ನಿರ್ಮಲಾನಂದನಾಥ ಸ್ವಾಮೀಜಿಗಳ ದಿವ್ಯಸಾನಿದ್ಯದಲ್ಲಿ ಶಾಸಕ ರವಿಕುಮಾರ್ ಗೌಡ ರೈತರ ಶಾಲೆ ಉದ್ಘಾಟಿಸಲಿದ್ದು, ಆಲಕೆರೆ ಗ್ರಾ.ಪಂ ಅಧ್ಯಕ್ಷ ಆರ್.ಶಶಿಧರ್ ಅಧ್ಯಕ್ಷತೆ ವಹಿಸುವರು. ಸಂಘದ ಖಜಾಂಚಿ ಪ್ರದೀಪ್‌ಕುಮಾರ್ ಪ್ರಾಸ್ತವಿಕವಾಗಿ ಮಾತನಾಡಲಿದ್ದು, ಜಿಲ್ಲಾಧಿಕಾರಿ ಡಾ.ಕುಮಾರ್, ಜಂಟಿ ಕೃಷಿ ನಿರ್ದೇಶಕ ಅಶೋಕ.ವಿ.ಎಸ್, ಕೃಷಿ ವಿವಿಯ ವಿಶೇಷಾಧಿಕಾರಿ ಕೆ.ಎಂ.ಹರಿಣಿಕುಮಾರ್ ಗೌರವ ಆಹ್ವಾನಿತರಾಗಿ ಭಾಗವಹಿಸಲಿದ್ದಾರೆ ಎಂದು ಹೇಳಿದರು.

ಮುಖ್ಯ ಅತಿಥಿಗಳಾಗಿ ಮನ್‌ಮುಲ್ ಅಧ್ಯಕ್ಷ ಶಿವಪ್ಪ, ನಿರ್ದೇಶಕರಾದ ರಘುನಂದನ್, ಬಿ.ಆರ್.ರಾಮಚಂದ್ರು, ಪಿಇಟಿ ಅಧ್ಯಕ್ಷ ವಿಜಯಾನಂದ, ಬಿಜೆಪಿ ಮುಖಂಡ ಸಚ್ಚಿದಾನಂದ ಸೇರಿದಂತೆ ಹಲವು ಮುಖಂಡರು ಪಾಲ್ಗೊಳ್ಳಿದ್ದಾರೆ ಎಂದು ವಿವರಿಸಿದರು.

ಗೋಷ್ಠಿಯಲ್ಲಿ ನಂದೀಶ್, ಜಗದೀಶ್, ಕಿರಣ್‌ಕುಮಾರ್, ಚೇತನ್‌ಕುಮಾರ್ ಇದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ