Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮಂಡ್ಯ| ಜಿಲ್ಲಾ ಕೃಷಿಕ ಸಮಾಜದ ಕಟ್ಟಡ ನವೀಕರಣ ; ರವಿಕುಮಾರ್

ಮಂಡ್ಯ ಜಿಲ್ಲಾ ಕೃಷಿಕ ಸಮಾಜದ ಕಟ್ಟಡ ನವೀಕರಣ ಹಾಗೂ ತಾಲೂಕು ಕೃಷಿಕ ಸಮಾಜಕ್ಕೆ ನಿವೇಶನ ಒದಗಿಸಲು ಸಹಕರಿಸಲಾಗುವುದೆಂದು ಶಾಸಕರಾದ ಪಿ. ರವಿಕುಮಾರ್ ಭರವಸೆ ನೀಡಿದರು.

ಮಂಡ್ಯ ಜಿಲ್ಲಾ ಹಾಗೂ ತಾಲೂಕು ಕೃಷಿಕ ಸಮಾಜದ ಪದಾಧಿಕಾರಿಗಳು ಮಂಡ್ಯ ವಿಧಾನಸಭಾ ಶಾಸಕರಾದ ಪಿ ರವಿಕುಮಾರ್ ಅವರನ್ನು ಭೇಟಿಯಾಗಿ ಅಭಿನಂದಿಸಿ ಮನವಿ ಸಲ್ಲಿಸಿದರು.

ಕೃಷಿಕ ಸಮಾಜದ ಪದಾಧಿಕಾರಿಗಳ ಮನವಿಗೆ ಸ್ಪಂದಿಸಿದ ಶಾಸಕರು ಜಿಲ್ಲಾ ಕೃಷಿಕ ಸಮಾಜದ ನವೀಕರಣಕ್ಕೆ ಅನುದಾನ ಒದಗಿಸುವುದಲ್ಲದೇ, ತಾಲೂಕು ಕೃಷಿಕ ಸಮಾಜದವರು ಸೂಕ್ತ ನಿವೇಶನ ಗುರುತಿಸಿದಲ್ಲಿ ಸರ್ಕಾರದ ವತಿಯಿಂದ ನಿವೇಶನ ಮಂಜೂರು ಮಾಡಿಸಿಕೊಡುವುದಾಗಿ ಭರವಸೆ ನೀಡಿದರು.

ಮಂಡ್ಯ ಜಿಲ್ಲೆಯಾದ್ಯಂತ ಇರುವ ಕೃಷಿಕ ಸಮಾಜಗಳು ಕೃಷಿಕರಿಗೆ ಅನುಕೂಲವಾಗುವ ಕಾರ್ಯಕ್ರಮಗಳನ್ನು ಸರ್ಕಾರದ ವಿವಿಧ ಇಲಾಖೆಗಳ ಸಹಕಾರ ಪಡೆದು ಕ್ರಿಯಾಶೀಲವಾಗಿ ಹಮ್ಮಿಕೊಳ್ಳಲು ಪದಾಧಿಕಾರಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಮಂಡ್ಯ ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಸಿ. ಎಂ. ನಾಗರಾಜು ಚಾಮಲಾಪುರ, ಜಿಲ್ಲಾ ಉಪಾಧ್ಯಕ್ಷ ಜಿ. ಧನಂಜಯ ದರಸಗುಪ್ಪೆ, ಜಿಲ್ಲಾ ಸಮಿತಿ ಸದಸ್ಯ ಜಿ. ಸಿ.ವೆಂಕಟೇಶ್ ಗೋಪಾಲಪುರ, ತಾಲೂಕು ಕೃಷಿಕ ಸಮಾಜದ ಪದಾಧಿಕಾರಿಗಳಾದ ಎಂ. ಸುದರ್ಶನ್, ರಮೇಶ್, ಶಂಕರ್, ಮೋಹನ್, ಚಂದ್ರು, ಯಶವಂತ್ ಹಾಗೂ ಇತರರು ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ