Thursday, September 19, 2024

ಪ್ರಾಯೋಗಿಕ ಆವೃತ್ತಿ

ರೈತರ ಹೋರಾಟಕ್ಕೆ ಬೆಂಬಲಿಸಿದ ಪ್ರಗತಿಪರ ಸಂಘಟನೆಗಳ ಒಕ್ಕೂಟ

ಕಬ್ಬು ಮತ್ತು ಭತ್ತಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮತ್ತು ಹಾಲಿನ ದರ ಹೆಚ್ಚಳಕ್ಕೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತಸಂಘದ ನೇತೃತ್ವದಲ್ಲಿ ಮಂಡ್ಯನಗರದ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ನಡೆಯುತ್ರಿರುವ ಅಹೋ ರಾತ್ರಿ ಧರಣಿಗೆ ಮದ್ದೂರಿನ ಪ್ರಗತಿಪರ ಸಂಘಟನೆಗಳ ಒಕ್ಕೂಟ ಪದಾಧಿಕಾರಿಗಳು ಬೆಂಬಲ ಸೂಚಿಸಿ ಶನಿವಾರ ಧರಣಿಯಲ್ಲಿ ಪಾಲ್ಗೊಂಡಿದ್ದರು.

ಸರ್ಕಾರ ರೈತರ ನ್ಯಾಯಯುತ ಬೇಡಿಕೆಗಳಿಗೆ ಸ್ಪಂದಿಸಿ ವೈಜ್ಞಾನಿಕ ಬೆಲೆ ನಿಗಧಿಗೊಳಿಸಬೇಕು. ಕಳೆದ 6 ದಿನಗಳಿಂದ ಹೋರಾಟ ನಡೆಯುತ್ತಿದ್ದು, ಸರ್ಕಾರ ಕೂಡಲೇ ಸ್ಪಂದಿಸಿ ಕ್ರಮವಹಿಸಬೇಕೆಂದು ಆಗ್ರಹಿಸಿದರು.

ಇಂದಿನ ಧರಣಿಯಲ್ಲಿ ಪ್ರಗತಿಪರ ಸಂಘಟನೆಯ ಪ್ರಧಾನ ಸಂಚಾಲಕ ವಿ.ಸಿ.ಉಮಾಶಂಕರ್, ಸಂಚಾಲಕ  ಶ್ರೀನಿವಾಸ್, ತೆಂಗು ಬೆಳೆಗಾರರ ಸಂಘದ ಅಧ್ಯಕ್ಷ ಚನ್ನಸಂದ್ರ ಲಕ್ಷ್ಮಣ, ಹಾಲು ಉತ್ಪಾದಕರ ಹೋರಾಟ ಸಮಿತಿಯ ತಾಲೂಕು ಅಧ್ಯಕ್ಷ ಜಿ.ಕೆ.ರಾಜು, ತಿಪ್ಪೂರು ರಾಜೇಶ್, ಬಸವರಾಜು, ಮನು, ತಿಪ್ಪೂರು ವಿವೇಕ್, ಚನ್ನಸಂದ್ರ ಉಮೇಶ್, ಸೊಂಪುರ ಸಾಗರ್, ಶೇಖರ್ ಹಾಗೂ ಉಮೇಶ್ ಭಾಗವಹಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!