Saturday, May 18, 2024

ಪ್ರಾಯೋಗಿಕ ಆವೃತ್ತಿ

ಜವಾಬ್ದಾರಿ ಮರೆತರೆ ಹೋರಾಟ ಅನಿವಾರ್ಯ; ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ನಿರ್ಣಯ

ಕಾವೇರಿ ನದಿ ಪಾತ್ರದಲ್ಲಿ ನೀರಿಲ್ಲದಿರುವ ಸಂಕಷ್ಟದ ಸಮಯದಲ್ಲಿ ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮವನ್ನು ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ತೀವ್ರವಾಗಿ ಖಂಡಿಸಿದೆ.

ಮಂಡ್ಯನಗರದ ಗಾಂಧಿಭವನದಲ್ಲಿ ನಡೆದ ಸಮಿತಿ ಸಭೆಯಲ್ಲಿ ರಾಜ್ಯ ಸರ್ಕಾರದ ನಡೆಗೆ ಮುಖಂಡರು ವಿರೋಧ ವ್ಯಕ್ತಪಡಿಸಿದರು. ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಜವಾಬ್ದಾರಿಯುತವಾಗಿ ನಡೆದುಕೊಳ್ಳಲು ಮುಂದಾಗದಿದ್ದಲ್ಲಿ ಪಕ್ಷಾತೀತವಾಗಿ ಹೋರಾಟ ನಡೆಸುವ ಎಚ್ಚರಿಕೆಯನ್ನು ಮುಖಂಡರು ನೀಡಿದರು.

ಅಣೆಕಟ್ಟುಗಳಲ್ಲಿ ನೀರಿನ ಸಂಗ್ರಹ ಕೊರತೆ ಇರುವ ಕಾಲದಲ್ಲಿ ರೂಪಿಸಿರುವಂತೆ ಸಂಕಷ್ಟ ಸೂತ್ರದಲ್ಲಿ ಸ್ಪಷ್ಟತೆ, ನಿಖರತೆಯಿಲ್ಲದ ಇಲ್ಲವಾಗಿದೆ, ಆದ್ದರಿಂದ ಸುಪ್ರೀಂಕೋರ್ಟಿನ ಪೀಠದ ಮುಂದೆ ಅರ್ಥಪೂರ್ಣವಾಗಿ ಅನುಷ್ಠಾನವಾಗುವ ಸಂಕಷ್ಟ ಸೂತ್ರವನ್ನು ರೂಪಿಸುವಂತೆ ರಾಜ್ಯ ಸರ್ಕಾರವು ಮನವಿ ಮಾಡಬೇಕೆಂದು ಸಮಿತಿಯು ಆಗ್ರಹಿಸಿತು.

ಸಭೆಯಲ್ಲಿ ಮಾಜಿ ಸಚಿವ ಎಂ.ಎಸ್.ಆತ್ಮಾನಂದ, ಮಾಜಿ ಶಾಸಕ ಜಿ.ಬಿ.ಶಿವಕುಮಾರ್, ರೈತ ಹೋರಾಟಗಾರರಾದ ಕೆ.ಎಸ್. ನಂಜುಂಡೇಗೌಡ, ಸುನಂದಾ ಜಯರಾಂ, ಬೇಕ್ರಿ ರಮೇಶ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!