Friday, November 20, 2026

ಪ್ರಾಯೋಗಿಕ ಆವೃತ್ತಿ

3 ಬಸ್ಸುಗಳ ನಡುವೆ ಭೀಕರ ಅಪಘಾತ | ಸ್ಥಳದಲ್ಲೇ ಮೂವರ ಸಾವು ; 60 ಜನರು ಗಂಭೀರ

ಒಂದು ಕೆಎಸ್ಆರ್’ಟಿಸಿ ಬಸ್ಸು ಹಾಗೂ ಎರಡು ಬಿಎಂಟಿಸಿ ಬಸ್ಸುಗಳ ನಡುವೆ ಭೀಕರ ಅಪಘಾತ ಸಂಭವಿಸಿ  ಇಬ್ಬರು ಮಹಿಳೆಯರು ಹಾಗೂ ಓರ್ವ ಪುರುಷ ಸಾವನ್ನಪ್ಪಿದ್ದು, ಸುಮಾರು 60 ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಗ್ರಾಮದ ಬಳಿ ಭಾನುವಾರ ನಡೆದಿದೆ.

ಮೃತ ಮೂವರ ವಿವರಗಳು ಇನ್ನಷ್ಟೇ ಲಭ್ಯವಾಗಬೇಕಿದೆ.

ಏನಿದು ಘಟನೆ 

ಬಸ್ಸೊಂದು ಕೊಳ್ಳೇಗಾಲದಿಂದ ಮಳವಳ್ಳಿಗೆ ಬರುತ್ತಿದ್ದ ವೇಳೆ ಟೈರ್ ಬ್ಲಾಸ್ಟ್ ಆಗಿ ಮಳವಳ್ಳಿ ಕಡೆಯಿಂದ ಕೊಳ್ಳೇಗಾಲ ಕಡೆಗೆ ಹೋಗುತ್ತಿದ್ದ ಬಿಎಂಟಿಸಿ ಬಸ್ ಗೆ ಡಿಕ್ಕಿ ಹೊಡೆದಿದೆ. ಇದರ ಜತೆಗೆ ಮತ್ತೊಂದು ಬಿಎಂಟಿಸಿ ಬಸ್ಸು ಸಹ ಬಂದು ಡಿಕ್ಕಿ ಹೊಡೆದಿದೆ. ಈ ಘಟನೆಯಲ್ಲಿ ಮೂರು ಬಸ್ಸುಗಳಲ್ಲಿದ್ದ ಸುಮಾರು 73 ಕ್ಕೂ ಹೆಚ್ಚು ಜನ ಗಂಭೀರ ಗಾಯಗೊಂಡಿದ್ದಾರೆ.

ಈ ಪೈಕಿ 2 ಮಹಿಳೆಯರು ಹಾಗೂ ಓರ್ವ ಪುರುಷ ಸಾವನ್ನಿಪ್ಪಿದ್ದಾರೆ. ಗಾಯಾಳಗಳನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಲಾಯಿತು. ಸುಮಾರು 37 ಜನರು ಗಂಭೀರ ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗೆ ಮಂಡ್ಯ ಮಿಮ್ಸ್ ಆಸ್ಪತ್ರೆಗೆ ಸಾಗಿಲಾಗಿದೆ. ಉಳಿದ ಗಾಯಾಳುಗಳನ್ನು ಮಳವಳ್ಳಿ ಸಾರ್ವಜನಿಕ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ