Thursday, November 19, 2026

ಪ್ರಾಯೋಗಿಕ ಆವೃತ್ತಿ

ಎಫ್‌ಸಿಐ ಕಮಿಟ್‌ಮೆಂಟ್ ಪತ್ರ ಬಿಡುಗಡೆ ಮಾಡಿ, ಬಿಜೆಪಿ ನಾಯಕರ ಬಣ್ಣ ಬಯಲು ಮಾಡಿದ ಸಿಎಂ ಸಿದ್ದರಾಮಯ್ಯ

ಭಾರತೀಯ ಆಹಾರ ನಿಗಮ (ಎಫ್‌ಸಿಐ) ಕರ್ನಾಟಕಕ್ಕೆ ಅಕ್ಕಿ ಕೊಡುತ್ತೇವೆ ಎಂದು ಹೇಳಿರುವ ಕಮಿಟ್‌ಮೆಂಟ್ ಪತ್ರ ತೋರಿಸಲಿ ಎಂದು ಬಿಜೆಪಿ‌ ನಾಯಕ ಸಿ.ಟಿ.ರವಿ ಸವಾಲು ಹಾಕಿದ್ದರು. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಫ್.ಸಿ.ಐ ಕಮಿಟ್‌ಮೆಂಟ್ ಪತ್ರವನ್ನು ಟ್ವಿಟರ್ ನಲ್ಲಿ ಬಿಡುಗಡೆ ಮಾಡುವ ಮೂಲಕ ರಾಜ್ಯದ ಜನರ ಮುಂದೆ ಬಿಜೆಪಿ ನಾಯಕರ ಮುಖವಾಡವನ್ನು ಬಯಲು ಮಾಡಿದ್ದಾರೆ. 

“>

ಸಿ.ಟಿ ರವಿ ಅವರೇ ಇಂತಹ ಬೇಜವಾಬ್ದಾರಿ ಹೇಳಿಕೆ, ಸುಳ್ಳು ಮತ್ತು ಅಪಪ್ರಚಾರದ ಗೀಳಿಗಾಗಿಯೇ ರಾಜ್ಯದ ಪ್ರಜ್ಞಾವಂತ ಮತದಾರರು ಬಿಜೆಪಿಯ ಇಂತಹ ನಾಯಕರನ್ನು ಸೋಲಿಸಿ ಮನೆಗೆ ಕಳಿಸಿರುವುದು ಎಂದು ಲೇವಡಿ ಮಾಡಿದ್ದಾರೆ.

ಜಾಹೀರಾತು

ಸಿ.ಟಿ.ರವಿ ಮತ್ತಿತರ ಬಿಜೆಪಿ ನಾಯಕರು ಮೊದಲು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಿ, ಬಡವರ ಹಸಿವು ನೀಗಿಸುವ ಅನ್ನಭಾಗ್ಯ ಯೋಜನೆಗೆ ಬೇಕಾಗುವ ಅಕ್ಕಿ ಪೂರೈಸುವಂತೆ ಮಾಡಬೇಕೇ ಹೊರತು, ಬಡವರ ಹೊಟ್ಟೆಗೆ ಹೊಡೆಯುವ ಕೇಂದ್ರ ಸರ್ಕಾರದ ಜನವಿರೋಧಿ ನಿಲುವನ್ನು ಬೆಂಬಲಿಸುವುದಲ್ಲ ಎಂದು ಅವರು ತಿರುಗೇಟು ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ