Friday, October 11, 2024

ಪ್ರಾಯೋಗಿಕ ಆವೃತ್ತಿ

ಮೈಸೂರು | ತಹಸೀಲ್ದಾರ್ -ಶಿರಸ್ತೇದಾರ್ ಕಿರುಕುಳ ಆರೋಪ; ಎಫ್‌ಡಿಎ ಆತ್ಮಹತ್ಯೆ

ಸರ್ಕಾರಿ ನೌಕರರೊಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ. ಎಫ್‌ಡಿಎ ಆಗಿ ಕಾರ್ಯನಿರ್ವಹಿಸುತ್ತಿದ್ದ 32 ವಯಸ್ಸಿನ ಪ್ರಜ್ವಲ್‌ ಎಂಬುವವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ.

ಮೇಲಧಿಕಾರಿಗಳಾದ ತಹಸೀಲ್ದಾರ್ ಪ್ರವೀಣ್, ಶಿರಸ್ತೇದಾರ್ ಗುರುರಾಜ್ ವಿರುದ್ಧ ಕಿರುಕುಳದ ಗಂಭೀರ ಆರೋಪ ಕೇಳಿ ಬಂದಿದೆ.

ಮಡಿಕೇರಿ ತಹಸೀಲ್ದಾರ್ ಕಚೇರಿ ಬಿಲ್ಲಿಂಗ್ ವಿಭಾಗದಲ್ಲಿ ನಾಲ್ಕು ವರ್ಷಗಳಿಂದ ಪ್ರಜ್ವಲ್ ಸೇವೆ ಸಲ್ಲಿಸುತ್ತಿದ್ದರು. ಆರು ತಿಂಗಳಿಂದ ತಹಸೀಲ್ದಾರ್, ಶಿರಸ್ತೇದಾರ್ ಮಾನಸಿಕ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ. ಕಚೇರಿ ಸಿಬ್ಬಂದಿ, ಸಾರ್ವಜನಿಕರ ಮುಂದೆ ಅವಾಚ್ಯ ಶಬ್ದಗಳಿಂದ ನಿಂದಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ತಾಯಿ, ಪತ್ನಿ ಜತೆ ಪ್ರಜ್ವಲ್ ನೋವು ಹೇಳಿಕೊಂಡಿದ್ದರು.

ಇತ್ತೀಚೆಗೆ ಫೆಸ್ಟಿವಲ್ ಅಡ್ವಾನ್ಸ್ ಬಿಲ್‌ನಲ್ಲಿ ತಹಸೀಲ್ದಾರ್ ಸಹಿ ಹೋಲಿಕೆ ಆಗಿರಲಿಲ್ಲ. ಇದನ್ನೇ ನೆಪ ಮಾಡಿಕೊಂಡು ‘ನೀನೇ ಸಹಿ ಮಾಡಿದ್ದೀಯ’ ಎಂದು ಪ್ರಜ್ವಲ್ ಮೇಲೆ ಆರೋಪ ಮಾಡಿದ್ದ ತಹಸೀಲ್ದಾರ್ ಪ್ರವೀಣ್. ಮೀಟಿಂಗ್ ಮಾಡಿ ಸಸ್ಪೆಂಡ್ ಮಾಡುವುದಾಗಿ ಬೆದರಿಕೆ ಕೂಡಾ ಹಾಕಿದ್ದರು ಎಂದು ಹೇಳಲಾಗಿದೆ.

ಕಾಲು ಹಿಡಿದು ಬೇಡಿಕೊಂಡರೂ ಬಾಯಿಗೆ ಬಂದಂತೆ ಅಧಿಕಾರಿಗಳು ಮಾತನಾಡಿದ್ದರು. ಇದರಿಂದ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಜ್ವಲ್ ಯತ್ನಿಸಿದ್ದಾರೆ.

ಐಸಿಯುನಲ್ಲಿ ಚಿಕಿತ್ಸೆ ಪಡೆಯುವಾಗಲೇ ಪೊಲೀಸರನ್ನು ಭೇಟಿ ಮಾಡಲು ಪ್ರಜ್ವಲ್ ಬಯಸಿದ್ದರು. ಲಿಖಿತ ಹೇಳಿಕೆಯನ್ನು ಮೈಸೂರಿನ ಅಶೋಕಪುರಂ ಠಾಣೆಗೆ ಕಳುಹಿಸಿದ್ದರು. ಪೊಲೀಸರು ಬರುವ ಮುನ್ನವೇ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಪ್ರಜ್ವಲ್ ಪತ್ನಿ ಬಿ‌.ಜೆ.ಶೃತಿ ಪೊಲೀಸರಿಗೆ ದೂರು ನೀಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!