Thursday, September 19, 2024

ಪ್ರಾಯೋಗಿಕ ಆವೃತ್ತಿ

ರೈತರ ಪ್ರತಿಭಟನೆಗೆ ಹೆದರಿ ಹೆಲಿಕಾಪ್ಟರ್ ಮೊರೆ ಹೋದ ಅಮಿತ್ ಶಾ

ಕೇಂದ್ರದ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ರೈತರ ಪ್ರತಿಭಟನೆಗೆ ಹೆದರಿ ಹೆಲಿಕಾಪ್ಟರ್ ಮೊರೆ ಹೋಗಿದ್ದಾರೆ.

ಅಮಿತ್ ಶಾ ಅವರು, ನಾಳೆ ಬೆಳಿಗ್ಗೆ 11 ಗಂಟೆಗೆ ಮದ್ದೂರು ತಾಲ್ಲೂಕಿನ ಹ್ಯಾಲಿಪ್ಯಾಡ್ ಗೆ ಹೆಲಿಕಾಪ್ಟರ್ ಮೂಲಕ ಆಗಮಿಸಿ,ಗೆಜ್ಜಲಗೆರೆಯಲ್ಲಿ ಮನ್ಮುಲ್ ಆವರಣದಲ್ಲಿ ಮೆಗಾ ಡೇರಿ ಉದ್ಘಾಟನೆ ನೆರವೇರಿಸಿ ನಂತರ ರಸ್ತೆ ಮೂಲಕ ಮಂಡ್ಯದ ಸರ್ಕಾರಿ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಬಿಜೆಪಿ ಪಕ್ಷದ ಜನ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಬೇಕಿತ್ತು.

ಆದರೆ ರಸ್ತೆ ಮೂಲಕ ಬಂದರೆ ಸರ್.ಎಂ.ವಿಶ್ವೇಶ್ವರಯ್ಯ ಪ್ರತಿಮೆ ಬಳಿ ಕಬ್ಬು,ಹಾಲಿನ ಬೆಲೆ ನಿಗದಿಗಾಗಿ ರೈತರು ನಡೆಸುತ್ತಿರುವ ಪ್ರತಿಭಟನೆ ಸ್ಥಳದ ಮೂಲಕವೇ ಹಾದು ಹೋಗಬೇಕು.ಅಲ್ಲಿ ರೈತರು ಕಪ್ಪು ಬಾವುಟ ಪ್ರದರ್ಶನ ಮಾಡುವ ಸಾಧ್ಯತೆ ಇತ್ತು.

ಹಾಗಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ರೈತರ ಪ್ರತಿಭಟನೆ ಹಿನ್ನೆಲೆಯಲ್ಲಿ ರಸ್ತೆ ಮೂಲಕ ಬಂದರೆ ಅವರಿಗೂ ಪ್ರತಿಭಟನೆ ಬಿಸಿ ತಟ್ಟುವ ಹಿನ್ನಲೆಯಲ್ಲಿ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಕ್ರೀಡಾಂಗಣದಲ್ಲಿ ಹೆಲಿಕಾಪ್ಟರ್ ಇಳಿಯಲು ಹೆಲಿಪ್ಯಾಡ್ ವ್ಯವಸ್ಥೆ ಮಾಡಲಾಯಿತು.

ಅಲ್ಲಿಂದ ಅವರು ಸರ್ಕಾರಿ ಮಹಾವಿದ್ಯಾಲಯದಲ್ಲಿ ನಡೆಯಲಿರುವ ಜನ ಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿ,ನಂತರ ಪಿಇಎಸ್ ಇಂಜಿನಿಯರಿಂಗ್ ಕಾಲೇಜಿನ ಹೆಲಿಪ್ಯಾಡ್ ಗೆ ತೆರಳಿ ಹೆಲಿಕಾಪ್ಟರ್ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.

ಒಟ್ಟಾರೆ ರೈತರ ಪ್ರತಿಭಟನೆಗೆ ಹೆದರಿ ಅಮಿತ್ ಶಾ ಅವರ ಕಾರ್ಯಕ್ರಮ ಬದಲಾವಣೆ ಮಾಡಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!