Thursday, September 19, 2024

ಪ್ರಾಯೋಗಿಕ ಆವೃತ್ತಿ

ಹೆಣ್ಣು ಆರ್ಥಿಕ ಸ್ವಾವಲಂಬಿ ಬದುಕು ಕಟ್ಟಿಕೊಳ್ಳುವಂತಾಗಬೇಕು| ಮಮತಾ ಶೆಟ್ಟಿ

ಮಂಡ್ಯ ತಾಲೂಕಿನ ಎಂ ಜಿ ಬಡಾವಣೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿಯಲ್ಲಿ ಮೊದಲ ವರ್ಷದ ಕನಸು ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಮಂಡ್ಯ ತಾಲೂಕಿನ ಯೋಜನಾಧಿಕಾರಿಗಳಾದ ಮಮತಾ ಶೆಟ್ಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿಸದ ಅವರು, ಕೇಂದ್ರದ ಸದಸ್ಯರಿಗೆ ವಾರ್ಷಿಕೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದ್ದು ಸಂತೋಷದ ವಿಷಯ. ಆರ್ಥಿಕವಾಗಿ ಸ್ವಾವಲಂಬಿ ಬದುಕು ನಡೆಸುವ ಜೊತೆಗೆ ಇತರೇ ಕೌಶಲ್ಯವನ್ನು ಬೆಳೆಸಿಕೊಳ್ಳಲು ಮತ್ತು ಜ್ಞಾನವಿಕಾಸ ಕಾರ್ಯಕ್ರಮದ ಮುಖೇನ ಇದರ ಸದುಪಯೋಗವನ್ನು ಪಡೆದುಕೊಳ್ಳುಬೇಕು ಎಂದು ತಿಳಿಸಿದರು.

ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿರುವ ಮಹಿಳಾ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಜಯ ಗೌರಿ ರವರು ಮಾತನಾಡಿ,  ಹೆಣ್ಣು ಒಂದು ಶಕ್ತಿ ಹಾಗೂ ಶಾಂತ ಸ್ವರೂಪಿ. ಕುಟುಂಬ ನಿರ್ವಹಣೆಯಲ್ಲಿ ಮೂಲ ಪಾತ್ರವನ್ನು ನಿರ್ವಹಿಸುವ ತಾಯಿಯಾಗಿರುತ್ತಾಳೆ. ಇಂದು ಮಹಿಳೆ ಕುಟುಂಬದ ಕಣ್ಣಲ್ಲ ಸಮಾಜದ ಕಣ್ಣಾಗಿದ್ದಾಳೆ. ಎಲ್ಲಾ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಳ್ಳುವಂತಹ ಸಮಾನ ಸ್ಥಾನಮಾನವನ್ನು ಹೊಂದಿದ್ದು, ಇದಕ್ಕೆ ಪೂರಕವಾದ ವ್ಯವಸ್ಥೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಯವರು ಕಲ್ಪಿಸಿದ್ದು, ಹತ್ತು ಹಲವು ಯೋಜನೆಗಳನ್ನು ಸಮಾಜಕ್ಕೆ ನೀಡುತ್ತಿದ್ದಾರೆ ಎಂದರು.

ಜೊತೆಗೆ ಮಹಿಳೆಯರಲ್ಲಿ ಇರಬೇಕಾದ ಸಾಮಾನ್ಯ ಕಾನೂನು ಅರಿವು ಕುರಿತು ಮಾಹಿತಿ ನೀಡಿದರು. ಇತ್ತೀಚಿನ ದಿನಗಳಲ್ಲಿ ಕಳ್ಳತನ, ದರೋಡೆ ಹೆಚ್ಚೆಚ್ಚು ನಡೆಯುತ್ತಿದ್ದು, ಇದರ ಬಗ್ಗೆ ಜಾಗೃತ ರಾಗುವಂತೆ ಮಕ್ಕಳಲ್ಲಿ ಮೊಬೈಲ್ ಬಳಕೆಯ ಕುರಿತು ಮುಂಜಾಗ್ರತೆ ಕ್ರಮವನ್ನು ವಹಿಸುವಂತೆ ಜಾಗೃತೆ ವಹಿಸುವುದು. ಮತ್ತು ಇನ್ನೂ ಹೆಚ್ಚಿನ ಕಡೆಗಳಲ್ಲಿ ಬಾಲ್ಯ ವಿವಾಹಗಳು ನಡೆಯುತ್ತಿದ್ದು, ಇದನ್ನು ತಡೆಗಟ್ಟುವಂತೆ ಮತ್ತು ಇದರ ಮಾಹಿತಿ ನೀಡಲು ತಿಳಿಸಿದರು.

ಮಾನಸ ಧಾರೆ ಸಂಸ್ಥೆಯ ನಿರ್ದೇಶಕರಾಗಿರುವ ಜೋಶ್ ಕುಟ್ಟಿ ರವರು ಆಟೋಟ ಸ್ಪರ್ಧೆ ಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಕಲಾವತಿ, ನಿರೂಪಣೆ ಜ್ಞಾನವಿಕಾಸ ಸಮನ್ವಯಾಧಿಕಾರಿ ಶ್ವೇತ, ಸ್ವಾಗತ ವಲಯದ ಮೇಲ್ವಿಚಾರಕಿ ಶಶಿಕಲಾ, ಸೇವಾ ಪ್ರತಿನಿಧಿ ಪೂರ್ಣಿಮಾ, ಹಾಲಿನ ಡೈರಿ ಅಧ್ಯಕ್ಷೆ ಪ್ರಮೀಳಾ ಮತ್ತು ಕೇಂದ್ರ ಸದಸ್ಯರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ಜರುಗಿತು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!