Friday, September 20, 2024

ಪ್ರಾಯೋಗಿಕ ಆವೃತ್ತಿ

ಮಂಡ್ಯದ ಆಲೆಮನೆಯಲ್ಲೇ ನಡೆಯುತ್ತಿತ್ತು ಹೆಣ್ಣುಭ್ರೂಣ ಪತ್ತೆ ಸ್ಕ್ಯಾನಿಂಗ್ ! : 9 ಮಂದಿ ಅರೆಸ್ಟ್

ಮಂಡ್ಯದ ಆಲೆಮನೆಯೊಂದರಲ್ಲಿ ಹೆಣ್ಣು ಭ್ರೂಣ ಪತ್ತೆ ಹಚ್ಚುವುದಕ್ಕಾಗಿ ಗರ್ಭಿಣಿಯರ ಸ್ಕ್ಯಾನಿಂಗ್ ನಡೆಸಿ, ಅನಂತರ ಮೈಸೂರಿನ ಉದಯಗಿರಿಯ ಆಸ್ಪತ್ರೆಯೊಂದರಲ್ಲಿ ಭ್ರೂಣ ಹತ್ಯೆ ನಡೆಸುತ್ತಿದ್ದ ಜಾಲವನ್ನು ಪತ್ತೆ ಹಚ್ಚಿರುವ ಬೆಂಗಳೂರಿನ ಬೈಯಪ್ಪನಹಳ್ಳಿ ಪೊಲೀಸರು, ನಾಲ್ವರು ವೈದ್ಯರು ಸೇರಿ 9 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಚೆನ್ನೈ ಮೂಲದ ವೈದ್ಯ ಡಾ.ತುಳಸಿರಾಮ್​, ಡಾ.ಚಂದನ್ ಬಲ್ಲಾಳ್, ಡಾ.ಚಂದನ್​ ಬಲ್ಲಾಳ್​ ಪತ್ನಿ ಮೀನಾ, ಲ್ಯಾಬ್​ ಟೆಕ್ನಿಷಿಯನ್ ನಿಸ್ಸಾರ್, ಮೈಸೂರಿನ ಖಾಸಗಿ ಆಸ್ಪತ್ರೆ ರಿಸೆಪ್ಷನಿಸ್ಟ್ ರಿಜ್ಮಾ ಬಂಧಿತರು. ಮಂಡ್ಯದ ಯಾವ ಗ್ರಾಮದ ಆಲೆಮನೆಯಲ್ಲಿ ಸ್ಕ್ಯಾನಿಂಗ್ ನಡೆಯುತ್ತಿತ್ತು ಎಂಬುದು ಇನ್ನಷ್ಟೇ ಪತ್ತೆ ಆಗಬೇಕಿದೆ.

ಆರೋಪಿಗಳು ಸುಮಾರು 2 ವರ್ಷಗಳಿಂದ ನಿರಂತರವಾಗಿ 900 ಹೆಣ್ಣು ಭ್ರೂಣ ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಹೆಣ್ಣು ಭ್ರೂಣ ಹತ್ಯೆ ಪ್ರಕರಣದಲ್ಲಿ ಕಳೆದ ಅಕ್ಟೋಬರ್‌ನಲ್ಲಿ ಶಿವನಂಜೇಗೌಡ, ವೀರೇಶ್, ನವೀನ್ ಮತ್ತು ನಯನ್ ಎಂಬುವವರನ್ನು ಪೊಲೀಸರು ಬಂಧಿಸಿದ್ದರು. ಬಂಧಿತರನ್ನು ವಿಚಾರಣೆಗೆ ಒಳಗೊಳಪಡಿಸಿದಾಗ ವೈದ್ಯರ ಹೆಸರನ್ನು ಬಾಯಿಬಿಟ್ಟಿದ್ದಾರೆ.

ಒಂಬತ್ತು ಆರೋಪಿಗಳು ಸೇರಿ ಸಿಂಡಿಕೇಟ್ ಮಾಡಿಕೊಂಡು ವ್ಯವಸ್ಥಿತವಾಗಿ ಕೃತ್ಯ ಎಸಗುತಿದ್ದರು. ಪ್ರತಿ ತಿಂಗಳು 20 ರಿಂದ 25 ಹೆಣ್ಣು ಭ್ರೂಣ ಹತ್ಯೆ ಮಾಡುತ್ತಿದ್ದರು. ಕಳೆದ ಎರಡು ವರ್ಷಗಳಲ್ಲಿ ಸುಮಾರು 900ಕ್ಕೂ ಹೆಚ್ಚು ಭ್ರೂಣ ಹತ್ಯೆ ಮಾಡಿದ್ದಾರೆ ಎಂದು ವಿಚಾರಣೆ ವೇಳೆ ತಿಳಿದುಬಂದಿದೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಮೈಸೂರಿನ ಉದಯಗಿರಿಯಲ್ಲಿನ ಮಾತಾ ಆಸ್ಪತ್ರೆ ಮತ್ತು ರಾಜ್ ಕುಮಾರ್ ರಸ್ತೆಯ ಆಯುರ್ವೇದಿಕ್ ಫೈಲ್ಸ್ ಡೇ ಕೇರ್ ಸೆಂಟರ್ ಅನ್ನು ಸಹ ಪೊಲೀಸರು ಸೀಜ್ ಮಾಡಿದ್ದು, ಆಯುರ್ವೇದ ಡೇ ಕೇರ್ ಸೆಂಟರ್‌ನಲ್ಲಿಯೇ ಭ್ರೂಣ ಹತ್ಯೆ ನಡೆಯುತಿತ್ತು ಎಂಬುದು ಬಯಲಿಗೆ ಬಂದ ಹಿನ್ನೆಲೆ ಸೀಜ್ ಮಾಡಲಾಗಿದೆ.

ಕೃಪೆ: ಈದಿನ.ಕಾಂ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!