Friday, November 20, 2026

ಪ್ರಾಯೋಗಿಕ ಆವೃತ್ತಿ

ನಾಗಮಂಗಲ | ಏ.18 ಕ್ಕೆ ಪಕ್ಷೇತರ ಅಭ್ಯರ್ಥಿಯಾಗಿ ಫೈಟರ್ ರವಿ ನಾಮಪತ್ರ

ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವ ಮಲ್ಲಿಕಾರ್ಜುನ್ (ಫೈಟರ್ ರವಿ)  ನಾಗಮಂಗಲ ವಿಧಾನಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಏ.18ರ ಮಂಗಳವಾರದಂದು ಮಧ್ಯಾಹ್ನ 12:00 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ.

ಇದನ್ನೂ ಓದಿ : ಫೈಟರ್ ರವಿಯನ್ನು ನಡುನೀರಿನಲ್ಲಿ ಕೈ ಬಿಟ್ಟ ಬಿಜೆಪಿ : ಮುಂದಿನ ದಾರಿ ಏನು ?

ಕಳೆದ 1 ವರ್ಷದಿಂದ ಕ್ಷೇತ್ರದ ಜನರೊಂದಿಗೆ ಒಟನಾಟ ಹೊಂದಿದ್ದ ಫೈಟರ್ ರವಿ ನಾಗಮಂಗಲ ಕ್ಷೇತ್ರ ವ್ಯಾಪ್ತಿಯಲ್ಲಿ ಸುಮಾರು 210 ಗ್ರಾಮಗಳಿಗೆ ಶುದ್ಧ ಕುಡಿಯುವ ನೀರಿನ ಘಟಕಗಳು, 120 ಶಾಲೆ-ಕಾಲೇಜುಗಳಿಗೆ ಶುದ್ದ ಕುಡಿಯುವ ನೀರಿನ ಘಟಕಗಳು, ಸುಮಾರು 500ಕ್ಕೂ ಹೆಚ್ಚು ದೇವಾಲಯಗಳಿಗೆ ಸಹಾಯಧನ, ಕ್ಷೇತ್ರದ ಪ್ರತಿ ಹೋಬಳಿಯಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸಿ ಜನರಿಗೆ ಆರೋಗ್ಯ ಸೇವೆ ಒದಗಿಸುವ ಕೆಲಸವನ್ನು ಯಶಸ್ವಿಯಾಗಿ ಮಾಡಿ ಫೈಟರ್ ರವಿ ಸೈ ಎನಿಸಿಕೊಂಡಿದ್ದರು. ಆದರ ಬಿಜೆಪಿ ಟಿಕೆಟ್ ನಿರಾಕರಿಸಿದ್ದರಿಂದ ರಾಜೀನಾಮೆ ನೀಡಿ ಪಕ್ಷೇತರವಾಗಿ ಕಣಕ್ಕೆ ಇಳಿಯಲು ಸಿದ್ದರಾಗಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ