Saturday, November 21, 2026

ಪ್ರಾಯೋಗಿಕ ಆವೃತ್ತಿ

ಆಂಜನೇಯ ದೇವಸ್ಥಾನ ಕುರಿತು ಪಿಐಎಲ್ ದಾಖಲು: ಮಂಜುನಾಥ್

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿಯು ಈ ಹಿಂದೆ ಮೂಡಲ ಬಾಗಿಲು ಆಂಜನೇಯ ದೇವಸ್ಥಾನವಾಗಿತ್ತು ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಬಜರಂಗ ಸೇನೆ ವತಿಯಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಯನ್ನು ಉಚ್ಛ ನ್ಯಾಯಾಲಯಕ್ಕೆ ಸಲ್ಲಿಸಿದ್ದು, ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಕೈಗೆತ್ತಿಕೊಂಡಿದೆ ಎಂದು ಬಜರಂಗಸೇನೆ ರಾಜ್ಯಾಧ್ಯಕ್ಷ ಬಿ.ಮಂಜುನಾಥ್ ತಿಳಿಸಿದರು.

ಮಂಡ್ಯದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಆಂಜನೇಯ ಸ್ವಾಮಿ ದೇವಸ್ಥಾನದ ಸರ್ವೆ ಹಾಗೂ ಆರ್ಕಿಲಾಜಿಕಲ್ ಸರ್ವೆ ಆಫ್ ಇಂಡಿಯಾ ವ್ಯಾಪ್ತಿಗೆ ಒಳಪಡುವ ಮಸೀದಿ ಒಳಗೆ ಮದರಸ ನಡೆಸುತ್ತಾ ಅಲ್ಲೇ ವಿದ್ಯಾರ್ಥಿಗಳು ವಾಸ್ತವ್ಯ ಹೂಡಿದ್ದಾರೆ. ಇವರನ್ನು ತೆರೆವುಗೊಳಿಸುವಂತೆ ಉಚ್ಚ ನ್ಯಾಯಾಲಯದಲ್ಲಿ ಬಜರಂಗ ಸೇನೆ ವತಿಯಿಂದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು ,ಈ ಅರ್ಜಿಯನ್ನು ನ್ಯಾಯಾಲಯ ಪುರಸ್ಕರಿಸಿದೆ ಎಂದರು .

ಈ ಅರ್ಜಿಯ ವಿಚಾರಣೆ ಜುಲೈ 11ರಂದು ನಿಗದಿಯಾಗಿದೆ. ಈ ವಿಚಾರದಲ್ಲಿ ಐತಿಹಾಸಿಕ ಪ್ರಮಾದಕ್ಕೆ ನ್ಯಾಯ ಸಿಗುವ ನಂಬಿಕೆ ಇದೆ. ಯಾವುದೇ ಪಾರಂಪರಿಕ ಕಟ್ಟಡಗಳಲ್ಲಿ ಹೊರಗಿನವರು ಉಳಿದುಕೊಳ್ಳಲು ಕಾನೂನಿನಡಿ ಅವಕಾಶವಿಲ್ಲ .ಆದರೂ ಸಹ ಅಕ್ರಮವಾಗಿ ಮದರಸ ನಡೆಸಲು ಅನುವು ಮಾಡಿಕೊಡಲಾಗಿದೆ .ಇಲ್ಲಿ ಪಾರಂಪರಿಕ ಕಟ್ಟಡ ಹಾಗೂ ದೇವಸ್ಥಾನದ ಕಂಬಗಳನ್ನು ವಿರೂಪ ಗೊಳಿಸಲಾಗುತ್ತಿದೆ. ಈ ಬಗ್ಗೆ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು .

ಗೋಷ್ಠಿಯಲ್ಲಿ ಬಜರಂಗ ಸೇನೆಯ ವೈಎಚ್ ಹರ್ಷ, ಆರ್ ಚೇತನ್ ಕುಮಾರ್, ರಾಮಚಂದ್ರು, ಸತೀಶ್, ದೀಪಕ್ ಉಪಸ್ಥಿತರಿದ್ದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ