Sunday, May 5, 2024

ಪ್ರಾಯೋಗಿಕ ಆವೃತ್ತಿ

ದ್ವೇಷ ಹರಡಲು ಯತ್ನ| ಬಿಜೆಪಿಯ ಅಧಿಕೃತ ‘ಎಕ್ಸ್’ ಖಾತೆ ವಿರುದ್ಧ ಎಫ್‌ಐಆರ್‌ ದಾಖಲು

ವಿವಿಧ ಗುಂಪುಗಳು ಮತ್ತು ವರ್ಗಗಳ ನಡುವೆ ದ್ವೇಷ ಹರಡಲು ಮತ್ತು ಉತ್ತೇಜಿಸಲು ಯತ್ನಿಸುತ್ತಿರುವ ಆರೋಪದ ಮೇಲೆ ಬಿಜೆಪಿಯ ಅಧಿಕೃತ ಎಕ್ಸ್ ಖಾತೆ ವಿರುದ್ಧ ಚುನಾವಣಾ ಆಯೋಗ ಎಫ್‌ಐಆರ್‌ನ್ನು ದಾಖಲಿಸಿದೆ.

ಈ ಕುರಿತು ಚುನಾವಣಾ ಆಯೋಗ ಎಕ್ಸ್ ಖಾತೆಯಲ್ಲಿ ಮಾಹಿತಿಯನ್ನು ನೀಡಿದ್ದು, ಕಾಂಗ್ರೆಸ್ ಪ್ರಣಾಳಿಕೆಯೋ ಅಥವಾ ಮುಸ್ಲಿಂ ಲೀಗ್ ಪ್ರಣಾಳಿಕೆಯೋ ಎಂದು ಬಿಜೆಪಿ ‘ಎಕ್ಸ್’ ನಲ್ಲಿ ಪೋಸ್ಟ್ ಮಾಡಿತ್ತು. ಈ ಸಂಬಂಧ ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ಫ್ಲೈಯಿಂಗ್ ಸ್ಕ್ವಾಡ್ಸ್ ತಂಡವು ಎಫ್‌ಐಆರ್ ದಾಖಲಿಸಿದೆ ಎಂದು ತಿಳಿಸಿದೆ.

ಜನತಾ ಪ್ರಾತಿನಿಧ್ಯ ಕಾಯಿದೆಯ ಸೆಕ್ಷನ್ 125 ಮತ್ತು ಭಾರತೀಯ ದಂಡ ಸಂಹಿತೆಯ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ)ಯಡಿ ಬಿಜೆಪಿಯ ಅಧಿಕೃತ ಎಕ್ಸ್‌ ಖಾತೆಯ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಏಪ್ರಿಲ್ 6ರಂದು ರಾಜಸ್ಥಾನದ ಅಜ್ಮೀರ್‌ನಲ್ಲಿ ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ, ಕಾಂಗ್ರೆಸ್ ಪ್ರಣಾಳಿಕೆಯನ್ನು “ಸುಳ್ಳಿನ ಕಂತೆ” ಎಂದು ಕರೆದಿದ್ದರು ಮತ್ತು ಪ್ರಣಾಳಿಕೆಯ ಪ್ರತಿ ಪುಟವು ಭಾರತವನ್ನು ತುಂಡು ಮಾಡುವ ಪ್ರಯತ್ನದ ಬಗ್ಗೆ ಗಬ್ಬು ವಾಸನೆ ಬೀರುತ್ತಿದೆ ಎಂದು ಹೇಳಿದ್ದರು. ಮುಸ್ಲಿಂ ಲೀಗ್‌ನ ಮುದ್ರೆಯಂತೆ ಈ ಪ್ರಣಾಳಿಕೆಯಿದೆ ಅಂದರೆ ಮುಸ್ಲಿಂಲೀಗ್‌ ಸಿದ್ದಾಂತವನ್ನು ಪ್ರತಿಬಿಂಬಿಸುತ್ತದೆ ಎಂದು ಹೇಳಿದ್ದರು. ಇಂದು ಕಾಂಗ್ರೆಸ್‌ಗೆ ಯಾವುದೇ ತತ್ವಗಳು ಅಥವಾ ನೀತಿಗಳಿಲ್ಲ. ಕಾಂಗ್ರೆಸ್ ಎಲ್ಲವನ್ನೂ ಒಪ್ಪಂದದ ಮೇಲೆ ನೀಡಿದೆ ಮತ್ತು ಇಡೀ ಪಕ್ಷವನ್ನು ಹೊರಗುತ್ತಿಗೆ ನೀಡಿದಂತಿದೆ ಎಂದು ಪ್ರಧಾನಿ ಮೋದಿ ಹೇಳಿದ್ದರು.

“>

ಈ ಬಗ್ಗೆ ಮಾಜಿ ಕೇಂದ್ರ ಸಚಿವ ಸಲ್ಮಾನ್ ಖುರ್ಷಿದ್, ರಾಜ್ಯಸಭಾ ಸಂಸದ ಮುಕುಲ್ ವಾಸ್ನಿಕ್, ಪವನ್ ಖೇರಾ ಮತ್ತು ಗುರುದೀಪ್ ಸಪ್ಪಲ್ ಅವರ ನಿಯೋಗ ಚುನಾವಣಾ ಅಧಿಕಾರಿಗಳನ್ನು ಭೇಟಿ ಮಾಡಿ ದೂರು ನೀಡಿದ್ದರು. ಆದರೆ ಪ್ರಧಾನಿಯ ವಿರುದ್ಧ ಈವರೆಗೆ ಚುನಾವಣಾ ಆಯೋಗ ಯಾವುದೇ ಕ್ರಮವನ್ನು ಕೈಗೊಂಡಿಲ್ಲ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!