Tuesday, November 24, 2026

ಪ್ರಾಯೋಗಿಕ ಆವೃತ್ತಿ

ಹುತಾತ್ಮ ಯೋಧರಿಗೆ ಅಂತಿಮ ನಮನ; ನೆರವು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಜಮ್ಮು ಕಾಶ್ಮೀರದಲ್ಲಿ ಅಪಘಾತಕ್ಕೆ ಈಡಾಗಿ ಹುತಾತ್ಮರಾದ ಯೋಧರ ಪಾರ್ಥಿವ ಶರೀರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಂತಿಮ ಗೌರವ ಸಲ್ಲಿಸಿದರು.

ಬೆಳಗಾವಿಯ ಸೇನಾ ಯುದ್ಧ ಸ್ಮಾರಕದಲ್ಲಿ ಸುಬೇದಾರ್ ದಯಾನಂದ ತಿರುಕಣ್ಣನವರ್, ಮಹೇಶ್ ಮಾರಿಗೊಂಡ ಅವರ ಪಾರ್ಥಿವ ಶರೀರಕ್ಕೆ ಪುಷ್ಪ ನಮನ ಸಲ್ಲಿಸಿ ಅಂತಿಮ ಗೌರವ ಸಲ್ಲಿಸಿದರು.

ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು, ಯೋಧರ ಬದುಕು, ಜೀವನ, ವೃತ್ತಿ ಅತ್ಯಂತ ಉನ್ನತವಾದದು. ನಮ್ಮ ರಾಜ್ಯದ ಯೋಧರು ಅಪಘಾತದಲ್ಲಿ ಹುತಾತ್ಮರಾಗಿರುವುದು ಅತ್ಯಂತ ನೋವಿನ ಸಂಗತಿ. ನಾಲ್ವರು ಯೋಧರ ಆತ್ಮಕ್ಕೆ ಶಾಂತಿ ಕೋರುತ್ತಾ, ಅವರ ಕುಟುಂಬದವರ ನೋವಿನಲ್ಲಿ ನಾನು ಭಾಗಿಯಾಗುತ್ತೇನೆ ಎಂದರು.

ಸರಕಾರದಿಂದ ನಿಯಮಾನುಸಾರ ಹುತಾತ್ಮರ ಕುಟುಂಬಕ್ಕೆ ಸಲ್ಲಬೇಕಾದ ಸಕಲ ನೆರವನ್ನೂ ಒದಗಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಅವರು ಭರವಸೆ ನೀಡಿದರು.

ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ 

ಮೈಸೂರಿನ ಕೆಆರ್ ಎಸ್ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ರಸ್ತೆ ಎಂದು ಹೆಸರಿಡುವ ಬಗ್ಗೆ ಬಿಜೆಪಿಯವರ ವಿರೋಧ ವ್ಯಕ್ತವಾಗಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಯಾವುದೇ ಒಳ್ಳೆಯ ಕೆಲಸವನ್ನು ವಿರೋಧಿಸುವುದೇ ಬಿಜೆಪಿಯವರ ಅಭ್ಯಾಸ. ಆದರೆ ಬಿಜೆಪಿಯವರೇ ಆದ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈಸೂರು ನಗರಪಾಲಿಕೆಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಹುತಾತ್ಮರಾದ ದಯಾನಂದ ತಿರುಕಣ್ಣನವರ್ ಬೆಳಗಾವಿ, ಧನರಾಜ್ ಸುಭಾಷ್ ಚಿಕ್ಕೋಡಿ, ಮಹೇಶ್ ನಾಗಪ್ಪ ಬಾಗಲಕೋಟೆ, ಅನೂಪ್ ಪೂಜಾರಿ ಕುಂದಾಪುರ ಇವರ ಆತ್ಮಗಳಿಗೆ ಚಿರಶಾಂತಿ ದೊರಕಲಿ ಅಂತ ಪ್ರಾರ್ಥನೆ ಮಾಡ್ತೀನಿ, ಸರ್ಕಾರದಿಂದ ಕುಟುಂಬ ವರ್ಗಕ್ಕೆ ಪರಿಹಾರ ನೀಡಲಾಗುವುದು ಎಂದರು.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ