Thursday, September 19, 2024

ಪ್ರಾಯೋಗಿಕ ಆವೃತ್ತಿ

ಸನಾತನ ವಿವಾದ| ಸ್ಟಾಲಿನ್ ಹೇಳಿಕೆ ತಿರುಚಿದ ಪತ್ರಕರ್ತ ರೈ, ಬಿಜೆಪಿ ನಾಯಕ ಮಾಳವೀಯ ವಿರುದ್ಧ FIR

ಸನಾತನ ಧರ್ಮದ ಕುರಿತು ತಮಿಳುನಾಡು  ಅವರ ಹೇಳಿಕೆಯನ್ನು ಪತ್ರಕರ್ತ ಪಿಯೂಷ್ ರೈ ಮತ್ತು ಬಿಜೆಪಿಯ ಸಾಮಾಜಿಕ ಮಾಧ್ಯಮ ವಿಭಾಗದ ಮುಖ್ಯಸ್ಥ ಅಮಿತ್ ಮಾಳವೀಯ ತಿರುಚಿ ದ್ವೇಷ ಹರಡಿದ್ದಕ್ಕೆ ಅವರ ವಿರುದ್ಧ ಪೊಲೀಸರು ಬುಧವಾರ ಎಫ್‌ಐಆರ್ ದಾಖಲಿಸಿದ್ದಾರೆ. ಸ್ಟಾಲಿನ್ ತಲೆ ತೆಗೆಯಬೇಕೆಂದು ಕರೆ ನೀಡಿದ್ದ ಅಯೋಧ್ಯೆ ಸ್ವಾಮೀಜಿ ವಿರುದ್ಧವೂ ತಮಿಳುನಾಡು ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ.

ಸೆಪ್ಟೆಂಬರ್ 2 ರಂದು ಚೆನ್ನೈನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಅವರು, ಸನಾತನ ಧರ್ಮ ಡೆಂಗ್ಯೂ ಮತ್ತು ಮಲೇರಿಯಾ ಇದ್ದಂತೆ, ಅದನ್ನು “ನಿರ್ಮೂಲನೆ ಮಾಡಬೇಕು” ಎಂದು ಹೇಳಿದ್ದರು.

ಈ ಹೇಳಿಕೆ ಬೆನ್ನಲ್ಲೇ ಅಯೋಧ್ಯೆಯ ಸ್ವಾಮೀಜಿ ಚವಾನಿ ದೇವಸ್ಥಾನದ ಧರ್ಮದರ್ಶಿ ರಾಮಚಂದ್ರ ದಾಸ್ ಪರಮಹಂಸ ಆಚಾರ್ಯ ಅವರು, ಸಚಿವ ಉದಯನಿಧಿ ಸ್ಟಾಲಿನ್ ತಲೆ ತೆಗೆದವರಿಗೆ 10 ಕೋಟಿ ರೂಪಾಯಿ ಬಹುಮಾನ ಘೋಷಿಸಿದರು. ಹಾಗಾಗಿ ಅವರ ವಿರುದ್ಧ ಬುಧವಾರದಂದು ಮಧುರೈ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಈ ಮಧ್ಯೆ ಬಿಜೆಪಿ ನಾಯಕ ಮಾಳ್ವಿಯಾ ಅವರು ಸ್ಟಾಲಿನ್ ಅವರ ಹೇಳಿಕೆಗಳನ್ನು ತಿರುಚಿ, ವಿವಿಧ ವರ್ಗಗಳ ಜನರ ನಡುವೆ ದ್ವೇಷವನ್ನು ಸೃಷ್ಟಿಸಲು ತಪ್ಪು ಮಾಹಿತಿಯನ್ನು ಹರಡಿದ್ದಾರೆ. ಹಾಗಾಗಿ ಅವರ ವಿರುದ್ಧವೂ ತಿರುಚಿರಾಪಳ್ಳಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ.

”ಸನಾತನ ಧರ್ಮವನ್ನು ಅನುಸರಿಸುವ ಭಾರತದ 80% ಜನಸಂಖ್ಯೆಯ “ಜನಾಂಗೀಯ ಹತ್ಯೆ”ಗಾಗಿ ಸ್ಟಾಲಿನ್ ಕರೆ ನೀಡಿದ್ದಾರೆ” ಎಂದು ಬಿಜೆಪಿ ನಾಯಕ ಮಾಳ್ವಿಯಾ ಟ್ವೀಟ್‌ನಲ್ಲಿ ಹೇಳಿದ್ದಾರೆ.

ಸ್ಟಾಲಿನ್ ಅವರು ಎಂದಿಗೂ ನರಮೇಧಕ್ಕೆ ಕರೆ ನೀಡಿಲ್ಲ ಎಂದು ಸ್ಪಷ್ಟೀಕರಣ ನೀಡಿದ ನಂತರವೂ ಮಾಳವೀಯ ಅವರು “ನಕಲಿ ಸುದ್ದಿ” ಹರಡುವುದನ್ನು ಮುಂದುವರೆಸಿದ್ದಾರೆ ಎಂದು ದ್ರಾವಿಡ ಮುನ್ನೇತ್ರ ಕಳಗಂ ಪದಾಧಿಕಾರಿಯೊಬ್ಬರು ದೂರಿದ್ದಾರೆ.

ಉತ್ತರ ಪ್ರದೇಶ ಮೂಲದ ಪತ್ರಕರ್ತ ರೈ ಅವರು ವೀಡಿಯೊವೊಂದನ್ನು ಪೋಸ್ಟ್ ಮಾಡುವ ಮೂಲಕ ಜನರಲ್ಲಿ ಭಯವನ್ನುಂಟು ಮಾಡಿದ್ದಾರೆ ಮತ್ತು ಕೋಮುಗಲಭೆಗೆ ಕಾರಣವಾಗುವಂತೆ ಮಾಡಿದ್ದಾರೆ ಎಂದು ಆಡಳಿತಾರೂಢ ದ್ರಾವಿಡ ಮುನ್ನೇತ್ರ ಕಳಗಂನ ಮಧುರೈ ಘಟಕದ ಕಾನೂನು ವಿಭಾಗದ ಸಂಚಾಲಕ ಜೆ ದೇವಸೇನನ್ ಅವರು ದೂರು ನೀಡಿದ್ದಾರೆ.

ಆಚಾರ್ಯ ಮತ್ತು ರೈ ವಿರುದ್ಧ ಭಾರತೀಯ ದಂಡ ಸಂಹಿತೆ 153 (ಗಲಭೆ ಉಂಟು ಮಾಡಲು ಪ್ರಚೋದನೆ), 153 ಎ (ವಿವಿಧ ವರ್ಗಗಳ ಜನರ ನಡುವೆ ದ್ವೇಷವನ್ನು ಉತ್ತೇಜಿಸುವುದು), 504 (ಅಪರಾಧ ಬೆದರಿಕೆಗೆ ಶಿಕ್ಷೆ), 505 (1) (ಬಿ) (ಸಾರ್ವಜನಿಕರಿಗೆ ಪ್ರೇರೇಪಿಸುವ ಹೇಳಿಕೆಗಳು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಿಡಿಗೇಡಿತನ) ಮತ್ತು 506(2) (ಕ್ರಿಮಿನಲ್ ಬೆದರಿಕೆಗೆ ಶಿಕ್ಷೆ) ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ರೈ ವಿರುದ್ಧದ ಎಫ್‌ಐಆರ್ ಹಿಂಪಡೆಯಲು ಪತ್ರಕರ್ತರ ಬೇಡಿಕೆಗಳ ನಂತರ, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವ ಮೊದಲು ಕಾನೂನು ಅಭಿಪ್ರಾಯವನ್ನು ಪಡೆಯುವುದಾಗಿ ಪೊಲೀಸರು ತಿಳಿಸಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!