Friday, September 20, 2024

ಪ್ರಾಯೋಗಿಕ ಆವೃತ್ತಿ

ಪಿಡಿಓ ಮತ್ತು ಎಸ್ ಡಿಎಎ ವಿರುದ್ದ ಎಫ್ಐಆರ್ ದಾಖಲು

ಪಾಂಡವಪುರ ತಾಲೂಕಿನ ಜಕ್ಕನಹಳ್ಳಿ ಗ್ರಾಮ ಪಂಚಾಯಿತಿಯ ಹಣವನ್ನು ದುರುಪಯೋಗ ಮಾಡಿದ್ದಾರೆಂದು ಪಿಡಿಒ ಶಿವಣ್ಣ ಹಾಗೂ ಎಸ್ಡಿಎಎ ಲೀಲಾವತಿಯವರನ್ನು ಅಮಾನತುಗೊಳಿಸಿ, ಜಿಲ್ಲಾ ಪಂಚಾಯತ್ ಸಿಇಓ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿವ್ಯಪ್ರಭು ಆದೇಶ ಹೊರಡಿಸಿದ್ದಾರೆ.

ಅಧಿಕಾರ ದುರುಪಯೋಗ, ನಿಯಮಾವಳಿಗಳ ಉಲ್ಲಂಘನೆ ಹಾಗೂ ಸರ್ಕಾರದ ಬೊಕ್ಕಸಕ್ಕೆ ಆರ್ಥಿಕ ನಷ್ಟ ಉಂಟು ಮಾಡಿರುವ ಹಿನ್ನೆಲೆಯಲ್ಲಿ, ಆರೋಪಿತರನ್ನು ಅಮಾನತುಗೊಳಿಸಿ ಇಲಾಖೆಯ ವಿಚಾರಣೆಗೆ ಆದೇಶಿಸಿದ್ದಾರೆ.

ನೌಕರರು ಅಮಾನತು ಅವಧಿಯಲ್ಲಿ ಕರ್ನಾಟಕ ನಾಗರೀಕ ಸೇವಾ ಮಂಡಳಿ 1958ರ ನಿಯಮ 98ರ ಅನ್ವಯ ಜೀವನಾಧಾರ ಭತ್ಯೆ ಪಡೆಯಲು ಸಕ್ಷಮ ಹಾಗೂ  ಪ್ರಾಧಿಕಾರದಿಂದ ಅನುಮತಿ ಪಡೆಯದೆ ಕೇಂದ್ರಸ್ಥಾನ ಬಿಡಬಾರದು ಎಂದು ಆದೇಶದಲ್ಲಿ ತಿಳಿಸಿದ್ದಾರೆ.

15ನೇ ಹಣಕಾಸು ಯೋಜನೆಯಡಿ ಪಂಚಾಯತಿ ಅಧ್ಯಕ್ಷರು ಡಾಂಗಲ್ ಕೀ ಯನ್ನು ಉಪಯೋಗಿಸಿಕೊಂಡು ಹಣ ದುರುಪಯೋಗ ಮಾಡಿದ್ದಾರೆ ಎನ್ನುವ ದೂರು ಸ್ವೀಕರಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕಾರ್ಯನಿರ್ವಾಹಕ ಅಧಿಕಾರಿ ಅವರು ಸಹಾಯಕ ಲೆಕ್ಕಾಧಿಕಾರಿ ವ್ಯವಸ್ಥಾಪಕರು ಹಾಗೂ ಪ್ರಥಮ ದರ್ಜೆ ಸಹಾಯಕರನ್ನು ಒಳಗೊಂಡ ತಂಡ ರಚಿಸಿ ತನಿಖೆ ನಡೆಸಿದಾಗ ಈ ಪ್ರಕರಣ ಬೆಳಕಿಗೆ ಬಂದಿದೆ.

ಈ ತಂಡಗಳು ಗ್ರಾಮ ನೈರ್ಮಲ್ಯ ಮತ್ತು ಇತರೆ ಸಾಮಗ್ರಿಗಳ ಖರೀದಿಯಲ್ಲಿ ಯಾವುದೇ ದಾಖಲಾತಿಗಳನ್ನು ನಿರ್ವಹಿಸದಿರುವುದು ಮತ್ತು ನೇರವಾಗಿ ಹಣವನ್ನು ಪಾವತಿ ಮಾಡಿರುವುದನ್ನು ಪತ್ತೆ ಹಚ್ಚಿ ಸುಮಾರು 19,91,000 ರೂ ಗಳನ್ನು ದುರುಪಯೋಗ ಆಗಿರುವ ಬಗ್ಗೆ ವರದಿಯನ್ನು ಸಲ್ಲಿಸಿತು.

ಈ ಹಣದ ದುರುಪಯೋಗಕ್ಕೆ ಕಾರಣವಾದವರ ವಿರುದ್ಧ ಮೇಲುಕೋಟೆ ಪೊಲೀಸ್ ಠಾಣೆಯಲ್ಲಿ ತಾಲೂಕು  ಕಾರ್ಯನಿರ್ವಾಹಕರು ದೂರು ದಾಖಲಿಸಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯವರಿಗೆ ವರದಿ ಸಲ್ಲಿಸಿದ್ದರು.

ಆರೋಪಿತ ನೌಕರರ ವಿರುದ್ಧ ಕಲಂ 406, 408 ಹಾಗೂ 409 ಸೇರಿದಂತೆ  ಐಪಿಸಿ 34 ರ ರೀತ್ಯಾ ಪ್ರಕರಣ ದಾಖಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!