Thursday, July 25, 2024

ಪ್ರಾಯೋಗಿಕ ಆವೃತ್ತಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ| ಜಾರ್ಖಂಡ್‌ನಲ್ಲಿ ಐವರ ಬಂಧನ; ಬಂಧಿತರ ಸಂಖ್ಯೆ 18ಕ್ಕೆ ಏರಿಕೆ

ನೀಟ್‌-ಯುಜಿಸಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಇನ್ನೂ ಐವರನ್ನು ಬಂಧಿಸಿದ್ದು, ಪ್ರಕರಣದಲ್ಲಿ ಒಟ್ಟು ಬಂಧಿತರ ಸಂಖ್ಯೆ 18ಕ್ಕೆ ಏರಿಕೆಯಾಗಿದೆ. ಜಾರ್ಖಂಡ್‌ನ ದಿಯೋಘಾರ್ ಹಾಗೂ ರಾಂಚಿಯಲ್ಲಿ ಐವರನ್ನು ಬಂಧಿಸಿದ್ದಾರೆ.

ಬಂಧಿತ ಐವರನ್ನು ಹೆಚ್ಚಿನ ವಿಚಾರಣೆಗಾಗಿ ಪಾಟ್ನಾ ಹೈಕೋರ್ಟ್‌ಗೆ ಕರೆತರಲಾಗಿದೆ. ಬಂಧಿತರಲ್ಲಿ ಇಬ್ಬರಾದ ಅವದೇಶ್, ಅಭಿಷೇಕ್‌ ಅಪ್ಪ ಮಕ್ಕಳಾಗಿದ್ದು, ಮಗ ಅಭಿಷೇಕ್ ನೀಟ್‌ ಪರೀಕ್ಷೆ ಬರೆದಿದ್ದ. ಇಬ್ಬರು ರಾಂಚಿ ನಿವಾಸಿಗಳಾಗಿದ್ದಾರೆ.

ಅಭಿಷೇಕ್ ಪ್ರಮುಖ ಆರೋಪಿ ಸಿಖಂದರ್‌ ಯಾದವೆಂದು ಅವನೊಂದಿಗೆ ಸಂಪರ್ಕ ಹೊಂದಿದ್ದು, ಈತನೊಂದಿಗೆ ಜಾರ್ಖಂಡ್‌ನ ಉದ್ಯಮ ಯೋಜನೆಯೊಂದರಲ್ಲಿ ಪಾಲು ಹೊಂದಿದ್ದ.

ಪ್ರಕರಣಕ್ಕೆ ಸಂಬಂಧಿಸಿದಂತೆ ಈ ಮೊದಲು ಬಿಹಾರ ಪೊಲೀಸರು ಬಂಧಿಸಿರುವ 13 ಮಂದಿಯಲ್ಲಿ ನಾಲ್ವರು ನೀಟ್‌- ಯುಜಿ ಅಭ್ಯರ್ಥಿಗಳು ಹಾಗೂ ಅವರ ಕುಟುಂಬ ಸದಸ್ಯರಾಗಿದ್ದಾರೆ. ಪರೀಕ್ಷೆಗೂ ಮೊದಲು ಈ ಆರೋಪಿಗಳು ಅಂದಾಜು 35 ಜನ ವಿದ್ಯಾರ್ಥಿಗಳೊಂದಿಗೆ ಪ್ರಶ್ನೆಗಳನ್ನು ಹಂಚಿಕೊಂಡಿದ್ದಾರೆಂದು ಪೊಲೀಸರು ಶಂಕಿಸಿದ್ದಾರೆ.

ಬಂಧಿತರಲ್ಲಿ ಒಬ್ಬ ಆರೋಪಿಯು ಬಿಹಾರ ಲೋಕಸೇವಾ ಆಯೋಗ(ಬಿಪಿಎಸ್ಸಿ) ನಡೆಸಿದ್ದ ಶಿಕ್ಷಕರ ನೇಮಕಾತಿ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎಂದು ಶಂಕಿಸಲಾಗಿದೆ ಎಂಬುದಾಗಿ ಅಧಿಕಾರಿಗಳುಮಾಹಿತಿ ನೀಡಿದ್ದಾರೆ.

ಎಲ್ಲ ಆರೋಪಿಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಬಂಧಿತರಿಂದ ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಗಳು ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ವಶಕ್ಕೆ ಪಡೆಯಲಾಗಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!