Friday, November 20, 2026

ಪ್ರಾಯೋಗಿಕ ಆವೃತ್ತಿ

ಕೆ.ಎಸ್.ಆರ್.ಟಿ.ಸಿ ಬಸ್ಸುಗಳ ಮೇಲೆ ಪಂಚಗ್ಯಾರಂಟಿ ಪ್ರಚಾರ : ಸಿಎಂ ಸೂಚನೆ

ಪಂಚ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ, ಜನಜಾಗೃತಿ, ಹಾಗೂ ಮನೆಮನೆಗೆ ಮಾಹಿತಿ ತಲುಪಿಸುವ ಕುರಿತು ಸರ್ಕಾರಿ ಬಸ್ ಗಳ ಮೇಲೆ ಶಕ್ತಿ ಯೋಜನೆಯ ಭಿತ್ತಿಪತ್ರ ಅಳವಡಿಕೆ ಹಾಗೂ ಜಿಲ್ಲಾ, ತಾಲೂಕು ಗ್ಯಾರಂಟಿ ಸಮಿತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹಾಗೂ ಭತ್ಯೆ ಹೆಚ್ಚಳ ಕುರಿತು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಶಾಸಕರಾದ ದಿನೇಶ್ ಗೂಳಿಗೌಡ ಅವರ ಮನವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದ್ದಾರೆ.

ರಾಜ್ಯ ಸರ್ಕಾರದ ಮಹತ್ವಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಯಡಿ ಶಕ್ತಿ ಯೋಜನೆಯ ಕುರಿತಂತೆ ಹೆಚ್ಚಿನ ಪ್ರಚಾರಗೊಳಿಸಲು ರಾಜ್ಯದ ಕೆ.ಎಸ್.ಆರ್.ಟಿ.ಸಿ/ಬಿ.ಎಂ.ಟಿ.ಸಿ ಸಂಸ್ಥೆಯ ವಾಹನಗಳ ಮೇಲೆ ಪಂಚ ಗ್ಯಾರಂಟಿಯ ಭಿತ್ತಿ ಪತ್ರಗಳನ್ನು(STICKER) ಅಳವಡಿಸುವುದರ ಮೂಲಕ ಪಂಚ ಗ್ಯಾರಂಟಿ ಯೋಜನೆಯ ಪ್ರಚಾರವನ್ನು ಯಶಸ್ವಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡುವಂತೆ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಅವರಿಗೆ ಪತ್ರ ಮುಖೇನ ಮನವಿ ಮಾಡಿದ್ದರು.

ಗ್ಯಾರಂಟಿ ಸರ್ಕಾರ ಗ್ಯಾರಂಟಿ ನಾಯಕರು 
ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರ 98 ಸಾವಿರ ಕೋಟಿ ರೂ.ಗೂ ಅಧಿಕ ಹಣ ವ್ಯಯ ಮಾಡಿದೆ. ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಬಜೆಟ್ ನಲ್ಲಿ 52 ಸಾವಿರ ಕೋಟಿ ರೂ. ಹಣ ಮೀಸಲಿರಿಸಿದೆ. ಶಕ್ತಿ ಯೋಜನೆ” ಅಡಿಯಲ್ಲಿ ಮಹಿಳೆಯರು ಒಟ್ಟು 594.70 ಕೋಟಿ ಉಚಿತ ಬಸ್ ಪ್ರಯಾಣಗಳನ್ನು ಪಡೆದುಕೊಂಡಿದ್ದಾರೆ. ಇದರ ಒಟ್ಟು ಮೌಲ್ಯ 15265.05 ಕೋಟಿ ರೂಪಾಯಿ ಆಗಿದೆ. ಇಷ್ಟೊಂದು ದೊಡ್ಡ ಮಟ್ಟದ ಕಾರ್ಯಕ್ರಮದ ಕುರಿತು ಬಸ್ ಗಳ ಮೇಲೆ ಭಿತ್ತಿಪತ್ರ ಅಳವಡಿಸುವುದರಿಂದ ಯೋಜನೆಯ ಮಹತ್ವ ಜನರಿಗೆ ಅರಿವಾಗುತ್ತದೆ. ಜೊತೆಗೆ ಮತ್ತಷ್ಟು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲು ಸಹಕಾರಿಯಾಗಲಿದೆ. ಮನವಿಗೆ ಸ್ಪಂದಿಸಿ ಕ್ರಮಕ್ಕೆ ಸೂಚಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ರವರು ಸೂಚಿಸಿದ್ದಾರೆ

-ದಿನೇಶ್ ಗೂಳಿಗೌಡ
ಉಪಾಧ್ಯಕ್ಷರು, ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಹಾಗೂ ಶಾಸಕರು

ರಾಜ್ಯದ ಜನರಿಗೆ ಸರ್ಕಾರದ ಜನಕಲ್ಯಾಣ ಕಾರ್ಯಕ್ರಮದ ಅರಿವು ಮೂಡಿಸಲು ಯುನೈಟೆಡ್ ಕಿಂಗ್ಡಮ್ ವಿಶ್ವ ದಾಖಲೆಯ ಪ್ರಮಾಣ ಪತ್ರದಲ್ಲಿ ಉಲ್ಲೇಖಿಸಿರುವಂತೆ “ಕರ್ನಾಟಕದಲ್ಲಿ ಲಭ್ಯವಿರುವ ಅತಿ ಹೆಚ್ಚು ಮಹಿಳಾ ಉಚಿತ ಪ್ರಯಾಣ ಟಿಕೆಟ್ ಗಳ” ವಿಶ್ವ ದಾಖಲೆಯನ್ನು ಇದು ಪ್ರಮಾಣೀಕರಿಸುತ್ತದೆ.

“ಶಕ್ತಿ ಯೋಜನೆ” ಅಡಿಯಲ್ಲಿ ಮಹಿಳೆಯರು ಒಟ್ಟು 595 ಕೋಟಿ ಉಚಿತ ಬಸ್ ಪ್ರಯಾಣಗಳನ್ನು ಪಡೆದುಕೊಂಡಿದ್ದಾರೆ. ಇದರ ಮೊತ್ತ 15265 ಕೋಟಿ ರೂಪಾಯಿ ಆಗಿದೆ ಈ ಮಹೋನ್ನತ ಮೈಲಿಗಲ್ಲನ್ನು ಉಚಿತ ಸಾರ್ವಜನಿಕ ಸಾರಿಗೆಯ ಮೂಲಕ ಮಹಿಳೆಯರನ್ನು ಸಬಲೀಕರಣಗೊಳಿಸುವ ಈ ಅಸಾಧಾರಣ ಉಪಕ್ರಮವನ್ನು ಗುರುತಿಸಿ, ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಈ ಸಾಧನೆಯನ್ನು ಸಾಮಾಜಿಕ ಕಲ್ಯಾಣ ಮತ್ತು ಲಿಂಗ ಸಮಾನತೆಗೆ ಮಹತ್ವದ ಕೊಡುಗೆ ಎಂದು ಗೌರವಿಸಿರುತ್ತಾರೆ.

ಆದ್ದುದರಿಂದ ಲಂಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ ಈ ಸಾಧನೆಯನ್ನು ಸಾಮಾಜಿಕ ಕಲ್ಯಾಣ ಮತ್ತು ಲಿಂಗ ಸಮಾನತೆಗೆ ಮಹತ್ವದ ಕೊಡುಗೆ ಎಂದು ಉಲ್ಲೇಖಿಸಿರುವ ಪ್ರಮಾಣ ಪತ್ರವನ್ನು ಬಸ್ ಗಳ ಮೇಲೆ ಅಳವಡಿಸುವಂತೆ ಸಂಬಂದಪಟ್ಟ ಇಲಾಖಾ ಮುಖ್ಯಸ್ಥರಿಗೆ ಸೂಚಿಸುವಂತೆ ಶಾಸಕರಾದ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳಿಗೆ ಕೋರಿದ್ದರು.

ಗೌರವಧನ, ಸಭಾ ಭತ್ಯೆಯನ್ನು ಹೆಚ್ಚಳಕ್ಕೆ ಮನವಿ
ಇದರ ಜೊತೆಗೆ , ತಾಲೂಕು ಗ್ಯಾರಂಟಿ ಸಮಿತಿಯ ಜಿಲ್ಲಾ, ತಾಲೂಕು ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಗೌರವಧನ ಹಾಗೂ ಸಭಾ ಭತ್ಯೆಯನ್ನು ಹೆಚ್ಚಳ ಮಾಡುವಂತೆ ಕೂಡ ಮನವಿ ಮಾಡಿದ್ದರು. ಗ್ಯಾರಂಟಿ ಸಮಿತಿಯ ಜಿಲ್ಲಾ ತಾಲೂಕು ಅಧ್ಯಕ್ಷರು, ಉಪಾಧ್ಯಕ್ಷರು ಸದಸ್ಯರು ವಿಧಾನಸೌಧ, ವಿಕಾಸಸೌಧ ಪ್ರವೇಶಿಸುವ ಸಂದರ್ಭದಲ್ಲಿ ಅವರ ಗುರುತಿನ ಚೀಟಿಯನ್ನು ಶಿಷ್ಟಾಚಾರದ ಅನ್ವಯ ಪರಿಶೀಲಿಸಿ ಯಾವುದೇ ಅಡೆತಡೆ ಇಲ್ಲದೆ ಪ್ರವೇಶ ಕಲ್ಪಿಸುವಂತೆ ಕೂಡ ದಿನೇಶ್ ಗೂಳಿಗೌಡ ಅವರು ಮನವಿ ಮಾಡಿದ್ದರು.

ಈ ಎಲ್ಲಾ ಮನವಿಗಳನ್ನು ಗಂಭೀರವಾಗಿ ಪರಿಗಣಿಸಿದ ಮುಖ್ಯಮಂತ್ರಿ, ಹಾಗೂ ಉಪಮುಖ್ಯಮಂತ್ರಿಗಳು ಸಾರಿಗೆ ಸಂಸ್ಥೆ ಬಸ್ ಗಳ ಮೇಲೆ ಗ್ಯಾರಂಟಿ ಯೋಜನೆಗಳ ಭಿತ್ತಿ ಪತ್ರ ಅಳವಡಿಸುವುದು, ಭತ್ಯೆ ಹೆಚ್ಚಳ ಹಾಗೂ ಜಿಲ್ಲಾ ತಾಲೂಕು ಸಮಿತಿಯ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸದಸ್ಯರು ವಿಧಾನಸೌಧ, ವಿಕಾಸಸೌಧ ಪ್ರವೇಶಿಸಲು ಅಗತ್ಯ ಕ್ರಮಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ