ಮುಂಬರುವ ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯ ಗೆಲವಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳೇ ಶ್ರೀರಕ್ಷೆಯಾಗಲಿವೆ ಎಂದು ಮಂಡ್ಯ ಜಿಲ್ಲಾ ಕಾಂಗ್ರೆಸ್ ಎಸ್ಸಿ ಎಸ್ಟಿ ವಿಭಾಗದ ಅಧ್ಯಕ್ಷ ಶ್ರೀಧರ್ ಹೇಳಿದರು.
ಮಂಡ್ಯನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜಿಲ್ಲಾ ಕಾಂಗ್ರೆಸ್ ಎಸ್ಸಿ, ಎಸ್ಟಿ ಸಮಿತಿ ಆಯೋಜಿಸಿದ್ದ ಲೋಕಸಭಾ ಚುನಾವಣೆ ಪೂರ್ವಭಾವಿ ಸಭೆಯಲ್ಲಿ ಅವರು ಪಾಲ್ಗೊಂಡು ಮಾತನಾಡಿದರು.
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಂಡ್ಯ ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗೆ ಕಾಂಗ್ರೆಸ್ ಎಸ್ಸಿ ಎಸ್ಟಿ ಘಟಕಗಳ ಪದಾಧಿಕಾರಿಗಳು ಪ್ರತಿ ಬೂತ್ಮಟ್ಟದಲ್ಲಿ ಶ್ರಮಿಸಲಿದ್ದಾರೆ, ರಾಜ್ಯ ಸರ್ಕಾರದ 5 ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಜಾಗೃತಿ ಮೂಡಿಸಿ, ಅಭ್ಯರ್ಥಿಗೆಲುವಿಗೆ ಆಶೀರ್ವಾದ ಮಾಡಿ ಎಂದು ಕೋರಲಾಗುವುದು ಎಂದು ತಿಳಿಸಿದರು.
ಪತ್ರಿ ಹಳ್ಳಿ, ನಗರ, ಪಟ್ಟಣ ವ್ಯಾಪ್ತಿಯಲ್ಲಿ ಬೂತ್ ಮಟ್ಟ ಹಾಗೂ ವಾರ್ಡ್ ಮಟ್ಟದಲ್ಲಿ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು ಇರುತ್ತಾರೆ, ಮತದಾರರಿಗೆ ಕಾಂಗ್ರೆಸ್ ಸರ್ಕಾರದ ಸಾಧನೆಗಳನ್ನು ಮನವರಿಕೆ ಮಾಡಿಸಿ, ಪಕ್ಷದ ಅಭ್ಯರ್ಥಿ ಗೆಲುವಿಗೆ ಮುಂದಾಗಬೇಕೆಂದರು.
ಸಭೆಯಲ್ಲಿ ಮಂಡ್ಯ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಿ.ಡಿ.ಗಂಗಾಧರ್, ಕಾರ್ಯಾಧ್ಯಕ್ಷ ಚಿದಂಬರ್, ಕೆಪಿಸಿಸಿ ಸದಸ್ಯೆ ವಿಜಯಲಕ್ಷ್ಮಿ ರಘುನಂದನ್, ಪ್ರೊ.ಚಂದ್ರಶೇಖರನ್, ಸುಂಡಹಳ್ಳಿ ಮಂಜುನಾಥ್, ಮಹದೇವಯ್ಯ ಹಾಗೂ ರಾಜಯ್ಯ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.




