ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದಲ್ಲಿ ನಡೆಯುತ್ತಿರುವ ಶಿವರಾತ್ರಿ ಜಾತ್ರಾ ಮಹೋತ್ಸವದ ಮಹಾ ರಥೋತ್ಸವದಲ್ಲಿ ಪಾಲ್ಗೊಳ್ಳಲು ತೆರಳಿದ್ದ ಮಂಡ್ಯ ಮೂಲದ ಐವರು ಕಾರು ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ಅಪಘಾತದಲ್ಲಿ ಸಾವಿಗೀಡಾಗಿರುವ ಘಟನೆ ಶನಿವಾರ ಬೆಳಿಗ್ಗೆ ಕೊಳ್ಳೇಗಾಲ ಸಮೀಪ ನಡೆದಿದೆ.
ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ಬಳಿಯ ಮುಖ್ಯರಸ್ತೆಯಲ್ಲಿ ಇಂದು ಬೆಳಗ್ಗೆ ಟಿಪ್ಪರ್ ಹಾಗೂ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಕಾರಿನಲ್ಲಿದ್ದ ಮೂವರು ಪುರುಷರು ಇಬ್ಬರು ಮಹಿಳೆಯರು ಮೃತಪಟ್ಟಿದ್ದು, ಅವರು ಮಂಡ್ಯ ಮೂಲದವರು ಎಂದು ಹೇಳಲಾಗುತ್ತಿದೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿಯಬೇಕಿದೆ.
ಅಪಘಾತ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.




