Wednesday, September 11, 2024

ಪ್ರಾಯೋಗಿಕ ಆವೃತ್ತಿ

ಗ್ರಾ.ಪಂ.ಸಮಸ್ಯೆ ಬಗೆಹರಿಸಲು ಸ್ಪಂದಿಸುವೆ : ದಿನೇಶ್ ಗೂಳೀಗೌಡ

ಗ್ರಾಮ ಪಂಚಾಯಿತಿಗಳಲ್ಲಿನ ಸಮಸ್ಯೆಗಳನ್ನು ತನ್ನ ಗಮನಕ್ಕೆ ತಂದರೇ ತಕ್ಷಣವೇ ಸ್ಪಂದಿಸಿ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ವಿಧಾನಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ತಿಳಿಸಿದರು.

ಮಳವಳ್ಳಿ ಪಟ್ಟಣದ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ಮಾತನಾಡಿದ ಅವರು, ಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಗ್ರಾಮ ಪಂಚಾಯಿತಿಗಳಿಗೆ ಭೇಟಿ ಕೊಟ್ಟು ಸಮಸ್ಯೆಗಳನ್ನು ಅರಿತು ಬಗೆಹರಿಸುತ್ತಿದ್ದೇನೆ.

ಸದನದಲ್ಲಿ ಜಿಲ್ಲೆಯ ರಾಗಿ ಖರೀದಿಯಲ್ಲಿನ ಸಮಸ್ಯೆ ಬಗ್ಗೆ,ಗ್ರಾಮ ಪಂಚಾಯಿತಿ ಸದಸ್ಯರ ವೇತನ ಹೆಚ್ಚಳ,ರಾಸಾಯನಿಕ ಕಾರ್ಖಾನೆಯಿಂದಾದ ಬೆಳೆ ಹಾನಿಗೆ ಪರಿಹಾರ ಸೇರಿದಂತೆ ಹಲವಾರು ಸಮಸ್ಯೆಗಳ ಬಗ್ಗೆ ಚರ್ಚೆ ಮಾಡಿದ್ದೇನೆಂದು ತಿಳಿಸಿದರು.

ಕಾಂಗ್ರೆಸ್ ಪಕ್ಷದ ಸದಸ್ಯತ್ವ ನೋಂದಣಿ ಕಾರ್ಯಕ್ರಮದಲ್ಲಿ ಮಳವಳ್ಳಿ ಮೀಸಲು ಕ್ಷೇತ್ರದಲ್ಲಿ 50 ಸಾವಿರಕ್ಕೂ ಹೆಚ್ಚು ಸದಸ್ಯತ್ವ ಮಾಡುವುದರ ಮೂಲಕ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಸದಸ್ಯತ್ವ ಪಡೆದ ಕೀರ್ತಿ ಪಡೆದಿದೆ.

ಸದಸ್ಯತ್ವ ನೋಂದಣಿಗೆ ಶ್ರಮಿಸಿದ ಮಾಜಿ ಸಚಿವ ಹಾಗೂ ಕೆಪಿಸಿಸಿ ಉಪಾಧ್ಯಕ್ಷ ಪಿ.ಎಂ ನರೇಂದ್ರಸ್ವಾಮಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆಂದು ತಿಳಿಸಿದರು.

ವಿಧಾನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಸ್ವಷ್ಟ ಬಹುಮತದೊಂದಿಗೆ ಅಧಿಕಾರ ಹಿಡಿಯುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.ನಾನು ಕೂಡ ಸಮಸ್ಯೆಗಳನ್ನು ಬಗೆಹರಿಸುವುದರ ಜೊತೆಗೆ ಕಾಂಗ್ರೆಸ್ ಪಕ್ಷ ಸಂಘಟನೆಗೆ ಕೈಜೋಡಿಸುವುದಾಗಿ ಹೇಳಿದರು.

ಮಾಜಿ ಸಚಿವ ಪಿ.ಎಂ ನರೇಂದ್ರಸ್ವಾಮಿ,ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ದೇವರಾಜ್‌, ಸುಂದರ್ ರಾಜ್,ಜಿ.ಪಂ.ಮಾಜಿ ಸದಸ್ಯರು ಹಾಗೂ ಕಾರ್ಯಕರ್ತರು ಹಾಜರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!