ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಕಲ್ಲಾರೇಪುರ ಗ್ರಾಮದ ಬುದ್ಧ ವಿಹಾರಕ್ಕೆ ಭೇಟಿ ನೀಡಿ, ಸತ್ಯ, ಶಾಂತಿ, ಕರುಣೆಯ ಸಂದೇಶ ಸಾರಿದ ಮಾನವತಾವಾದಿ ಬುದ್ಧನ ಪ್ರತಿಮೆಗೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪುಷ್ಪ ನಮನ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಕೆಪಿಸಿಸಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ.ಎಸ್. ಶಿವಣ್ಣರವರು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರೊಂದಿಗೆ ಪುಷ್ಪ ನಮನ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.