Tuesday, November 24, 2026

ಪ್ರಾಯೋಗಿಕ ಆವೃತ್ತಿ

ಮೌಢ್ಯ- ಕಂದಾಚಾರವನ್ನು ತಿರಸ್ಕರಿಸಿ, ಬಸವಾದಿ ಶರಣರನ್ನು ಅನುಸರಿಸಿ – ಸಿಎಂ ಸಿದ್ದರಾಮಯ್ಯ

ಮೌಢ್ಯಗಳನ್ನು ಜನರು ತಿರಸ್ಕರಿಸಿ ಬಸವಾದಿ ಶರಣರು ತಿಳಿಸಿರುವುದನ್ನು ಪಾಲನೆ ಮಾಡಬೇಕು. ವಿದ್ಯಾವಂತರಲ್ಲಿ ಕಂದಾಚಾರ ಹಾಗೂ ಮೌಢ್ಯತೆ ಇರುವುದು ವಿಷಾದನೀಯ ಸಂಗತಿ. ವೈಚಾರಿಕತೆ ಹಾಗೂ ವೈಜ್ಞಾನಿಕ ವಿದ್ಯೆ ಪ್ರತಿಯೊಬ್ಬರಿಗೂ ಸಿಗಬೇಕು ಎಂದು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ತಿಳಿಸಿದರು.

ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066ನೇಯ ಜಯಂತಿ ಮಹೋತ್ಸವದ ಸಮಾರೋಪ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಮಳವಳ್ಳಿಯಲ್ಲಿ ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066 ಜಯಂತಿ ಮಹೋತ್ಸವ ಕಾರ್ಯಕ್ರಮವನ್ನು ಭಾರತದ ರಾಷ್ಟ್ರ ಪತಿಗಳು ಉದ್ಘಾಟನೆ ನೆರವೇರಿಸಿದ್ದಾರೆ. ಈ ಜಯಂತಿ ಮಹೋತ್ಸವ ಎಲ್ಲಾ ತಾಲ್ಲೂಕುಗಳಲ್ಲಿ ನಡೆಯುತ್ತಿದ್ದು ಬಹಳ ದಿರ್ಘಕಾಲದಿಂದಲೂ ನಡೆಯುತ್ತಾ ಬಂದಿದೆ. ಮುಂದಿನ ವರ್ಷ ಗುಂಡ್ಲುಪೇಟೆಯಲ್ಲಿ ನಡೆಯುವ ಬಗ್ಗೆ ತಿರ್ಮಾನ ಮಾಡಲಾಗಿದ್ದು ಎಲ್ಲಾ ಕಾರ್ಯಕ್ರಮಗಳು ಅದ್ಧೂರಿಯಾಗಿ ಈ ಕಾರ್ಯಕ್ರಮ ಆಚರಣೆ ಮಾಡುತ್ತಾ ಬಂದಿದ್ದಾರೆ ಎಂದು ತಿಳಿಸಿದರು.

ಜಾತಿ ವ್ಯವಸ್ಥೆಯಿಂದ ಶಾಂತಿ ಮೂಡಿಬರುವುದಿಲ್ಲ

ನಮ್ಮ ಸಮಾಜದಲ್ಲಿ ಅನೇಕ ಜಾತಿಗಳು ಇರುವುದರಿಂದ ಸಮಾಜದಲ್ಲಿ ಅಸಮಾನತೆ ಇದೆ. ಜಾತಿ ವ್ಯವಸ್ಥೆಯಿಂದ ಶಾಂತಿ ಮೂಡಿಬರುವುದಿಲ್ಲ. ಈ ವಿಷಯವನ್ನು ಈ ಹಿಂದೆ ದಾರ್ಶನಿಕರು, ಬಸವವಾದಿ ಶರಣರು ಹೇಳುತ್ತಾ ಬಂದಿದ್ದಾರೆ. ಕುವೆಂಪು ಅವರು ಮನುಷ್ಯ ಸಮಾಜ ನಿರ್ಮಾಣ ಆಗಬೇಕು ಎಂದು ಹೇಳಿದ್ದರು. ಸಮಾಜದಲ್ಲಿ ಜನರ ನಡುವೆ ಪ್ರೀತಿ ಇರಬೇಕು. ಇದೇ ನಮ್ಮ ಸಂಸ್ಕೃತಿ ಆಗಿದೆ. ಅನೇಕ ಸಾಧು ಮುನಿಗಳು, ಖುಷಿಗಳು ಮನುಷ್ಯ ಮನುಷ್ಯ ನಡುವೆ ಪ್ರೀತಿಯಿಂದ ಇರಬೇಕು ಎಂದು ಹೇಳಿದ್ದಾರೆ‌. ದ್ವೇಷ ಮಾಡಬಾರದು. ಜಾತಿ ಹೋಗಬೇಕಾದರೆ ಸಾಮಾಜಿಕ ಹಾಗೂ ಆರ್ಥಿಕ ಶಕ್ತಿ ಬರಬೇಕು ಜಾತಿ ವ್ಯವಸ್ಥೆಗೆ ಚಲನೆ ಇಲ್ಲ. ಚಲನೆ ಸಿಗುವುದು ಆರ್ಥಿಕವಾಗಿ ಸಾಮಾಜಿಕವಾಗಿ ಶಕ್ತಿ ಬಂದರೆ ಮಾತ್ರ ಸಿಗುತ್ತದೆ ಎಂದು ಅವರು ಮುಖ್ಯಮಂತ್ರಿಗಳು ತಿಳಿಸಿದರು.

ಜಯಂತಿಗಳನ್ನು ಆಚರಣೆ ಮಾಡುತ್ತಿರುವುದು ಎಲ್ಲಾ ಒಗ್ಗೂಡಿ ಪ್ರೀತಿಯಿಂದ ಇರಬೇಕು ಎಂಬ ಉದ್ದೇಶದಿಂದ ಮಾತ್ರ ಎಂದು ಅವರು ಹೇಳಿದರು.

ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್. ಚೆಲುವರಾಯಸ್ವಾಮಿ ಅವರು ಮಾತನಾಡಿ ಮಳವಳ್ಳಿಯಲ್ಲಿ ಆದಿ ಜಗದ್ಗುರು ಶ್ರೀ ಶಿವರಾತ್ರೀಶ್ವರ ಶಿವಯೋಗಿಗಳವರ 1066 ನೇಮ ಜಯಂತಿ ಮಹೋತ್ಸವ ಕಾರ್ಯಕ್ರಮ ಅತ್ಯಂತ ಯಶಸ್ವಿಯಾಗಿ ಜಯಂತೋತ್ಸವ ನಡೆದಿದ್ದು ಎಲ್ಲರಿಗೂ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಶಿವಯೋಗಿಗಳು ನಾಡಿನ ಜನರನ್ನ ಒಗ್ಗೂಡಿಸಿ ಸೋದರತ್ವ ಬೆಳೆಸಿದವರು

ಈ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಹೆಚ್.ಸಿ.ಮಹಾದೇವಪ್ಪ ಮಾತನಾಡಿ ಸುತ್ತೂರು ಶ್ರೀ ಮಠ ಪ್ರತಿವರ್ಷ ಜಯಂತೋತ್ಸವ ಆಚರಣೆ ಮಾಡುತ್ತಿದೆ. ಶಿವಯೋಗಿಗಳು ನಾಡಿನ ಜನರನ್ನ ಒಗ್ಗೂಡಿಸಿ ಸೋದರತ್ವ ಬೆಳೆಸಿದವರು. ಮನುಷ್ಯ ಹುಟ್ಟಿದ ಮೇಲೆ ಧರ್ಮ, ಧರ್ಮವನ್ನು ಸರಿಯಾಗಿ ಅರ್ಥೈಹಿಸಿ ನಾವೆಲ್ಲರೂ ಒಂದೇ ರೀತಿ ಅನ್ನೋ ಮನೋಭಾವ ಮೂಡಿಸಿರುವುದೇ ಗುರಿ.ಶ್ರೀ ಮಠಕ್ಕೆ ಎಲ್ಲಾ ಪಕ್ಷ, ಎಲ್ಲಾ ಧರ್ಮೀಯರು ಬರುತ್ತಾರೆ. ಪ್ರಜಾಪ್ರಭುತ್ವ ನಡವಳಿಕೆ ಬಗ್ಗೆ ನಂಬಿಕೆ ಇದೆ. ಬಸವಣ್ಣ ಯಾರ ವಿರುದ್ಧ ಸೇಡುತೀರಿಸಿಕೊಳ್ಳಲ್ಲಿಲ್ಲ. ಡಾ ಬಿ.ಆರ್.ಅಂಬೇಡ್ಕರ್ ಬಾಲ್ಯದಲ್ಲೇ ನೋವು ಅನುಭವಿಸಿದರು. ಆದರೂ ಯಾರ ಬಗ್ಗೆಯೂ ದ್ವೇಷ ಮಾಡಿಲ್ಲ. ಶ್ರೀಗಳು ಮನುಷ್ಯರ ನಡುವೆ ಸೋದರತ್ವ ಬಿತ್ತುವ ಕೆಲಸ ಮಾಡಿದ್ದಾರೆ. ಜಯಂತೋತ್ಸವದಲ್ಲಿ ಎಲ್ಲಾ ಧರ್ಮೀಯರು ಸೇರಿದ್ದಾರೆ ಇದೇ ಒಗ್ಗೂಡೂವಿಕೆಯಾಗಿದ್ದು ಸುತ್ತೂರು ಶ್ರೀ ಮಠ ಮಹತ್ತರ ಕಾರ್ಯ ಮಾಡುತ್ತಿದೆ ಎಂದು ಅವರು ತಿಳಿಸಿದರು‌.

ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವವಾದಿಯಾಗಿದ್ದು ಬಡವರು, ದಲಿತರು, ಮಹಿಳೆಯರ ಎಲ್ಲಾ ಧರ್ಮೀಯರನ್ನ ಒಂದಾಗಿ ಕಾಣುತ್ತಾರೆ. ಅನ್ನಭಾಗ್ಯ, ಗ್ಯಾರಂಟಿ ಯೋಜನೆ ಕೊಟ್ಟು ದೊಡ್ಡ ಕ್ರಾಂತಿಕಾರಿಕ ಕಾರ್ಯ ಮಾಡಿದ್ದಾರೆ ಎಂದು ತಿಳಿಸಿದರು. ಎಲ್ಲಾ ಸಮುದಾಯವನ್ನು ಒಂದು ಕಡೆ ಸೇರಿ ಸಂದೇಶ ಸಾರುವ ಕೆಲಸ. ನಾವೆಲ್ಲರೂ ಒಂದೇ ಜಾತಿ ವಿನಾಶದ ಮೂಲಕ ಸಂದೇಶ ಸಾರಿದ್ದಾರೆ. ಈ ಮಹತ್ತರ ಕಾರ್ಯಕ್ರಮ ಯಶಸ್ವಿಯಾಗಿ ನಡೆದಿದೆ ಎಂದು ಅವರು ತಿಳಿಸಿದರು.

ಶ್ರಿ ವೀರ ಸಿಂಹಾಸನ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಿದ್ದರು. ಶ್ರೀಆದಿ ಚುಂಚನಗಿರಿ ಶಾಖಾಮಠದ ಸೌಮ್ಯನಾಥ, ರಾಜನಹಳ್ಳಿ ವಾಲ್ಮೀಕಿ ಪೀಠದ ಶ್ರೀಪ್ರಸನ್ನಾಂದಪುರಿ ಮಹಾಸ್ವಾಮಿ, ಕನಕಪುರದ ಡಾ.ಶ್ರೀ ಚನ್ನಬಸವ ಸ್ವಾಮಿ, ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗಸ್ವಾಮೀಗಳು ಕಾರ್ಯಕ್ರಮದಲ್ಲಿ ಇದ್ದರು.

ಮಳವಳ್ಳಿ ತಾಲ್ಲೂಕಿನ ಶಾಸಕರಾದ ಪಿ.ಎಂ. ನರೇಂದ್ರಸ್ವಾಮಿ ಅವರು ಕಾರ್ಯಕ್ರಮದಲ್ಲಿ ಸ್ವಾಗತಿಸಿದರು.  ಶಾಸಕರಾದ  ಎ.ಬಿ. ರಮೇಶ್ ಬಂಡಿಸಿದ್ದೇಗೌಡ, ಕೆ.ಎಂ. ಉದಯ್, ರವಿಕುಮಾರ್ ಗೌಡ, ಗಣೇಶ್ ಪ್ರಸಾದ್, ವಿಧಾನ ಪರಿಷತ್ ಸದಸ್ಯರಾದ ಡಾ. ಯತೀಂದ್ರ ಸಿದ್ದರಾಮಯ್ಯ, ವಿವೇಕಾನಂದ, ಮಧು ಮಾದೇಗೌಡ, ಮೈ ಶುಗರ್ ಕಾರ್ಖಾನೆಯ ಅಧ್ಯಕ್ಷ ಸಿ.ಡಿ.ಗಂಗಾಧರ್ ಹಾಗೂ ಇತರೆ ಜನಪ್ರತಿನಿಧಿಗಳು ಉಪಸ್ಥಿತರಿದ್ದರು‌.

ನಮ್ಮ ಸುದ್ದಿಗಳು ಇಷ್ಟವಾದರೆ ನುಡಿ ಕರ್ನಾಟಕ.ಕಾಂ (ಮಂಡ್ಯ ಡಿಜಿಟಲ್ ಮೀಡಿಯಾ) ಗೆ ದೇಣಿಗೆ ನೀಡಿ ಪ್ರೋತ್ಸಾಹಿಸಿ

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ