Saturday, May 4, 2024

ಪ್ರಾಯೋಗಿಕ ಆವೃತ್ತಿ

ಮಂಗಳೂರು |ವಿಷಾಹಾರ ಸೇವನೆಯಿಂದ 130 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು


  • ಮಂಗಳೂರಿನಲ್ಲಿ ವಿಷಾಹಾರ ಸೇವನೆಯಿಂದ 130 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು
  • ಕೆಲವು ವಿದ್ಯಾರ್ಥಿಗಳು ತಮ್ಮ ಹಾಸ್ಟೆಲ್‌ನ ಮೆಸ್‌ನಲ್ಲಿ ಆಹಾರ ಸೇವಿಸಿದ್ದಾರೆ ಎಂದು ವರದಿಯಾಗಿದೆ
  • ಅಸ್ವಸ್ಥ ವಿದ್ಯಾರ್ಥಿಗಳನ್ನು ನಗರದ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ

ಮಂಗಳೂರು ನಗರದ ಶಕ್ತಿನಗರದ ಸಿಟಿ ಕಾಲೇಜ್ ಆಫ್ ನರ್ಸಿಂಗ್ ನ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸೋಮವಾರ ತಡರಾತ್ರಿ ಇಲ್ಲಿನ ಶಕ್ತಿನಗರದಲ್ಲಿ ತಾವು ತಂಗಿದ್ದ ಹಾಸ್ಟೆಲ್‌ಗಳಲ್ಲಿ ಆಹಾರ ವಿಷಾಹಾರ ಸೇವನೆಯಿಂದ ಆರೋಗ್ಯದಲ್ಲಿ ಏರುಪೇರಾಗಿ ಅಸ್ವಸ್ಥರಾಗಿರುವ ಘಟನೆ ಸೋಮವಾರ ರಾತ್ರಿ ವರದಿಯಾಗಿದೆ.

‘ಫುಡ್ ಪಾಯಿಸನ್’ ಆಗಿ ಈ ರೀತಿ ಸಂಭವಿಸಿದೆ ಎಂದು ಪ್ರಾಥಮಿಕ ಮಾಹಿತಿಯಿಂದ ತಿಳಿದು ಬಂದಿದ್ದು, ಸಂಪೂರ್ಣ ವಿವರ ಇನ್ನಷ್ಟೇ ತಿಳಿದುಬರಬೇಕಿದೆ. ಅಸ್ವಸ್ಥಗೊಂಡಿರುವ ಎಲ್ಲ ವಿದ್ಯಾರ್ಥಿಗಳನ್ನು ನಗರದ ನಾನಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

“ವಿದ್ಯಾರ್ಥಿಗಳು ಆಹಾರ ಸೇವನೆಯ ಬಳಿಕ ಈ ರೀತಿ ಆಗಿದೆ ಎಂದು ವಿದ್ಯಾರ್ಥಿಗಳು ತಿಳಿಸಿದ್ದಾರೆ. ಕೆಲವರು ಉಸಿರಾಡಲೂ ಕಷ್ಟಪಡುತ್ತಿದ್ದಾರೆ. ಸುಮಾರು 50ರಷ್ಟು ವಿದ್ಯಾರ್ಥಿಗಳನ್ನು ಕುಂಟಿಕಾನದಲ್ಲಿರುವ ಏ ಜೆ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದೇನೆ” ಎಂದು ಮಾಹಿತಿ ನೀಡಿದ್ದಾರೆ.

ನಾನಾ ಆಸ್ಪತ್ರೆಗೆ ದಾಖಲು

ಅಂದಾಜು ಸುಮಾರು 137ರಷ್ಟು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆಂದು ತಿಳಿದುಬಂದಿದ್ದು, ನಗರದ ಕೆಎಂಸಿ, ಕಂಕನಾಡಿಯಲ್ಲಿರುವ ಫಾದರ್ ಮುಲ್ಲರ್ ಆಸ್ಪತ್ರೆ, ಮಂಗಳಾ ಆಸ್ಪತ್ರೆ ಸೇರಿದಂತೆ ನಾನಾ ಖಾಸಗಿ ಆಸ್ಪತ್ರೆಗಳಿಗೆ ತುರ್ತು ಚಿಕಿತ್ಸೆಗಾಗಿ ರವಾನಿಸಲಾಗಿದೆ ಎಂದು ತಿಳಿದುಬಂದಿದೆ. ಅಸ್ವಸ್ಥರಾದವರ ಪೈಕಿ ವಿದ್ಯಾರ್ಥಿನಿಯರೇ ಇದ್ದಾರೆಂದು ತಿಳಿದುಬಂದಿದೆ.

ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಆಸ್ಪತ್ರೆಗೆ ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಭೇಟಿ ನೀಡಿದ್ದಾರೆ. ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

“ಏ ಜೆ ಆಸ್ಪತ್ರೆಯಲ್ಲಿ 52, ಕೆಎಂಸಿ ಜ್ಯೋತಿಯಲ್ಲಿ 18, ಫಳ್ನೀರ್‌ನಲ್ಲಿರರುವ ಯೂನಿಟಿ ಆಸ್ಪತ್ರೆಯಲ್ಲಿ 14, ಸಿಟಿ ಆಸ್ಪತ್ರೆಯಲ್ಲಿ 08, ಮಂಗಳಾ ಆಸ್ಪತ್ರೆಯಲ್ಲಿ 03, ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ 42 ಮಂದಿ ಸೇರಿ ಒಟ್ಟು ಸದ್ಯ 137 ವಿದ್ಯಾರ್ಥಿಗಳನ್ನು ಸದ್ಯ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ” ಎಂದು ಮಂಗಳೂರು ನಗರ ಪೊಲೀಸ್ ಆಯುಕ್ತ ಎನ್ ಶಶಿಕುಮಾರ್ ಮಾಹಿತಿ ನೀಡಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!